CUET UG Result 2023: CUET UG ಫಲಿತಾಂಶ ಮುಂದಿನ ವಾರ ಪ್ರಕಟ, ಪರಿಶೀಲಿಸುವುದು ಹೇಗೆ?

CUET UG: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜುಲೈ 15ರೊಳಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ ಯುಜಿ 2023) ಫಲಿತಾಂಶವನ್ನು ಪ್ರಕಟಿಸಲಿದೆ.

CUET UG Result 2023: CUET UG ಫಲಿತಾಂಶ ಮುಂದಿನ ವಾರ ಪ್ರಕಟ, ಪರಿಶೀಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 08, 2023 | 4:42 PM

ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮುಂದಿನ ವಾರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ ಯುಜಿ 2023) ಫಲಿತಾಂಶವನ್ನು ಪ್ರಕಟಿಸಲಿದೆ. ಈ ಹಿಂದೆ ಆಗಸ್ಟ್​​ 2ನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಜುಲೈ 15 ರ ಶನಿವಾರದೊಳಗೆ CUET UG ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು UGC ಅಧ್ಯಕ್ಷ ಎಂ ಜಗದೇಶ್ ಕುಮಾರ್ ತಿಳಿಸಿದ್ದಾರೆ. ಅಭ್ಯರ್ಥಿಗಳು ತಮ್ಮ CUET UG 2023 ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ (cuet.samarth.ac.in, nta.ac.in) ಪರಿಶೀಲಿಸಬಹುದು.

CUET UG 2023 ಸ್ಕೋರ್‌ಕಾರ್ಡ್​​ನ್ನು ಡೌನ್‌ಲೋಡ್ ಮಾಡಲು (cuet.samarth.ac.in, nta.ac.in) ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಬೇಕಾದರೆ ತಮ್ಮ ಪ್ರಮುಖ ದಾಖಲೆಗಳನ್ನು ನೀಡಬೇಕಾಗುತ್ತದೆ. ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕ ಕಡ್ಡಾಯವಾಗಿ ಬೇಕಾಗುತ್ತದೆ, ಡೌನ್‌ಲೋಡ್ ಮಾಡಲು, ಪ್ರಿಂಟ್ ಔಟ್ ತೆಗೆಯಲು ಇದರಲ್ಲಿ ಆಪ್ಷನ್​​ ನೀಡಿರುತ್ತಾರೆ.

ಇದನ್ನೂ ಓದಿ: CUET UG 2023 Results: ಜುಲೈ 15ರೊಳಗೆ CUET UG ಫಲಿತಾಂಶ, ಪರಿಷ್ಕೃತ ಕೀ ಉತ್ತರ ಬಿಡುಗಡೆ

CUET UG 2023 ಫಲಿತಾಂಶ ಪರಿಶೀಲಿಸುವುದು ಹೇಗೆ?

1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ- cuet.samarth.ac.in

2. CUET UG 2023 ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ.

3. ಲಾಗ್-ಇನ್ ದಾಖಲೆ ಬಳಸಿ, ಅಪ್ಲಿಕೇಶನ್ ಸಂಖ್ಯೆ, ಹುಟ್ಟಿದ ದಿನಾಂಕ ಕಡ್ಡಾಯವಾಗಿ ಬೇಕು.

4. ಡೌನ್‌ಲೋಡ್ ಮಾಡುವ ಆಪ್ಷನ್ CUET UG 2023 ಸ್ಕೋರ್‌ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ.

5. CUET ಸ್ಕೋರ್‌ಕಾರ್ಡ್ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಈ ಹಿಂದೆ NTA, CUET UG 2023 ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿತು ಮತ್ತು CUET UG ಕೀ ಉತ್ತರಕ್ಕೆ ಅಭ್ಯರ್ಥಿಗಳಿಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಲು ಅವಕಾಶವನ್ನು ಒದಗಿಸಿತು.  CUET UG 2023 ಸ್ಕೋರ್‌ಕಾರ್ಡ್ cuet.samarth.ac.in, nta.ac.in ನಲ್ಲಿ ಲಭ್ಯವಿರುತ್ತದೆ. CUET ಅಂಕಪಟ್ಟಿಯು ಅಭ್ಯರ್ಥಿಯ ಹೆಸರು, ಹುಟ್ಟಿದ ದಿನಾಂಕ, ರೋಲ್ ಸಂಖ್ಯೆ, ಪರೀಕ್ಷೆಯ ಪತ್ರಿಕೆಗಳು, ಅಂಕಗಳು, ಶೇಕಡಾವಾರುಗಳನ್ನು ಒಳಗೊಂಡಿರುತ್ತದೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Sat, 8 July 23

‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ
‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ
ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ