ಬೆಂಗಳೂರು, ಏಪ್ರಿಲ್ 30: ಐಸಿಎಸ್ಇ 10ನೇ ತರಗತಿ ಮತ್ತು ಐಎಸ್ಸಿ (ISC) 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) ಪ್ರಕಟಿಸಿದೆ. ಆ ಮೂಲಕ ಈ ಭಾರಿ ಕೂಡ SSLC, PUC ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಸದ್ಯ ಐಸಿಎಸ್‌ಇಯ ಅಧಿಕೃತ ವೆಬ್‌ಸೈಟ್ cisce.orgನಲ್ಲಿ ಫಲಿತಾಂಶ ಲಭ್ಯವಿದ್ದು, results.cisce.org ಈ ವೆಬ್‌ಸೈಟ್‌ನಲ್ಲೂ ಫಲಿತಾಂಶ ನೋಡಲು ಅವಕಾಶ ನೀಡಲಾಗಿದೆ.
ಭಾರತದಾದ್ಯಂತ ನೂರಾರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಫಲಿತಾಂಶ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಒಟ್ಟಾರೆ ಶೇ. 99.09 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದು, 12ನೇ ತರಗತಿ ಪರೀಕ್ಷೆಯಲ್ಲಿ ಶೇ 99.02 ರಷ್ಟು ಮಕ್ಕಳು ಉತ್ತೀರ್ಣ ಆಗಿದ್ದಾರೆ.
ಸದ್ಯ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಟಾಪರ್‌ಗಳ ಹೆಸರನ್ನು ಪ್ರಕಟಿಸಲಿದೆ. 12ನೇ ತರಗತಿಯ ಐಎಸ್‌ಸಿ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5 ರವರೆಗೆ ನಡೆದರೆ, 10ನೇ ತರಗತಿಯ ಐಸಿಎಸ್‌ಇ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆದಿದ್ದವು. ಈ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 33% ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು. ಮರುಪರಿಶೀಲನಾ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಮೇ 4 ರ ನಂತರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ಶಾಲೆ, ವಿಷಯವಾರು ಅಂಕಗಳು ಮತ್ತು ಅಂತಿಮ ಫಲಿತಾಂಶ ಒಳಗೊಂಡಿರುತ್ತದೆ. ಯಾವುದೇ ವ್ಯತ್ಯಾಸಗಳಿದ್ದಲ್ಲಿ ತಕ್ಷಣ ಶಾಲಾ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: CBSE 10th Result 2025: ಮೇ ತಿಂಗಳ ಎರಡನೇ ವಾರದಲ್ಲಿ CBSE ಫಲಿತಾಂಶ ಪ್ರಕಟ ಸಾಧ್ಯತೆ
ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಫಲಿತಾಂಶದ ವಿಚಾರದಲ್ಲಿ ನಿರಂತರವಾಗಿ ಯಶಸ್ಸನ್ನು ಕಾಯ್ದುಕೊಂಡಿದೆ. 2024 ರಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾವಾರು 99.47% ರಷ್ಟಿದ್ದು, ಹುಡುಗಿಯರು ಹುಡುಗರಿಗಿಂತ ಮೇಲುಗೈ ಸಾಧಿಸಿದ್ದರು. 2023 ರಲ್ಲಿ ಕೂಡ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದು, ಒಟ್ಟಾರೆ 98.94% ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದರು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:15 pm, Wed, 30 April 25