AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಸಿಇಟಿ ಪರೀಕ್ಷೆ ಗೊಂದಲ ಪರಿಶೀಲನೆಗೆ ರಾಜ್ಯ ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚನೆ ಮಾಡಿತ್ತು. ಇದೀಗ ಆ ತಜ್ಞರ ಸಮಿತಿಯೂ ಪರೀಕ್ಷೆ ಗೊಂದಲ ಕುರಿತಾಗಿ ವರದಿ ಸಲ್ಲಿಸಿದೆ.

CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Apr 27, 2024 | 3:10 PM

Share

ಬೆಂಗಳೂರು, ಏಪ್ರಿಲ್ 27: ಸಿಇಟಿ ಪರೀಕ್ಷೆ (CET Exam) ಗೊಂದಲ ಪರಿಶೀಲನೆಗೆ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ಇತ್ತೀಚೆಗೆ ರಚಿಸಿತ್ತು. ಇದೀಗ ತಜ್ಞರ ಸಮಿತಿ ಸಿಇಟಿ ಪರೀಕ್ಷೆ ಗೊಂದಲ ಕುರಿತಾಗಿ ವರದಿ ಸಲ್ಲಿಸಿದೆ. ವರದಿ ಆಧರಿಸಿ ಮುಂದಿನ ವಾರ ಸರ್ಕಾರ (Govt) ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಿಇಟಿ ಸಂಬಂಧ ಆಕ್ಷೇಪ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಆಕ್ಷೇಪ ಹಿನ್ನೆಲೆ ತಜ್ಞರ ವರದಿ ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಈ ಗೊಂದಲ ಪರಿಶೀಲನೆಗೆ ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ: CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕೆಇಎ ಎಡವಟ್ಟು

ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಬೆಂಗಳೂರಿನಲ್ಲಿಯೇ 167 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. 737 ವೀಕ್ಷಕರು, 737 ವಿಶೇಷ ಜಾಗೃತ ದಳದ ಸದಸ್ಯರು 737 ಪ್ರಶ್ನೆಪತ್ರಿಕಾ ಪಾಲಕರು, 14568 ಕೊಠಡಿ ಮೇಲ್ವಿಚಾರಕರು 20300 ಅಧಿಕಾರಿ ವರ್ಗದವರ ನಿಯೋಜನೆ ಮಾಡಲಾಗಿತ್ತು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆದಿತ್ತು.

ಈ ವರ್ಷ 3,49637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: CET ಪರೀಕ್ಷೆಯಲ್ಲಿ 51 ಪಠ್ಯೇತರ ಪ್ರಶ್ನೆಗಳು: ಅಭ್ಯರ್ಥಿಗಳಿಗೆ ನೀಡಿದ್ದು 2023ರ ಪ್ರಶ್ನೆ ಪತ್ರಿಕೆ?

ಇನ್ನು ಸಾಮಾನ್ಯವಾಗಿ ಪ್ರತಿ ವರ್ಷ ಪರೀಕ್ಷೆ ವೇಳೆ ಮೂರು ಸೆಟ್​ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗುತ್ತದೆ. ಅದೇ ರೀತಿ 2023ನೇ ಸಾಲಿನಲ್ಲಿ ತಯಾರಿಸಿದ್ದ ಯಾವುದೋ ಒಂದು ಸೆಟ್​ ಪ್ರಶ್ನೆ ಪತ್ರಿಕೆಯನ್ನೇ ಈ ಬಾರಿಯ ಪರೀಕ್ಷೆಗೂ ಪ್ರಾಧಿಕಾರ ನೀಡಿತ್ತು ಎಂಬ ಅನುಮಾನ ಕೂಡ ಮೂಡಿತ್ತು. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಉಂಟಾದ ಸಂವಹನ ಕೊರತೆಯೂ ಒಂದು ಕಾರಣವಾಗಿದೆ ಎನ್ನಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:07 pm, Sat, 27 April 24

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್