Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆ ತೆಕ್ಕೆಗೆ, ರಾಜ್ಯದಲ್ಲಿ ಹೊಸ 2000 ಪಬ್ಲೀಕ್ ಶಾಲೆ: ಡಿಕೆಶಿ ಮಾಹಿತಿ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಶಿಕ್ಷಣ ಇಲಾಖೆ ಜೊತೆ ಸಭೆ ಮಾಡಿದ್ದು, ಕೆಲ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಬಿಬಿಎಂಪಿ ಶಾಲೆಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ನಡೆಸಲಿದೆ, ಹಾಗೇ ರಾಜ್ಯದಲ್ಲಿ 2,000 ಪಬ್ಲಿಕ್ ಶಾಲೆ ಸ್ಥಾಪಿಸಲು ತೀರ್ಮಾನ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆ ತೆಕ್ಕೆಗೆ, ರಾಜ್ಯದಲ್ಲಿ ಹೊಸ 2000 ಪಬ್ಲೀಕ್ ಶಾಲೆ: ಡಿಕೆಶಿ ಮಾಹಿತಿ
Follow us
Anil Kalkere
| Updated By: ರಮೇಶ್ ಬಿ. ಜವಳಗೇರಾ

Updated on:Dec 22, 2023 | 8:57 PM

ಬೆಂಗಳೂರು, (ಡಿಸೆಂಬರ್ 22): ಬೆಂಗಳೂರಿನ ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ದಿಢೀರ್ ಶಿಕ್ಷಣ ಇಲಾಖೆ (Education Department) ಜೊತೆ ಸಭೆ ಮಾಡಿದ್ದ, ಕೆಲ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇನ್ಮುಂದೆ ಬಿಬಿಎಂಪಿ(BBMP) ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು(Schools) ಶಿಕ್ಷಣ ಇಲಾಖೆ ನಡೆಸಲಿದೆ. ಹಾಗೇ ರಾಜ್ಯದಲ್ಲಿ 2,000 ಪಬ್ಲಿಕ್ ಶಾಲೆ (Public Schools) ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇಂದು ಮೂರ್ನಾಲ್ಕು ವಿಚಾರ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೇವೆ. ಖಾಸಗಿ ಶಾಲೆಗಳ ರೀತಿ BBMP ಶಾಲೆಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ಶಿಕ್ಷಣ ಇಲಾಖೆ ನಡೆಸಲಿದ್ದು, ಬಿಬಿಎಂಪಿಯಿಂದ ಶಾಲೆಗಳ ನಿರ್ವಹಣೆ ಮಾಡುತ್ತೇವೆ. ಆದರೆ ಶಿಕ್ಷಣದ ವಿಚಾರವಾಗಿ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್: ಶಾಲೆ ಮುಖ್ಯ ಶಿಕ್ಷಕಿ ಅಮಾನತು

2,000 ಪಬ್ಲಿಕ್ ಶಾಲೆ ಸ್ಥಾಪಿಸಲು ತೀರ್ಮಾನ

ಇನ್ನು ರಾಜ್ಯದಲ್ಲಿ 2,000 ಪಬ್ಲಿಕ್ ಶಾಲೆ ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ. ಸಿಎಸ್​ಆರ್ ಅಡಿಯಲ್ಲಿ ಈ ಶಾಲೆಗಳನ್ನ ನಿರ್ಮಾಣ ಮಾಡಲಿದ್ದೇವೆ. ಶಿಕ್ಷಣ ಸಂಸ್ಥೆಯವರು ಒಂದೊಂದು ಶಾಲೆ ದತ್ತು ತೆಗೆದುಕೊಳ್ಳಬೇಕು. ಶಾಲೆಗಳನ್ನು ದತ್ತು ತೆಗೆದುಕೊಂಡು ವೇತನವನ್ನು ಅವರೇ ಕೊಡಬೇಕು. ಆದರೆ ಆ ಶಾಲೆಗಳು ಕೂಡ ಸರ್ಕಾರಿ ರೀತಿಯಲ್ಲೇ ನಡೆಯಲಿದೆ. ಉಚಿತ ಶಿಕ್ಷಣ ನೀಡಲಿದ್ದಾರೆ, ಸಾರಿಗೆ ವೆಚ್ಚ ಮಾತ್ರ ಬರಬಹುದು. 1,900 ಕೋಟಿಯಷ್ಟು ಸಿಎಸ್​ಆರ್ ಫಂಡ್ ಬರಬೇಕಿದೆ. ಜನವರಿಯಲ್ಲಿ ಸಿಎಸ್​ಆರ್ ಫಂಡ್ ಬಗ್ಗೆ ಸಭೆ ಮಾಡುತ್ತೇವೆ ಎಂದು ವಿವರಿಸಿದರು.

ಇನ್ನು ಇದೇ ವೇಳೆ ಬೆಂಗಳೂರಿನ ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿದ್ದೇವೆ. ಅಲ್ಲದೇ ಎಫ್​ಐಆರ್ ಸಹ ಆಗಿದೆ. ಈ ರೀತಿಯ ಘಟನೆ ನಡೆಯಬಾರದು ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Fri, 22 December 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್