BASE ಪ್ರಧಾನಿ ಮೋದಿಯಿಂದ ಉದ್ಘಾಟನೆ: ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಬೆಂಗಳೂರು ಇಲ್ಲಿ ಶೈಕ್ಷಣಿಕ ಪ್ರವೇಶಕ್ಕಾಗಿ ಅರ್ಜಿಗಳ ಆಹ್ವಾನ
Dr BR Ambedkar School of Economics University: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಯೂನಿವರ್ಸಿಟಿ, ಬೆಂಗಳೂರು ಇಲ್ಲ 2022-23ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗಾಗಿ ಕೆಳಕಂಡ ಕೋರ್ಸ್‌ಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ವಯ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಯೂನಿವರ್ಸಿಟಿ, ಬೆಂಗಳೂರು ಇಲ್ಲಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕುಲಸಚಿವರು, ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಯೂನಿವರ್ಸಿಟಿ, ಬೆಂಗಳೂರು (Dr BR Ambedkar School of Economics University -BASE) ಇವರ ಸರ್ಕಾರದ ಈ ಸುತ್ತೋಲೆಗೆ ಅಂಕಿತ ಹಾಕಿದ್ದಾರೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಯೂನಿವರ್ಸಿಟಿ (BASE) ಬೆಂಗಳೂರು ಇಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗಾಗಿ ಕೆಳಕಂಡ ಕೋರ್ಸ್‌ಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ವಯ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಸದರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯದ ಸೌಲಭ್ಯವನ್ನು ಕಲ್ಪಸಲಾಗಿದ್ದು, ಉನ್ನತ ಗ್ರಂಥಾಲಯ, ಕಂಪ್ಯೂಟರ್ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಹಾಗೂ ಅನೇಕ ಸೌಲಭ್ಯಗಳನ್ನು ಹೊಂದಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಇಲಾಖಾ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಸೂಚನಾ ಫಲಕದಲ್ಲಿ ವಿದ್ಯಾರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
1. 5-Year integrated M.Sc Economics Course (NEP)
2. 2-Year M.Sc Economics Course
3. 2-Year M.Sc Financial Economics Course
ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾಲಯದ ವೆಬ್‌ಸೈಟ್ : www.info@base.ac.in ನಲ್ಲಿ ಮಾಹಿತಿಯನ್ನು ಪಡೆಯಬಹುದು.
BASE University ರಿಜಿಸ್ಟ್ರಾರ್ ಹೇಳುವುದೇನು?
ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ, ಅರ್ಥಶಾಸ್ತ್ರದಲ್ಲಿ ದೇಶದ ಉನ್ನತ ಶಿಕ್ಷಣದ ಆಕಾಂಕ್ಷೆಗಳನ್ನು ತಲುಪುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಸ್ಥಾಪಿಸಿದ ಮಹತ್ವಕಾಂಕ್ಷಿ ವಿಶ್ವವಿದ್ಯಾಲಯವಾಗಿದೆ. ಭಾರತದ ಸಂವಿಧಾನ ಶಿಲ್ಪಿ, ಸಮಾಜ ಶಾಸ್ತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರಾಗಿದ್ದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರು ಅರ್ಥಶಾಸ್ತ್ರಕ್ಕೆ ನೀಡಿದ ಕೊಡುಗೆಯ ಸ್ಮರಣೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವನ್ನು ಕರ್ನಾಟಕ ಸರ್ಕಾರ ಸ್ಥಾಪನೆ ಮಾಡಿದೆ. ’
ಈ ವಿಶ್ವವಿದ್ಯಾಲಯವನ್ನು ವಿಶ್ವ ದರ್ಜೆಯ ಶೈಕ್ಷಣಿಕ ಕೇಂದ್ರವಾಗಿ ಕೊಂಡೊಯ್ಯುವುದು ಸಂಸ್ಥೆಯ ಲಕ್ಷ್ಯವಾಗಿದೆ. ಈ ನಿಟ್ಟಿನ ಪ್ರಾಮಾಣಿಕ ಪ್ರಯತ್ನಕ್ಕೆ ಸರ್ಕಾರವು ತಮ್ಮ ಬೆಂಬಲವನ್ನು ನೀಡುತ್ತಾ ಬಂದಿದೆ. ವಿಶ್ವವಿದ್ಯಾಲಯದ ಪಠ್ಯಕ್ರಮವು ಅತ್ಯುನ್ನತ ಅರ್ಧಶಾಸ್ತ್ರಜ್ಞರ ಸಮಿತಿಯಿಂದ ರಚಿಸಲ್ಪಟ್ಟಿದ್ದು, ಇದರಿಂದ ವಿದ್ಯಾರ್ಥಿಗಳು ಸಮಾಜದ ಯಾವುದೇ ಹುದ್ದೆಯಲ್ಲಿ, ಪ್ರಭಾವಿಗಳಾಗಿ ಕಾರ್ಯನಿರ್ವಹಿಸಲು ಸಮರ್ಥರಾಗುತ್ತಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಉತ್ತಮ ಶಿಕ್ಷಕರ ಜೊತೆಗೆ ಸ್ಮಾರ್ಟ್ ಕ್ಲಾಸ್ ರೂಮ್ಸ್, ಉತ್ತಮ ದರ್ಜೆಯ ಗ್ರಂಥಾಲಯ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು, ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಿಗೆ ಬೇಕಾಗುವಂತಹ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಸಲಾಗಿದೆ.
ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಉತ್ತಮ ವಿದ್ಯಾಭ್ಯಾಸಕ್ಕೆ ಒಳ್ಳೆಯ ವಾತಾವರಣವನ್ನು ಕಲ್ಪಿಸಲಾಗುತ್ತಿದೆ. ಅರ್ಥಶಾಸ್ತ್ರದಲ್ಲಿ ಅತ್ಯುನ್ನತವಾದ ಶಿಕ್ಷಣ, ನೈತಿಕ ದೃಢತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ನೀಡುತ್ತ ಅವರನ್ನು ಉತ್ತಮ ನಾಗರಿಕರನ್ನಾಗಿಸಿ ದೇಶಕ್ಕೆ ಕೊಡುಗೆಯಾಗಿ ನೀಡುವ ಪ್ರಯತ್ನವನ್ನು ಈ ವಿಶ್ವವಿದ್ಯಾಲಯವು ಮಾಡುತ್ತಿದೆ. ವಿಶ್ವವಿದ್ಯಾಲಯವು ಸಾಂವಿಧಾನಿಕ ಬದ್ಧತೆಗಳು ಮತ್ತು ಸಾಮಾಜಿಕ ಯೋಗಕ್ಷೇಮಕ್ಕಾಗಿ ಅಭಿವೃದ್ಧಿಯ ಪಥದಲ್ಲಿ ಮುಂದುವರೆಯಲ ಹಾಗೂ ಇನ್ನೂ ಹೆಚ್ಚಿನ ಮಟ್ಟದಲ್ಲಿ ಈ ಸಂಸ್ಥೆಯು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಬೆಳೆಯಲಿ ಎಂದು ಆಶಿಸುವುದಾಗಿ ರಿಜಿಸ್ಟ್ರಾರ್ (KAS, Registrar, BASE University) ತಿಳಿಸಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:40 pm, Mon, 20 June 22