CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Apr 28, 2024 | 10:57 PM

ಬೆಂಗಳೂರು, ಏಪ್ರಿಲ್​ 28: ಸಿಇಟಿ ಪರೀಕ್ಷೆ (CET Exam) ಗೊಂದಲ ಪರಿಶೀಲನೆಗೆ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿ ಇತ್ತೀಚೆಗೆ ವರದಿ ಸಲ್ಲಿಸಿತ್ತು. ಇದೀಗ ತಜ್ಞರ ಸಮಿತಿಯ ವರದಿ ಅನ್ವಯ ಕ್ರಮಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದ್ದು, ಮರು ಸಿಇಟಿ ಪರೀಕ್ಷೆ ನಡೆಸದಂತೆ ವರದಿ ಸಲ್ಲಿಸಿದೆ. ಔಟ್ ಆಫ್ ಸಿಲೆಬಸ್‌ನ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಆಧಾರದಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲ ಉಪನ್ಯಾಸಕರು ಆರೋಪ ಮಾಡಿದ್ದರು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಈ ಗೊಂದಲ ಪರಿಹರಿಸಲು ಸರ್ಕಾರ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿಯೊಂದನ್ನು ಇತ್ತೀಚೆಗೆ ರಚಿಸಿತ್ತು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು

ಕೆಇಎ ಮಾಡಿರುವ ಈ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಕೂಡ ಕಂಗಲಾಗಿದ್ದರು. ತಮ್ಮ ಮಕ್ಕಳ ಭವಿಷ್ಯದ ಕುರಿತು ಅವರು ಚಿಂತಿತರಾಗಿರುವುದು ಕಂಡು ಬಂದಿತ್ತು. ಹಲವಾರು ವಿಷಯಗಳ ಕೈ ಬಿಟ್ಟಿರುವ ಪಠ್ಯಗಳ ಮತ್ತು ವಿಷಯಗಳ ಕುರಿತು ಪ್ರಶ್ನೆಗಳನ್ನ ಕೇಳುವುದು ಏನು ಅಗತ್ಯವಿತ್ತು. ಇದು ನಮ್ಮ ಮಕ್ಕಳ ಭವಿಷ್ಯದ ಮೇಲೆ ಮಾನಸಿಕ ಸೀಮಿತದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಪೋಷಕರು ಹೊರಹಾಕಿದ್ದರು. ಈ ಕುರಿತು ಟಿವಿ 9 ಡಿಜಿಟಲ್​​ನೊಂದಿಗೆ ಮಾತನಾಡಿದ್ದ ಹಲವಾರು ಪೋಷಕರು, ಸಿಟಿಇ ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳ ಕುರಿತು ತೀವ್ರ ಆತಂಕವನ್ನು ಹೊರ ಹಾಕಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 pm, Sun, 28 April 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ