AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main, NEET Exams: ಶೀಘ್ರದಲ್ಲೇ ನಡೆಯಲಿವೆ ಜೆಇಇ, ನೀಟ್​ ಪರೀಕ್ಷೆಗಳು; ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಪ್ರಕಟ

ಈ ಬಾರಿ ನೀಟ್​ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆ ಇರಲಿದೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕಳೆದ ವರ್ಷವೇ ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

JEE Main, NEET Exams: ಶೀಘ್ರದಲ್ಲೇ ನಡೆಯಲಿವೆ ಜೆಇಇ, ನೀಟ್​ ಪರೀಕ್ಷೆಗಳು; ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 03, 2021 | 3:15 PM

Share

ಕೊವಿಡ್​ 19 ಸೋಂಕಿನ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ, ಜಂಟಿ ಪ್ರವೇಶ ಪರೀಕ್ಷೆ (JEE) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಗಳನ್ನು ಶೀಘ್ರವೇ ನಡೆಸಲು ಕೇಂದ್ರ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇಂಜನಿಯರಿಂಗ್​ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಹೇಗೆ ನಡೆಸಬಹುದು ಎಂಬ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ಶೀಘ್ರದಲ್ಲೇ ಪರಿಶೀಲನಾ ಸಭೆ ನಡೆಸಲಿದೆ ಎಂದೂ ಹೇಳಲಾಗಿದೆ. ಈ ಎರಡೂ ಪಕ್ಷಗಳು ಆಗಸ್ಟ್​​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಿಟಿಐ ತಿಳಿಸಿದೆ.

ಕೊವಿಡ್ 19 ಕಾರಣದಿಂದ ಬಹುತೇಕ ಎಲ್ಲ ಪರೀಕ್ಷೆಗಳೂ ಬಾಕಿ ಉಳಿದಿವೆ. ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IITs) ಮತ್ತು ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ (NITs)ಗಳ ಪ್ರವೇಶಕ್ಕೆ ನಡೆಲಾಗುವ ಜೆಇಇ-ಸುಧಾರಿತ (JEE-Advanced) ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಈ ಪರೀಕ್ಷೆಗಳು ಜುಲೈ 3ರಂದು ನಡೆಯಬೇಕಿತ್ತು. ಮೇ 1ರಿಂದ ಪ್ರಾರಂಭವಾಗಬೇಕಿದ್ದ ನೀಟ್-ಯುಜಿ ಪರೀಕ್ಷೆಯ ನೋಂದಣಿ ಪ್ರಕ್ರಿಯೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದೇಶಾದ್ಯಂತ ನೀಟ್​ ಮತ್ತು ಜೆಇಇ ಮುಖ್ಯ ಪರೀಕ್ಷೆ ಬರೆಯಲು ಅದೆಷ್ಟೋ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಈ ಬಾರಿ ನೀಟ್​ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆ ಇರಲಿದೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕಳೆದ ವರ್ಷವೇ ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಈ ವರ್ಷದಿಂದ ಜೆಇಇ ಮುಖ್ಯ ಪರೀಕ್ಷೆಯನ್ನು ತಿಂಗಳಿಗೆ ನಾಲ್ಕು ಬಾರಿ ಆಯೋಜಿಸಲೂ ನಿರ್ಧರಿಸಲಾಗಿತ್ತು. ಇದರಲ್ಲಿ ಫೆಬ್ರವರಿ ಮತ್ತು ಮಾರ್ಚ್​ ತಿಂಗಳ ಪರೀಕ್ಷೆಗಳು ಮುಗಿದಿವೆ. ಆದರೆ ಏಪ್ರಿಲ್​ ಮತ್ತು ಮೇ ಸೆಷನ್​ ಪರೀಕ್ಷೆ ಮುಂದೂಡಲ್ಪಟ್ಟಿವೆ.

ಇದನ್ನೂ ಓದಿ: ಧೋನಿಗಾಗಿ ದಾದಾ ಬೆನ್ನಿಂದೆ ಬಿದ್ದಿದ್ದೆ: ಗಂಗೂಲಿ ಮನವೊಲಿಸಲು 10 ದಿನಗಳು ಬೇಕಾಯ್ತು; ಕಿರಣ್ ಮೋರೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್