AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ನೇ ತರಗತಿ NCERT ಪಠ್ಯಕ್ರಮದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ

ಅಧ್ಯಾಯವು ರಾಷ್ಟ್ರೀಯ ಯುದ್ಧ ಸ್ಮಾರಕದ (NWM) ಇತಿಹಾಸ, ಮಹತ್ವ ಮತ್ತು ಪರಿಕಲ್ಪನೆಯನ್ನು ಎತ್ತಿ ತೋರಿಸುತ್ತದೆ' ಎಂದು ಸಚಿವಾಲಯ ಹೇಳಿದೆ.

7 ನೇ ತರಗತಿ NCERT ಪಠ್ಯಕ್ರಮದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ
ರಾಷ್ಟ್ರೀಯ ಯುದ್ಧ ಸ್ಮಾರಕ
ನಯನಾ ಎಸ್​ಪಿ
|

Updated on: Aug 31, 2023 | 6:55 PM

Share

NCERT ಪಠ್ಯಕ್ರಮದ ಭಾಗವಾಗಿ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ‘ನಮ್ಮ ಕೆಚ್ಚೆದೆಯ ಸೈನಿಕರಿಗೆ ಗೌರವ’ ಎಂಬ ಶೀರ್ಷಿಕೆಯ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ. ಈ ಉಪಕ್ರಮವನ್ನು ರಕ್ಷಣಾ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯ ಜಂಟಿಯಾಗಿ ಕೈಗೊಳ್ಳುತ್ತಿದೆ. ಶಾಲಾ ಮಕ್ಕಳಲ್ಲಿ ದೇಶಭಕ್ತಿ, ಕರ್ತವ್ಯ ನಿಷ್ಠೆ, ಧೈರ್ಯ ಮತ್ತು ತ್ಯಾಗದ ಮೌಲ್ಯಗಳನ್ನು ಬೆಳೆಸುವುದು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಈ ಉಪಕ್ರಮದ ಉದ್ದೇಶವಾಗಿದೆ ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಧ್ಯಾಯವು ರಾಷ್ಟ್ರೀಯ ಯುದ್ಧ ಸ್ಮಾರಕದ (NWM) ಇತಿಹಾಸ, ಮಹತ್ವ ಮತ್ತು ಪರಿಕಲ್ಪನೆಯನ್ನು ಹೈಲೈಟ್ ಮಾಡುತ್ತದೆ. “ಸ್ವಾತಂತ್ರ್ಯದ ನಂತರ ರಾಷ್ಟ್ರದ ಸೇವೆಯಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿಗಳು ಮಾಡಿದ ಅತ್ಯುನ್ನತ ತ್ಯಾಗದ ಬಗ್ಗೆಯೂ ಇದು ಮಾತನಾಡಲಿದೆ” ಎಂದು ಪ್ರಕಟಣೆ ತಿಳಿಸಿದೆ.

ಈ ಅಧ್ಯಾಯವನ್ನು ಪರಸ್ಪರ ಪತ್ರಗಳನ್ನು ಹಂಚಿಕೊಳ್ಳುವ ಇಬ್ಬರು ಸ್ನೇಹಿತರ ನಡುವಿನ ಸಂವಾದವಾಗಿ ಪ್ರದರ್ಶಿಸಲಾಗುತ್ತಿದೆ, ಧೈರ್ಯಶಾಲಿಗಳು ಮಾಡಿದ ತ್ಯಾಗದಿಂದಾಗಿ ಅವರು ಅನುಭವಿಸುವ ಸ್ವಾತಂತ್ರ್ಯಕ್ಕಾಗಿ ಕೃತಜ್ಞತೆಯ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. “ಐಕಾನಿಕ್ ಸ್ಮಾರಕಕ್ಕೆ ಭೇಟಿ ನೀಡಿದಾಗ ಮಕ್ಕಳ ಮನಸ್ಸು ಮತ್ತು ಹೃದಯದಲ್ಲಿ ಉಂಟಾಗುವ ಆಳವಾದ ಭಾವನಾತ್ಮಕ ಪ್ರಭಾವ ಮತ್ತು ಸಂಪರ್ಕವನ್ನು ಎನ್‌ಸಿಇಆರ್‌ಟಿಯ ಲೇಖಕರು ಸೃಜನಾತ್ಮಕವಾಗಿ ಹೊರತಂದಿದ್ದಾರೆ” ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: 10ನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ 2023ರ ಟಾಪ್ ಉಚಿತ ಆನ್‌ಲೈನ್ ಕೋರ್ಸ್‌ಗಳ ಪಟ್ಟಿ

ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25, 2019 ರಂದು ನವದೆಹಲಿಯಲ್ಲಿ ಸ್ಥಾಪಿಸಿದರು. “ಜನರಲ್ಲಿ ತ್ಯಾಗ ಮತ್ತು ರಾಷ್ಟ್ರೀಯ ಮನೋಭಾವವನ್ನು ಬೆಳೆಸಲು ಮತ್ತು ರಾಷ್ಟ್ರವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಸೂಕ್ತವಾದ ಗೌರವವನ್ನು ಸಲ್ಲಿಸಲು ಇದನ್ನು ಸ್ಥಾಪಿಸಲಾಗಿದೆ” ಎಂದು ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ