CET Result 2024: ಕರ್ನಾಟಕ ಸಿಇಟಿ ಫಲಿತಾಂಶ ಯಾವಾಗ? ಸ್ಪಷ್ಟನೆ ನೀಡಿದ ಕೆಇಎ

CET Result : ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇದೀಗ ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಬೇಕಿದೆ, ಇದರ ಮಧ್ಯೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಿಸಲ್ಟ್​ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಿಇಟಿ ಪರೀಕ್ಷೆ ರಿಸಲ್ಟ್ ಯಾವಾಗ? ಎನ್ನುವ ಬಗ್ಗೆ ಸ್ಪಷ್ಟನೆ ನಿಡಿದ್ದಾರೆ.

CET Result 2024: ಕರ್ನಾಟಕ ಸಿಇಟಿ ಫಲಿತಾಂಶ ಯಾವಾಗ? ಸ್ಪಷ್ಟನೆ ನೀಡಿದ ಕೆಇಎ
Follow us
ರಮೇಶ್ ಬಿ. ಜವಳಗೇರಾ
|

Updated on: May 20, 2024 | 3:16 PM

ಬೆಂಗಳೂರು, (ಮೇ 20): ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಈ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು (Karnataka CET Result) ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಂದು ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಸತ್ಯಕ್ಕೆ ದೂರವಾದುದು. ದ್ವಿತೀಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇನ್ನು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ ಮೇ 30ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಇದಾದ ಬಳಿಕ ಸಿಇಟಿ ರಿಸಲ್ಟ್​ ಪ್ರಕಟವಾಗಲಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ