
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ತನ್ನ ಎಲ್ಲಾ ಶಾಲೆಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹೊಸ ಮಾರ್ಗಸೂಚಿಯು 1 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದೆ. ಸಾಮಾನ್ಯವಾಗಿ ಶಾಲೆಗಳು ಪ್ರತಿ ವಿಭಾಗದಲ್ಲಿ 40 ವಿದ್ಯಾರ್ಥಿಗಳನ್ನು ಹೊಂದಿರಬೇಕು, ಆದರೆ ಕೆಲವು ಷರತ್ತುಗಳ ಅಡಿಯಲ್ಲಿ ಶಾಲೆಗಳು 45 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಬಹುದು.
1 ರಿಂದ 12 ನೇ ತರಗತಿಯವರೆಗೆ ಪ್ರತಿ ವಿಭಾಗದಲ್ಲಿ ಗರಿಷ್ಠ 40 ವಿದ್ಯಾರ್ಥಿಗಳು ಇರಬೇಕು ಎಂದು ಸಿಬಿಎಸ್‌ಇ ಹೇಳಿದೆ. ಇದು ಶಿಕ್ಷಕರು ಪ್ರತಿ ವಿದ್ಯಾರ್ಥಿಯತ್ತ ಗಮನ ಹರಿಸಬಹುದಾದ ಅನುಕೂಲಕರ ಕಲಿಕಾ ವಾತಾವರಣವನ್ನು ಖಚಿತಪಡಿಸುತ್ತದೆ. ಆದಾಗ್ಯೂ, ವಿಶೇಷ ಸಂದರ್ಭಗಳಲ್ಲಿ ಮಾತ್ರ 45 ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?
ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ