CET Exam 2023: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟಿಸಿದೆ.

CET Exam 2023: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

Updated on: Feb 24, 2023 | 9:11 PM

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority)ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test ) ದಿನಾಂಕ ಪ್ರಕಟವಾಗಿದೆ. ಇದೇ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯು ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2022-2023ನೇ ಸಾಲಿನ ವೇಳಾಪಟ್ಟಿ ಪ್ರಕಟ

ಇದೇ ಮಾರ್ಚ್ 9 ರಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (Second PUC Exam) ನಡೆಯಲಿವೆ. ಇದಾದ ಬಳಿಕ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆ ಇರಲಿದೆ.

ಪಿಯುಸಿ ತೇರ್ಗಡೆಯ ನಂತರ ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಕೋರ್ಸ್​ಗಳ ಕಾಲೇಜು ಸೀಟು ಹಂಚಿಕೆಯಾಗಲಿದೆ.

ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:36 pm, Fri, 24 February 23

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us