Karnataka SSLC 2022 Results: ಮೇ 19ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ; ಶಿಕ್ಷಣ ಸಚಿವ ಬಿಸಿ ನಾಗೇಶ್

10ನೇ ತರಗತಿ 2022 ಫಲಿತಾಂಶ: ಕರ್ನಾಟಕದಲ್ಲಿ ಶಾಲೆಗಳು ಮೇ 16ರಂದು ಮತ್ತೆ ಆರಂಭವಾಗಲಿದೆ ಎಂದು ತಿಳಿಸಿದರು.

Karnataka SSLC 2022 Results: ಮೇ 19ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ; ಶಿಕ್ಷಣ ಸಚಿವ ಬಿಸಿ ನಾಗೇಶ್
ಸಚಿವ ಬಿ.ಸಿ. ನಾಗೇಶ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 13, 2022 | 11:29 AM

ಮಡಿಕೇರಿ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು (Karnataka Secondary Education Examination Board – SSLC) ಮೇ 19ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹೇಳಿದರು. ಕರ್ನಾಟಕದಲ್ಲಿ ಶಾಲೆಗಳು ಮೇ 16ರಂದು ಮತ್ತೆ ಆರಂಭವಾಗಲಿದೆ ಎಂದು ತಿಳಿಸಿದರು. ಫಲಿತಾಂಶಗಳನ್ನು https://sslc.karnataka.gov.in/ ಅಥವಾ https://karresults.nic.in/ ವೆಬ್​ಸೈಟ್​ಗಳಲ್ಲಿ ನೋಡಬಹುದು.

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು ಸಾಲುಸಾಲಾಗಿ ಬಂದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ತಡವಾಯಿತು. ರಾಜ್ಯದ ಸುಮಾರು 234 ಮೌಲ್ಯಮಾಪನ ಕೇಂದ್ರಗಳಲ್ಲಿ 63,796 ಶಿಕ್ಷಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡಿದ್ದರು. ರಾಜ್ಯದ 3,446 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದರು.

ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವ ವಿದ್ಯಾರ್ಥಿಗಳಿಗೆ ಶೇ 10ರಷ್ಟು ಗ್ರೇಸ್​ ಮಾರ್ಕ್ಸ್​ ಕೊಡಲು ಸರ್ಕಾರ ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು, ಅಕಸ್ಮಾತ್ ಉಳಿದ ಮೂರು ವಿಷಯಗಳಲ್ಲಿ ಕಡಿಮೆ ಅಂಕ ಪಡೆದು, ಫೇಲ್ ಆಗುವ ಪರಿಸ್ಥಿತಿ ಅನುಭವಿಸುತ್ತಿದ್ದಾರೆ ಮಾತ್ರ ಕೃಪಾಂಕ ಸಿಗುತ್ತದೆ. ಜೂನ್ 4 ನೇ ವಾರದಲ್ಲಿ ಪೂರಕ ಪರೀಕ್ಷೆ (SSLC supplementary exams) ನಡೆಯಲಿದೆ.

ಫಲಿತಾಂಶವನ್ನು ಪರಿಶೀಲಿಸಲು ಹಂತ ಹಂತದ ವಿವರಗಳು:

ಹಂತ 1 – ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ಗೆ ಭೇಟಿ ನೀಡಿ: karresults.nic.in 2022 SSLC ಫಲಿತಾಂಶ.

ಹಂತ 2 – ಇದು 2022 ರ SSLC ವೆಬ್‌ಸೈಟ್‌ನಲ್ಲಿ Karresults nic ನ ಮುಖಪುಟವನ್ನು ತೆರೆಯುತ್ತದೆ.

ಹಂತ 3 – 10 ನೇ ಫಲಿತಾಂಶ ಕರ್ನಾಟಕ 2022 ವೆಬ್‌ಸೈಟ್‌ನಲ್ಲಿ, ಕರ್ನಾಟಕ SSLC ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 4 – ಇದು KSEEB SSLC ಫಲಿತಾಂಶ 2022 ಲಾಗಿನ್ ವಿಂಡೋಗೆ ಕಾರಣವಾಗುತ್ತದೆ.

ಹಂತ 5 – kseeb.kar.nic.in 2022 ಫಲಿತಾಂಶ ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ಹಂತ 6 – SSLC ಫಲಿತಾಂಶ 2022 ಕರ್ನಾಟಕವು ಪರದೆಯ ಮೇಲೆ ಕಾಣಿಸುತ್ತದೆ.

ಹಂತ 7 – SSLC ಫಲಿತಾಂಶ ಪರಿಶೀಲನೆಯ ನಂತರ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ ಮತ್ತು ಭವಿಷ್ಯದ ಉಲ್ಲೇಖಗಳಿಗಾಗಿ ಅದನ್ನು ಸುರಕ್ಷಿತವಾಗಿರಿಸಿಕೊಳ್ಳಿ.

Published On - 11:05 am, Fri, 13 May 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್