AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು!

ಸಿಬಿಎಸ್‌ಇ 2026 ರಿಂದ 9ನೇ ತರಗತಿಗೆ ಹೊಸ ತ್ರಿಭಾಷಾ ನೀತಿಯನ್ನು ಜಾರಿಗೆ ತಂದಿದೆ. NEP 2020 ಅಡಿಯಲ್ಲಿ, ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ಭಾಷೆಗಳನ್ನು ಕಲಿಯಬೇಕು, ಕನಿಷ್ಠ ಎರಡು ಭಾರತೀಯ ಭಾಷೆಗಳಾಗಿರಬೇಕು. ಕರ್ನಾಟಕದ ಮಕ್ಕಳಿಗೆ ಕನ್ನಡ ಕಲಿಯಲು ಇದು ಉತ್ತಮ ಅವಕಾಶ. 10ನೇ ತರಗತಿಯಲ್ಲಿ ಮೂರನೇ ಭಾಷೆಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲ, ಇದು ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡುತ್ತದೆ.

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 16, 2026 | 7:12 PM

Share

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ. ಈ ಮೂಲಕ ಸಿಬಿಎಸ್​​​​​ಇ ಮಕ್ಕಳಿಗೂ ಸುಲಭವಾಗಿ ಕನ್ನಡ ಕಲಿಯಬಹುದು.

ವಿದ್ಯಾರ್ಥಿಗಳು ಕಲಿಯುವ ಒಟ್ಟು ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಭಾಷೆಗಳಾಗಿರಬೇಕು. 9ನೇ ತರಗತಿಯಿಂದ ಮೂರು ಭಾಷೆಗಳ ಕಲಿಕೆ ಕಡ್ಡಾಯವಾಗಿದ್ದರೂ, 10ನೇ ತರಗತಿಯಲ್ಲಿ ಮೂರನೇ ಭಾಷೆಗೆ (R3) ಯಾವುದೇ ಪ್ರಮುಖ ಬೋರ್ಡ್ ಪರೀಕ್ಷೆ ಇರುವುದಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ. ಇದು ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲಿದೆ.

ಇದನ್ನೂ ಓದಿ: 61ನೇ ವಯಸ್ಸಿನಲ್ಲಿ 10ನೇ ತರಗತಿ ಪಾಸ್; 650ಕ್ಕೆ 500 ಅಂಕ ಪಡೆದ ಮಹಿಳೆ

ಮೇ 15 ರಂದು ಹೊರಡಿಸಲಾದ ಅಧಿಕೃತ ಸುತ್ತೋಲೆಯಲ್ಲಿ, ಬಹುಭಾಷಾ ಜ್ಞಾನ ಮತ್ತು ಭಾರತೀಯ ಭಾಷೆಗಳ ಸಂರಕ್ಷಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಈ ಹೊಸ ಬದಲಾವಣೆಯು ಸಿಬಿಎಸ್‌ಇ ಶಾಲೆಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಯೋಜನೆಯನ್ನು ಮರುರೂಪಿಸಿಕೊಳ್ಳುವಂತೆ ಮಾಡಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ