AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISCE Results 2025: ಐಸಿಎಸ್​ಇ 10ನೇ, ಐಎಸ್​ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಆನ್​ಲೈನ್​ನಲ್ಲಿ ರಿಸಲ್ಟ್​ ನೋಡುವುದು ಹೇಗೆ?

ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಇಂದು ಐಸಿಎಸ್ಇ 10ನೇ ಮತ್ತು ಐಎಸ್ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು cisce.org ಮತ್ತು results.cisce.org ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಅಥವಾ ಆನ್​ಲೈನ್​ಲ್ಲಿ ಯಾವ ರೀತಿ ಫಲಿತಾಂಶ ನೋಡಬೇಕು ಎಂಬ ಮಾಹಿತಿ ಇಲ್ಲಿದೆ.

CISCE Results 2025: ಐಸಿಎಸ್​ಇ 10ನೇ, ಐಎಸ್​ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಆನ್​ಲೈನ್​ನಲ್ಲಿ ರಿಸಲ್ಟ್​ ನೋಡುವುದು ಹೇಗೆ?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 30, 2025 | 1:26 PM

Share

ಬೆಂಗಳೂರು, ಏಪ್ರಿಲ್ 30: ಐಸಿಎಸ್​ಇ 10ನೇ ತರಗತಿ ಮತ್ತು ಐಎಸ್​ಸಿ (ISC) 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) ಪ್ರಕಟಿಸಿದೆ. ಆ ಮೂಲಕ ಈ ಭಾರಿ ಕೂಡ SSLC, PUC ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಸದ್ಯ ಐಸಿಎಸ್‌ಇಯ ಅಧಿಕೃತ ವೆಬ್‌ಸೈಟ್ cisce.orgನಲ್ಲಿ ಫಲಿತಾಂಶ ಲಭ್ಯವಿದ್ದು, results.cisce.org ಈ ವೆಬ್‌ಸೈಟ್‌ನಲ್ಲೂ ಫಲಿತಾಂಶ ನೋಡಲು ಅವಕಾಶ ನೀಡಲಾಗಿದೆ.

ಭಾರತದಾದ್ಯಂತ ನೂರಾರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಫಲಿತಾಂಶ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​ ನೀಡಲಾಗಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಒಟ್ಟಾರೆ ಶೇ. 99.09 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದು, 12ನೇ ತರಗತಿ ಪರೀಕ್ಷೆಯಲ್ಲಿ ಶೇ 99.02 ರಷ್ಟು ಮಕ್ಕಳು ಉತ್ತೀರ್ಣ ಆಗಿದ್ದಾರೆ.

ಇದನ್ನೂ ಓದಿ: Karnataka SSLC Results 2025: ಮೇ 3ರಂದು ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್​ಲೈನ್​ನಲ್ಲಿ SSLC Result ನೋಡುವುದು ಹೇಗೆ?

ಇದನ್ನೂ ಓದಿ
Image
KEA ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ವಿದ್ಯಾರ್ಥಿಗಳಿಂದ ರೂಲ್ಸ್ ಬ್ರೇಕ್
Image
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
Image
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
Image
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ

ಸದ್ಯ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಟಾಪರ್‌ಗಳ ಹೆಸರನ್ನು ಪ್ರಕಟಿಸಲಿದೆ. 12ನೇ ತರಗತಿಯ ಐಎಸ್‌ಸಿ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5 ರವರೆಗೆ ನಡೆದರೆ, 10ನೇ ತರಗತಿಯ ಐಸಿಎಸ್‌ಇ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆದಿದ್ದವು. ಈ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ಅಧಿಕೃತ ವೆಬ್​ಸೈಟ್​ಗಳಾದ cisce.org ಅಥವಾ results.cisce.org ಗೆ ಭೇಟಿ ನೀಡಬೇಕು.
  • ಐಸಿಎಸ್​ಇ 10ನೇ ಫಲಿತಾಂಶ 2025 ಅಥವಾ ಐಎಸ್​ಸಿ 12ನೇ ಫಲಿತಾಂಶ 2025 ಮೇಲೆ ಕ್ಲಿಕ್ ಮಾಡಬೇಕು.
  • ಶಾಲೆ ವತಿಯಿಂದ ನೀಡಿರು ವಿಶಿಷ್ಟ ಐ.ಡಿ, ನೋಂದಣಿ ಸಂಖ್ಯೆ ಮತ್ತು ಕ್ಯಾಪ್ಚಾವನ್ನು ನಮೂದಿಸಬೇಕು.
  • ಬಳಿಕ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
  • ಅಲ್ಲಿಯೇ ವೀಕ್ಷಿಸಬಹುದು ಅಥವಾ ಡೌನ್‌ಲೋಡ್ ಮಾಡಿಕೊಳ್ಳಬಹುದು.

ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 33% ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು. ಮರುಪರಿಶೀಲನಾ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಮೇ 4 ರ ನಂತರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ಶಾಲೆ, ವಿಷಯವಾರು ಅಂಕಗಳು ಮತ್ತು ಅಂತಿಮ ಫಲಿತಾಂಶ ಒಳಗೊಂಡಿರುತ್ತದೆ. ಯಾವುದೇ ವ್ಯತ್ಯಾಸಗಳಿದ್ದಲ್ಲಿ ತಕ್ಷಣ ಶಾಲಾ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: CBSE 10th Result 2025: ಮೇ ತಿಂಗಳ ಎರಡನೇ ವಾರದಲ್ಲಿ CBSE ಫಲಿತಾಂಶ ಪ್ರಕಟ ಸಾಧ್ಯತೆ

ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಫಲಿತಾಂಶದ ವಿಚಾರದಲ್ಲಿ ನಿರಂತರವಾಗಿ ಯಶಸ್ಸನ್ನು ಕಾಯ್ದುಕೊಂಡಿದೆ. 2024 ರಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾವಾರು 99.47% ರಷ್ಟಿದ್ದು, ಹುಡುಗಿಯರು ಹುಡುಗರಿಗಿಂತ ಮೇಲುಗೈ ಸಾಧಿಸಿದ್ದರು. 2023 ರಲ್ಲಿ ಕೂಡ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದು, ಒಟ್ಟಾರೆ 98.94% ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:15 pm, Wed, 30 April 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ