ಬೆಂಗಳೂರು: ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಲಾಗಿದೆಯಾ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ, ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸವನ್ನು ಕೈಬಿಟ್ಟಿಲ್ಲ. ಆದರೆ, ಟಿಪ್ಪು ಬಗ್ಗೆ ವೈಭವೀಕರಿಸಿದ ಮಾಹಿತಿಗೆ ಬ್ರೇಕ್ ಹಾಕಲಾಗಿದೆ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಹಾಕಲಾಗಿದೆ. ಈ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಸತ್ಯಾಸತ್ಯತೆ ಇನ್ನಷ್ಟೇ ತಿಳಿದುಬರಬೇಕಿದೆ.
ಆದರೆ, ಪಠ್ಯ ಪುಸ್ತಕದಲ್ಲಿ ಟಿಪ್ಪು ಇತಿಹಾಸವನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ. ಟಿಪ್ಪು ಇತಿಹಾಸ ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ. ಇತಿಹಾಸದ ಕೆಲ ವಿಚಾರಗಳು ಪಠ್ಯ ಪುಸ್ತಕದಲ್ಲಿ ಕಡೆಗಣನೆ ಮಾಡಲಾಗಿತ್ತು. ಕಡೆಗಣಿಸಿದ ವಿಷಯವನ್ನು ಪರಿಚಯಿಸಲು ಪ್ರಯತ್ನಿಸ್ತಿದ್ದೇವೆ. ಇತಿಹಾಸವನ್ನು ತಿರುಚಲು ಯತ್ನಿಸಿದ್ದನ್ನ ಸರಿಪಡಿಸುತ್ತೇವೆ. ಪಠ್ಯದಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ಈ ಬಗ್ಗೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.
ದುಪಟ್ಟಾ ಧರಿಸಲು ಅನುಮತಿ ನೀಡಲು ಸಿದ್ದರಾಮಯ್ಯ ಆಗ್ರಹದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒತ್ತಡಕ್ಕೆ ಮಣಿದು ದುಪಟ್ಟಾಗೆ ಆಗ್ರಹಿಸಿದ್ದಾರೆ. ತಮ್ಮ ಒಟ್ಟು ಭಾಷಣದಲ್ಲಿ ಹಿಜಾಬ್ ಬಗ್ಗೆ ಮಾತನಾಡಿರಲಿಲ್ಲ. ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಇರುವ ಪ್ರಾಮುಖ್ಯತೆ ಗೊತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪ್ರಾಮುಖ್ಯತೆ ಬಗ್ಗೆ ಗೊತ್ತಿದೆ. ಹೈಕೋರ್ಟ್ನ ಹಿಜಾಬ್ ತೀರ್ಪನ್ನ ಸರ್ಕಾರ ಪಾಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಮೀಜಿಗಳ ಕ್ಷಮೆ ಕೇಳಬೇಕು ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಇದರಲ್ಲಿ ಸ್ವಾಮೀಜಿಗಳನ್ನು ಎಳೆದು ತರೋದು ಸರಿಯಾದದ್ದಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಹತಾಶರಾಗಿದ್ದಾರೆ ಎಂದು ಟೀಕಿಸಿದ್ದಾರೆ. ಇತ್ತ ವಿಧಾನಪರಿಷತ್ನಲ್ಲಿ ಪಠ್ಯ ಪುಸ್ತಕದಲ್ಲಿ ಟಿಪ್ಪು ಇತಿಹಾಸ ಕೈಬಿಡುವ ಹಾಗೂ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ತಯಾರು ಮಾಡಿದ ವರದಿ ಜಾರಿ ನಿರ್ಧಾರ ಕೈಬಿಡಬೇಕೆಂದು ಸದಸ್ಯ ಸಲೀಂ ಅಹ್ಮದ್ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಇದನ್ನೂ ಓದಿ: ಭಗವದ್ಗೀತೆ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ: ವಕೀಲ ಸುರೇಂದ್ರ ಉಗಾರೆ
Published On - 1:33 pm, Fri, 25 March 22