ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ

Basavaraj Bommai: ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ, ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Skanda

Updated on:Aug 24, 2021 | 10:03 AM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮೂಲಕ ದೊಡ್ಡ ಬದಲಾವಣೆ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದರೆ, ಆಗಸ್ಟ್ 23 ಎಜುಕೇಷನ್ ಡೇ ಆಗಲಿದೆ. ರಾಜ್ಯದಲ್ಲಿ ಡಿಜಿಟಲೀಕರಣ ಹೊಸ ನೀತಿ ಜಾರಿಗೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ (ಆಗಸ್ಟ್ 23) ಹೇಳಿಕೆ ನೀಡಿದ್ದಾರೆ. ಮೊದಲು ಜ್ಞಾನ, ನಂತರ ವಿಜ್ಞಾನ, ಬಳಿಕ ತಂತ್ರಜ್ಞಾನ. ಆದರೆ ಈಗ ತಂತ್ರಾಂಶ ಜ್ಞಾನ ಮುಂಚೂಣಿಯಲ್ಲಿ ಇದೆ. ಹಾಗಾಗಿ ಡಿಜಿಟಲೈಸೇಷನ್ ಈಗ ಬಹಳ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಕತಾಳೀಯವೋ ಏನೋ ಗೊತ್ತಿಲ್ಲ. ಕೊವಿಡ್ ನಿಂದ ಶಾಲೆಗಳು ತೆರೆಯಲು ಆಗಿರಲಿಲ್ಲ, ಇವತ್ತು ಶಾಲೆಗಳಿಗೆ ಮಕ್ಕಳು ಬಂದಿದ್ದಾರೆ. ಇನ್ನೊಂದೆಡೆ ಇವತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ದಿನ. ಈ ಎರಡು ಕಾರಣಗಳಿಂದಾಗಿ ಇವತ್ತು ಲಿಬರೇಷನ್ ಡೇ . ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದ್ರೆ ಆಗಸ್ಟ್ 23 ಎಜ್ಯುಕೇಶನ್ ಡೇ ಆಗಲಿದೆ. ಭವಿಷ್ಯವನ್ನು ಕಟ್ಟುವ ಕೆಲಸ ಮಾಡಲಾಗಿದೆ. ಇಡೀ ದೇಶದಲ್ಲೇ ಅಮೂಲ್ಯ ಬದಲಾವಣೆ ಆಗಿದೆ. ಜಡ್ಡುಗಟ್ಟಿದ್ದ ವ್ಯವಸ್ಥೆಗೆ ಲಿಬರೇಷನ್ ಸಿಕ್ಕಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ. ನರೇಂದ್ರ ಮೋದಿ ದೂರದೃಷ್ಟಿ ಇರುವ ಮುತ್ಸದ್ಧಿ. ಅವರ ದೂರದೃಷ್ಟಿಯ ಫಲ ಈ ರಾಷ್ಟ್ರೀಯ ಶಿಕ್ಷಣ ನೀತಿ. ‌ಒಬ್ಬ ರಾಜಕಾರಣಿಗೆ ಮುಂದಿನ ಚುನಾವಣೆ ಮೇಲೆ ಗಮನ ಇರುತ್ತದೆ. ಆದ್ರೆ ಒಬ್ಬ ಮುತ್ಸದ್ಧಿಗೆ ಮುಂದಿನ ಜನಾಂಗದ ಮೇಲೆ ಗಮನ ಇರುತ್ತದೆ. ಕರ್ನಾಟಕದಲ್ಲಿ ಡಿಜಿಟಲೀಕರಣ ಹೊಸ ನೀತಿಯನ್ನ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡುತ್ತೇವೆ. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಒದಗಿಸುತ್ತೇವೆ.  ನನ್ನ ಕರ್ನಾಟಕ ಜ್ಞಾನವಂತ ರಾಜ್ಯವಾಗಬೇಕು. ಆಗ ಮಾತ್ರ ಕರ್ನಾಟಕ ಕಲ್ಯಾಣ ಕರ್ನಾಟಕ ಆಗಲಿದೆ. ಕೊರೊನಾ ಸಂಕಷ್ಟದಿಂದ ಸರ್ಕಾರಕ್ಕೆ ಆರ್ಥಿಕ ಸಮಸ್ಯೆ ಇದೆ. ಆದರೆ ಹೊಸ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಕೊರೊನಾ ನಿರ್ವಹಣೆ, ನೆರೆಹಾನಿ ಕುರಿತು ಬಸವರಾಜ ಬೊಮ್ಮಾಯಿ ಸಭೆ; ನೆರೆಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Published On - 2:58 pm, Mon, 23 August 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್