ಸಿಇಟಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ KEA: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆ 4ರವರೆಗೆ ಗಡುವು!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂಜಿನಿಯರಿಂಗ್, ವೈದ್ಯಕೀಯ ಹಾಗೂ ಇತರ ಸಿಇಟಿ ಕೋರ್ಸ್‌ಗಳ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದೆ. ಆಕ್ಷೇಪಣೆಗಳಿದ್ದಲ್ಲಿ ನಾಳೆ ಸಂಜೆ 4 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಬಹುದು. ಇದು ತಾತ್ಕಾಲಿಕವಾಗಿದ್ದು, ಅಂತಿಮ ಫಲಿತಾಂಶದ ನಂತರವೇ ಪ್ರವೇಶ ಸಾಧ್ಯ ಎಂದು KEA ತಿಳಿಸಿದೆ.

ಸಿಇಟಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ KEA: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆ 4ರವರೆಗೆ ಗಡುವು!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Image Credit source: x.com/KEA_karnataka
Edited By:

Updated on: Aug 23, 2026 | 10:15 PM

ಬೆಂಗಳೂರು, ಆಗಸ್ಟ್​ 23: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ ಸಿಇಟಿ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ (Medical) ಮತ್ತು ದಂತ ವೈದ್ಯಕೀಯ (Dental) ಕೋರ್ಸ್‌ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ಪ್ರಕಟಿಸಿದೆ.

ಸಿಇಟಿ ತಾತ್ಕಾಲಿಕ ಫಲಿತಾಂಶ ಪ್ರಕಟ

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ, ‘ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿ-ಫಾರ್ಮಾ, ಡಿ-ಫಾರ್ಮಾ, ಬಿಪಿಟಿ, ಬಿಪಿಒ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಯ ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನೂ ಪ್ರಕಟಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್​

ಸದ್ಯ ಪ್ರಕಟವಾಗಿರುವ ತಾತ್ಕಾಲಿಕ ಫಲಿತಾಂಶಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆ ಹಾಗೂ ಆಧಾರಗಳ ಸಮೇತ ಆಗಸ್ಟ್​ 24ರ ಸಂಜೆ 4 ಗಂಟೆಯೊಳಗೆ ಅಧಿಕೃತ ಇ-ಮೇಲ್ ವಿಳಾಸಕ್ಕೆ (keauthority_ka@nic.in) ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Medical courses: ಕೆಇಎ ವೈದ್ಯಕೀಯ ಪ್ರವೇಶಾತಿ; ಸಿಇಟಿ ಅರ್ಜಿಗೆ ನೀಟ್ ರೋಲ್ ನಂಬರ್ ಸೇರಿಸಲು ಆ.03 ಕೊನೆ ದಿನ

ಇನ್ನು ಇದು ಕೇವಲ ತಾತ್ಕಾಲಿಕ ಫಲಿತಾಂಶವಾಗಿರುವುದರಿಂದ ವಿದ್ಯಾರ್ಥಿಗಳು ಸದ್ಯ ಸೀಟು ಹಂಚಿಕೆಯಾಗಿರುವ ಕಾಲೇಜುಗಳಿಗೆ ತೆರಳಿ ನೇರ ಪ್ರವೇಶ ಪಡೆಯುವಂತಿಲ್ಲ. ನಿಗದಿತ ಅವಧಿಯೊಳಗೆ ಸ್ವೀಕೃತವಾಗುವ ಎಲ್ಲಾ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವಷ್ಟೇ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಕೆಇಎ ಪ್ರಕಟಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us