AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕಗಳು ಲಭ್ಯವಿಲ್ಲ; ಗೊಂದಲದಲ್ಲಿರುವ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು

ರಾಜ್ಯದ ಪ್ರಥಮ ಮತ್ತು ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾನಿಲಯ) ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಗಮನಾರ್ಹ ಬದಲಾವಣೆಗಳು ಆಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.

ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕಗಳು ಲಭ್ಯವಿಲ್ಲ; ಗೊಂದಲದಲ್ಲಿರುವ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
|

Updated on: Jun 11, 2023 | 1:28 PM

Share

ರಾಜ್ಯದ ಪ್ರಥಮ ಮತ್ತು ದ್ವಿತೀಯ ಪಿಯು (Pre-University) ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಗಮನಾರ್ಹ ಬದಲಾವಣೆಗಳು ಆಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪರಿಷ್ಕೃತ ವಿಷಯಗಳಲ್ಲಿ PCMB (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ), ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ, ಅಕೌಂಟೆನ್ಸಿ ಮತ್ತು ವ್ಯವಹಾರ ಅಧ್ಯಯನಗಳು ಸೇರಿವೆ. ಈ ವಿಷಯಗಳ ಹೊಸ ಆವೃತ್ತಿಯ ಪಠ್ಯಪುಸ್ತಕಗಳನ್ನು ಖರೀದಿಸಲು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಆದರೆ, ಪರಿಷ್ಕೃತ ಪಠ್ಯಪುಸ್ತಕಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗದೇ ಸಮಸ್ಯೆಗೆ ಕಾರಣವಾಗಿದೆ.

ಬೆಂಗಳೂರಿನ ಕೆಲವು ಪುಸ್ತಕ ಮಳಿಗೆಗಳು ಈಗಾಗಲೇ ಪರಿಷ್ಕೃತ ಪುಸ್ತಕಗಳ ಕೆಲವು ಪ್ರತಿಗಳನ್ನು ಮಾರಾಟ ಮಾಡಿದ್ದು, ಈಗ ಪೂರೈಕೆ ಸ್ಥಗಿತಗೊಂಡಿರುವುದರಿಂದ ಅವು ಕೂಡ ಸ್ಟಾಕ್ ಆಗಿಲ್ಲ. ಇನ್ನು ಹಲವು ಪುಸ್ತಕ ಮಳಿಗೆಗಳು, ಪರಿಷ್ಕೃತ ಪಠ್ಯಪುಸ್ತಕಗಳನ್ನು ಇನ್ನೂ ಸ್ವೀಕರಿಸಿಲ್ಲ.

ಪರಿಸ್ಥಿತಿಯನ್ನು ಪರಿಹರಿಸಲು, ಈಗಾಗಲೇ ಹಳೆಯ ಪಠ್ಯಪುಸ್ತಕಗಳನ್ನು ಖರೀದಿಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದಿಂದ ತೆಗೆದುಹಾಕಲಾದ ಪಾಠಗಳ ಬಗ್ಗೆ ತಿಳಿಸುವ ಮೂಲಕ ಮಾರ್ಗದರ್ಶನ ನೀಡುವಂತೆ ಪಿಯು ಮಂಡಳಿಯು ಉಪನ್ಯಾಸಕರಿಗೆ ಸೂಚನೆ ನೀಡಿದೆ. ಆದರೆ, ಇದು ಯಾವ ಪಠ್ಯಪುಸ್ತಕಗಳನ್ನು ಅನುಸರಿಸಬೇಕು ಎಂಬ ಗೊಂದಲವನ್ನು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಲ್ಲಿ ಉಂಟುಮಾಡಿದೆ. ಇದಲ್ಲದೆ, ಪರಿಷ್ಕೃತ ಪಠ್ಯಪುಸ್ತಕಗಳ ಲಭ್ಯತೆಯು ಅನಿಶ್ಚಿತವಾಗಿಯೇ ಉಳಿದಿದೆ, ವಿದ್ಯಾರ್ಥಿಗಳು ನವೀಕರಿಸಿದ ಆವೃತ್ತಿಗಳನ್ನು ಯಾವಾಗ ಖರೀದಿಸಲು ಸಾಧ್ಯವಾಗುತ್ತದೆ ಎಂಬುದರ ಕುರಿತು ಹೊಂದಲೇ ಹೆಚ್ಚಾಗಿದೆ.

ಇದನ್ನೂ ಓದಿ: ಜೂನ್ 12ಕ್ಕೆ ನಡೆಯುವ ಪರೀಕ್ಷೆಗೆ ನಗರ ಹಂಚಿಕೆ ಸ್ಲಿಪ್ ಬಿಡುಗಡೆ ಮಾಡಿದ ಎನ್​ಟಿಎ

ಪರಿಷ್ಕೃತ ಪಠ್ಯಪುಸ್ತಕಗಳ ಸಕಾಲಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಅಧಿಕಾರಿಗಳು ಮತ್ತು ಪ್ರಕಾಶಕರು ತ್ವರಿತ ಕ್ರಮವನ್ನು ಕೈಗೊಳ್ಳುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಅಧ್ಯಯನದಲ್ಲಿ ಗೊಂದಲ ಮತ್ತು ಅಡಚಣೆಗಳನ್ನು ಕಡಿಮೆ ಮಾಡಲು ಸ್ಪಷ್ಟ ಸಂವಹನ ಮತ್ತು ಮಾರ್ಗದರ್ಶನವನ್ನು ಸಹ ಒದಗಿಸಬೇಕು.

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ