AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ಪೋಕನ್ ಇಂಗ್ಲಿಷ್ ಬೋಧನೆ: ಶಿಕ್ಷಣ ಸಚಿವ ನಾಗೇಶ್

ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಬೋಧಿಸಲು ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಮತ್ತು ಈ ಪ್ರದೇಶಗಳಲ್ಲಿ ಒಂದು ಮಾದರಿ ಶಾಲೆ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.

ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ಪೋಕನ್ ಇಂಗ್ಲಿಷ್ ಬೋಧನೆ: ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Apr 05, 2022 | 11:27 PM

Share

ಬೆಂಗಳೂರು: ಸರ್ಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಆ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಜತೆಗೆ ಸ್ಪೋಕನ್ ಇಂಗ್ಲಿಷ್ (spoken English) ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಬೆಂಗಳೂರಿನಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ಸಚಿವ ಬಿ ಸಿ ನಾಗೇಶ್ (BC Nagesh) ಹೇಳಿದರು. ಸರ್ಕಾರಿ ಕನ್ನಡ ಶಾಲೆಗಳಲ್ಲಿ ಬೋಧನೆ ಗುಣಮಟ್ಟವನ್ನು ಹೆಚ್ಚಿಸಿ, ಸದರಿ ಶಾಲೆಗಳನ್ನು ಉಳಿಸಿ ಬೆಳೆಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಗೇಶ್ ಅವರು ಹೇಳುವ ಪ್ರಕಾರ ಉದ್ದೇಶಿತ ಕನ್ನಡ ಮಾಧ್ಯಮ ಮಾದರಿ ಶಾಲೆಗಳಲ್ಲಿ (model schools) ಪ್ರಾಥಮಿಕ ಹಂತದಿಂದಲೇ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಬೋಧಿಸಲು ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಮತ್ತು ಈ ಪ್ರದೇಶಗಳಲ್ಲಿ ಒಂದು ಮಾದರಿ ಶಾಲೆ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯದ ಅನೇಕ ಸರ್ಕಾರೀ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದನ್ನು ಮನಗಂಡಿರುವ ಸಚಿವಾ ನಾಗೇಶ ಅವರು ಶಾಲೆಯ ಎಲ್ಲಾ ತರಗತಿಗಳಿಗೂ ಅಗತ್ಯ ಕೊಠಡಿಗಳ ವ್ಯವಸ್ಥೆ ಮಾಡುವ ಕೆಲಸ ಶೀಘ್ರದಲ್ಲೇ ಅರಂಭಿಸಲಾಗುವುದೆಂದು ಹೇಳಿದರು.

ಮಂಗಳವಾರದಂದು ಕನ್ನಡ ಸಾಹಿತ್ಯ ಪರಿಷತ್ ನಗರದಲ್ಲಿ ಆಯೋಜಿಸಿದ್ದ ದುಂಡು ಮೇಜಿನ ಪರಿಷತನ್ ನಲ್ಲಿ ಭಾಗವಹಿಸಿದ್ದ ಸಚಿವರು ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮೂಲಕ ಪ್ರಯೋಗಳನ್ನು ನಡೆಸಲಾಗಿದೆ, ಮತ್ತು ಸದರಿ ಪ್ರಯೋಗ ಮತ್ತಷ್ಟು ವಿಸ್ತರಿಸಲು ಯೋಗ್ಯವಾಗಿದೆ ಆಂತ ಹೇಳಿದರು.

‘ಹಿಂದಿನ ಸರಕಾರಗಳು ಈ ದಿಶೆಯಲ್ಲಿ ಸತತವಾಗಿ ಕಾರ್ಯೋನ್ಮುಖಗೊಂಡಿದ್ದು ನಿಜವಾದರೂ, ಕೋರ್ಟ್ಗಳ ಹಲವಾರು ಅದೇಶಗಳಿಂದಾಗಿ ಹಿನ್ನಡೆ ಅನುಭವಿಸಬೇಕಾಯಿತು. ಹಾಗೆಯೇ, ಸರ್ಕಾರೀ ಕನ್ನಡ ಶಾಲೆಗಳಲ್ಲಿ ತೀವ್ರವಾಗಿ ಕ್ಷೀಣಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ನಮ್ಮನ್ನು ಆತಂಕ ಮತ್ತು ಚಿಂತೆಗೀಡು ಮಾಡಿದೆ. ಇತ್ತೀಚಿನ ಪ್ರಯೋಗವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಶಿಕ್ಷಣ ಮಾಧ್ಯಮ ಇಂಗ್ಲಿಷ್ ಆಗಿರುವುದರಿಂದ ಅವು ಸಾಕಷ್ಟು ಯಶ ಕಂಡಿವೆ. ಸದರಿ ಅಲೆಯನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲ ಒಟ್ಟಾಗಿ ಶ್ರಮಿಸಬೇಕಿದೆ,’ ಎಂದು ಸಚಿವ ನಾಗೇಶ್ ಹೇಳಿದರು.

ಹಿರಿಯ ಸಾಹಿತಿ ಮತ್ತು ಕನ್ನಡದ ಸುಪ್ರಸಿದ್ಧ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರು ಕನ್ನಡ ಮಾಧ್ಯಮ ಶಾಲೆಳಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ತಲಾ ಸುಮಾರು ರೂ. 3,000 ಗಳ ಹಣಕಾಸಿನ ನೆರವು ಒದಗಿಸಲು ಪ್ರತಿವರ್ಷದ ಬಜೆಟ್ನಲ್ಲಿ ರೂ. 200 ಕೋಟಿಗಳನ್ನು ತೆಗೆದಿರಿಸಬೇಕೆಂದು ನೀಡಿದ ಸಲಹೆಗೆ ಸಚಿವ ನಾಗೇಶ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:  ಇನ್ನಾದರೂ ಪುಸ್ತಕ ತೆರೆದು ಓದಲಿ; ಅನಗತ್ಯವಾಗಿ ಆರ್​ಎಸ್​ಎಸ್​ ಬಗ್ಗೆ ಮಾತಾಡುವುದು ಸರಿಯಲ್ಲ: ಡಿಕೆ ಸುರೇಶ್ ಟ್ವೀಟ್​ಗೆ ಬಿಸಿ ನಾಗೇಶ್ ಪ್ರತಿಕ್ರಿಯೆ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ