CET Exam: ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿಗೆ ಮತ್ತೊಂದು ಅವಕಾಶ: ನಿರ್ದೇಶಕಿ ರಮ್ಯಾ ಮಾಹಿತಿ
ಸಿಇಟಿ ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮತ್ತೊಂದು ಅವಕಾಶ ನೀಡಲಾಗಿದೆ.
ಬೆಂಗಳೂರು: ಸಿಇಟಿ (CET Exam) ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮತ್ತೊಂದು ಅವಕಾಶ ನೀಡಲಾಗಿದೆ. ಮೇ 11ರ ಬೆಳಿಗ್ಗೆ 8 ಗಂಟೆಯಿಂದ ಮೇ 13ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತು ಶುಲ್ಕ ಪಾವತಿಸಲು ಸಂಜೆ 6 Education Newsಗಂಟೆವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳಿಗೆ 2023ರಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ. ಆಸಕ್ತ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಮತ್ತಿತರ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಮೇ 20 ಹಾಗೂ 21ರಂದು ಸಿಇಟಿ ಪರೀಕ್ಷೆ
ಮೇ 20 ಹಾಗೂ 21ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರೂ ಕೂಡ ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ತಿಳಿಸಿತ್ತು. ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ‘ಟಿವಿ9’ಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ: CET Exam 2023: ಪೂರಕ ಪರೀಕ್ಷೆಗೆ ಬರೆಯುವವರೂ ಸಿಇಟಿ ಪರೀಕ್ಷೆ ಬರೆಯಬೇಕು; ಕೆಇಎ
ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದಿದ್ದರು.
ಇದನ್ನೂ ಓದಿ: NEET UG 2023: ಇಂದು ದೇಶಾದ್ಯಂತ NEET ಪರೀಕ್ಷೆ; ಪರೀಕ್ಷಾ ಕೊಠಡಿಯಲ್ಲಿ ಶೂಗಳನ್ನು ಅನುಮತಿಸಲಾಗಿದೆಯೇ?
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವವರು ಸಿಇಟಿ ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ವಿದ್ಯಾರ್ಥಿಗಳಾಗಲೀ, ಪೋಷಕರಾಗಲೀ ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದರು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.