DIKSHA App: ಪಿಯು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗಳಿಗೆ ಸಿದ್ಧವಾಗಲು ದೀಕ್ಷಾ ಆ್ಯಪ್ ಲೋಕಾರ್ಪಣೆ
DIKSHA Platform E learning App: ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ DIKSHA ಆಪ್ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha
ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆ್ಯಪ್ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆ್ಯಪ್ ಸಹಕಾರಿಯಾಗಲಿದೆ ಎಂದರು.
ಆ್ಯಪ್ನಲ್ಲಿ ಏನಿದೆ? ಫೋಕಸ್ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ.
ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ. ಈ ಎಲ್ಲ ಪಠ್ಯಾಂಶಗಳನ್ನು ‘DIKSHA-app’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋರಿದರು.
ಏನಿದು ದೀಕ್ಷಾ-ಆಪ್ ಪ್ರೋಗ್ರಾಂ DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ DIKSHA ಆಪ್ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha
DIKSHA ಆ್ಯಪ್ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.
ದೀಕ್ಷಾ-ಆಪ್ ಉದ್ದೇಶ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೊವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ಬಳಸಬಹುದಾಗಿದೆ.
ಇದನ್ನೂ ಓದಿ: Bigg Boss: ಕೊವಿಡ್ ಪೂರ್ಣಗೊಂಡ ನಂತರ ಮುಂದುವರಿಯಲಿದೆ ಬಿಗ್ ಬಾಸ್; ವಾಹಿನಿಯಿಂದಲೇ ಅಧಿಕೃತ ಮಾಹಿತಿ
(Diksha platform for school education e learning app released in Karnataka for SSLC PUC and Competitive exam preparation by Suresh Kumar)
Published On - 5:21 pm, Tue, 25 May 21