
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ. ಪ್ರಸ್ತುತ ಮೌಲ್ಯಮಾಪನ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಮಂಡಳಿಯು ನಿಗದಿತ ವೇಳಾಪಟ್ಟಿಯ ಪ್ರಕಾರವೇ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ
ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಈ ಕೆಳಗಿನ ವೇದಿಕೆಗಳಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು:
ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಲಾಗಿನ್ ವಿವರಗಳಾದ ರೋಲ್ ನಂಬರ್, ಸ್ಕೂಲ್ ನಂಬರ್ ಮತ್ತು ಅಡ್ಮಿಟ್ ಕಾರ್ಡ್ ಐಡಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಯಾವುದೇ ಗೊಂದಲಗಳಿದ್ದಲ್ಲಿ ಅಧಿಕೃತ ವೆಬ್‌ಸೈಟ್ ಮಾತ್ರ ಗಮನಿಸಲು ಮಂಡಳಿ ತಿಳಿಸಿದೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ