ಬಿ.ಇ, ಬಿ.ಟೆಕ್ ಹಾಗೂ ಎಂ.ಎಸ್ಸಿ ವಿದ್ಯಾರ್ಥಿಗಳಿಗೆ DRDO ಆಫರ್: 6 ತಿಂಗಳ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) DMSRDEಯಲ್ಲಿ 6 ತಿಂಗಳ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಆಯ್ಕೆಯಾದವರಿಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಸೆಪ್ಟೆಂಬರ್ 28ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ, ಅರ್ಜಿ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ವಿವರಗಳನ್ನು ಇಲ್ಲಿ ತಿಳಿಯಿರಿ.

ಬಿ.ಇ, ಬಿ.ಟೆಕ್ ಹಾಗೂ ಎಂ.ಎಸ್ಸಿ ವಿದ್ಯಾರ್ಥಿಗಳಿಗೆ DRDO ಆಫರ್: 6 ತಿಂಗಳ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನ
ಉಚಿತ ಇಂಟರ್ನ್‌ಶಿಪ್‌
Image Credit source: Getty Images

Updated on: Sep 19, 2026 | 3:10 PM

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಇಂಟರ್ನ್‌ಶಿಪ್ ಮಾಡುವ ಕನಸು ಕಾಣುತ್ತಿರುವ ಎಂಜಿನಿಯರಿಂಗ್ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಸಿಕ್ಕಿದೆ. DRDOದ ಕಾನ್ಪುರ ಮೂಲದ ‘ಡಿಫೆನ್ಸ್ ಮೆಟೀರಿಯಲ್ಸ್ ಅಂಡ್ ಸ್ಟೋರ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್’ (DMSRDE) ಪ್ರಯೋಗಾಲಯವು 6 ತಿಂಗಳ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ.

ಅರ್ಹ ವಿಭಾಗಗಳು ಹಾಗೂ ಶೈಕ್ಷಣಿಕ ಅರ್ಹತೆ:

ಈ ಇಂಟರ್ನ್‌ಶಿಪ್ ಕೆಮಿಕಲ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್ ಅಂಡ್ ಟೆಕ್ನಾಲಜಿ, ಮೆಟೀರಿಯಲ್ ಸೈನ್ಸ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಟೆಕ್ಸ್‌ಟೈಲ್ ಎಂಜಿನಿಯರಿಂಗ್ ಹಾಗೂ ರಸಾಯನಶಾಸ್ತ್ರ ವಿಭಾಗಗಳಲ್ಲಿ ಲಭ್ಯವಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್‌ ಪದವಿ (B.E/B.Tech) ಅಥವಾ ಎಂಜಿನಿಯರಿಂಗ್/ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (M.Sc/M.Tech) ಕೋರ್ಸ್‌ನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿದಾರರು ತಮ್ಮ ಶೈಕ್ಷಣಿಕ ಜೀವನದಲ್ಲಿ ಕನಿಷ್ಠ ಶೇ. 65 ಅಂಕಗಳನ್ನು ಹೊಂದಿರಬೇಕು ಹಾಗೂ ಅವರ ವಯಸ್ಸು 28 ವರ್ಷಕ್ಕಿಂತ ಕಡಿಮೆಯಿರಬೇಕು.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಅಗತ್ಯವಿರುವ ದಾಖಲೆಗಳು ಹಾಗೂ ಅರ್ಜಿ ಸಲ್ಲಿಕೆ:

ಅರ್ಜಿ ನಮೂನೆಯನ್ನು ಅಧಿಕೃತ ಅಧಿಸೂಚನೆಯಿಂದ ಡೌನ್‌ಲೋಡ್ ಮಾಡಿಕೊಂಡು, ಅದನ್ನು ಕಾಲೇಜಿನ ಲೆಟರ್‌ಹೆಡ್‌ನಲ್ಲಿ ತಯಾರಿಸಿ ಪ್ರಾಂಶುಪಾಲರು, ಡೀನ್ ಅಥವಾ ವಿಭಾಗೀಯ ಮುಖ್ಯಸ್ಥರ (HOD) ವಿನಂತಿ ಪತ್ರದೊಂದಿಗೆ ಸಲ್ಲಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ SSLC ಅಂಕಪಟ್ಟಿ, ಹಿಂದಿನ ಸೆಮಿಸ್ಟರ್‌ಗಳ ಅಂಕಪಟ್ಟಿಗಳು, ಆಧಾರ್ ಕಾರ್ಡ್ ಹಾಗೂ ಅಪ್‌ಡೇಟ್ ಮಾಡಿದ ಬಯೋಡೇಟಾವನ್ನು ಲಗತ್ತಿಸಿ ನಿರ್ದೇಶಕರು, DMSRDE, DRDO, GT ರಸ್ತೆ, ಕಾನ್ಪುರ – 208013 ಎಂಬ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಅಥವಾ ನೇರವಾಗಿ ತಲುಪಿಸಬೇಕು.

ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳು:

ಅಭ್ಯರ್ಥಿಗಳನ್ನು ಅವರ CGPA, ಆನ್‌ಲೈನ್ ಸಂದರ್ಶನ ಹಾಗೂ ಮೂಲ ದಾಖಲೆಗಳ ಪರಿಶೀಲನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸೇರ್ಪಡೆಯ ದಿನಾಂಕವನ್ನು ಇಮೇಲ್ ಮೂಲಕ ತಿಳಿಸಲಾಗುವುದು. ಈ ಆರು ತಿಂಗಳ ಇಂಟರ್ನ್‌ಶಿಪ್ ಪೂರ್ಣಗೊಂಡ ನಂತರ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 28 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಿದ್ದು, ಅಪೂರ್ಣ ವಿವರಗಳಿರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us