AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ನೀತಿ ಅನುಷ್ಠಾನಕ್ಕೆ ಮದನ್ ಗೋಪಾಲ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ

ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರನ್ನು ಕಾರ್ಯಪಡೆಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಶಿಕ್ಷಣ ನೀತಿ ಅನುಷ್ಠಾನಕ್ಕೆ ಮದನ್ ಗೋಪಾಲ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ
ನಿವೃತ್ತ ಐಎಎಸ್ ಅಧಿಕಾರಿ ಮದನ್​ಗೋಪಾಲ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 16, 2021 | 10:26 PM

Share

ಬೆಂಗಳೂರು: ಕೇಂದ್ರ ಸರ್ಕಾರವು ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಷ್ಠಾನ ಕಾರ್ಯಪಡೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರನ್ನು ಕಾರ್ಯಪಡೆಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ / ಸುಧಾರಣೆಗಳನ್ನು ಜಾರಿಗೊಳಿಸಲೆಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಜಾರಿಗೆ ತಂದು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅದರಂತೆ ವಿವಿಧ ಕ್ಷೇತ್ರಗಳ ಶಿಕ್ಷಣ ತಜ್ಞರು ಹಾಗೂ ಪದನಿಮಿತ್ತ ಸದಸ್ಯರು ಇರುವ ಅನುಷ್ಠಾನ ಕಾರ್ಯಪಡೆ ಸಮಿತಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಸೂಚನೆ ಮೇರೆಗೆ ರಚಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅಧ್ಯಕ್ಷತೆಯ ಸಮಿತಿಗೆ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಸದಸ್ಯರಾಗಿ ಅಜೀಂ ಪ್ರೇಮ್​ಜಿ ಪ್ರತಿಷ್ಠಾನದ ರಿಷಿಕೇಶ್, ಶಿಕ್ಷಣ ಇಲಾಖೆಯ ಆಯುಕ್ತರು, ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೇರಿದಂತೆ ಒಟ್ಟು 19 ಮಂದಿ ಸದಸ್ಯರಿದ್ದಾರೆ.

ಈ ಸಮಿತಿಯು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕರಡು ಚೌಕಟ್ಟು ತಯಾರಿಸುವುದು, ಕರಡು ದಾಖಲೆ ಪರಿಶೀಲಿಸಿ ಅಂತಿಮಗೊಳಿಸಲಿದೆ. ಪೂರ್ವ ಪ್ರಾಥಮಿಕ ಹಂತದ ರಾಜ್ಯ ಪಠ್ಯವಸ್ತು ಚೌಕಟ್ಟು ಹಾಗೂ 1ರಿಂದ 12ನೇ ತರಗತಿಯವರೆಗೂ ರಾಜ್ಯ ಪಠ್ಯವಸ್ತು ಚೌಕಟ್ಟು ತಯಾರಿಸಲು ಮಾರ್ಗದರ್ಶನ ನೀಡಲಿದೆ. ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ, ಅವುಗಳ ಮೇಲುಸ್ತುವಾರಿ ನೋಡಿಕೊಳ್ಳುತ್ತದೆ. ವಿವಿಧ ಕಾರ್ಯಗಳಲ್ಲಿ ಅಂತರ (ಗ್ಯಾಪ್) ಕಂಡು ಬಂದರೆ ಅವುಗಳ ನಿವಾರಣೆಗೂ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಶಿಕ್ಷಣ ನೀತಿಯ ಶಿಫಾರಸಿನ ಅನ್ವಯ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸಲು ಸಮನ್ವಯ ಮತ್ತು ಸಮಾನ ಶಿಕ್ಷಣ ಕಾರ್ಯತಂತ್ರ ರೂಪಿಸಲಿದೆ. ಶಿಕ್ಷಣ ನೀತಿಯ ಅನುಷ್ಠಾನಕ್ಕಾಗಿ ದೀರ್ಘಾವಧಿ ಯೋಜನೆ ಸಿದ್ಧಪಡಿಸಲು ಸಹಕರಿಸಲಿದೆ.

ಶಿಕ್ಷಣ ನೀತಿಯಿಂದ ಮುಂದಿನ 10 ವರ್ಷಗಳಲ್ಲಿ ಅಂದರೆ 2030ರವರೆಗೂ ಆಗುವ ಪರಿಣಾಮಗಳನ್ನು ವಿಶ್ಲೇಷಿಸಿ, ಅಗತ್ಯ ಮಾರ್ಗದರ್ಶನ ಹಾಗೂ ಪರಿಹಾರಾತ್ಮಕ ಕ್ರಮಗಳನ್ನು ಸೂಚಿಸಲಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಸದಸ್ಯ ಕಾರ್ಯದರ್ಶಿ ಈ ಸಮಿತಿಯ ಸಭೆಗಳನ್ನು ನಡೆಸಲಿದ್ದಾರೆ.

ಸದಸ್ಯರ ಪಟ್ಟಿ ಬೆಳ್ಳಶೆಟ್ಟಿ, ಡಾ.ಪ್ರವೀಣ್​ಕುಮಾರ್, ಗಣೇಶ್​ಭಟ್, ಪ್ರೊ.ರಾಜು, ಡಾ.ಪದ್ಮಾವತಿ, ಎಂ.ಎನ್.ಬೇಗ್, ಕ್ಯಾಪ್ಟನ್ ಕೌಸ್ತುವನಾಥ್, ಮರಿಸ್ವಾಮಿ, ಶೇಷಗಿರಿ ಮಧುಸೂದನ್, ಡಾ.ಸುಪರ್ಣಾ ದಿವಾಕರ್, ಡಾ.ಶಕುಂತಲಾ ಪತ್ರೆ, ಡಾ.ಮಹಾಬಲೇಶ್ವರ ರಾವ್, ಬಸವರಾಜ್, ಬಿ.ಎ.ಸುಬ್ರಮಣ್ಯ, ಚಿದಾನಂದ ಎ.ಕೆ.ಪಾಟೀಲ್, ಪರಮೇಶ್ವರ ವಿ.ಹೆಗ್ಗಡೆ.

(Committee formed to implement new education policy former IAS officer Madan Gopal Will be president)

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಲಾಠಿಚಾರ್ಜ್ ವೇಳೆ ಇಬ್ಬರಿಗೆ ಗಾಯ

ಇದನ್ನೂ ಓದಿ: NEP: ಬೆಂಗಳೂರು ನಗರ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ; ಎನ್​ಇಪಿ ವಿರೋಧಿಸಿ ಸಿದ್ದರಾಮಯ್ಯ ಪತ್ರ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ