ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ; ಕೊವಿಡ್ ಇದ್ದರೂ ಪರೀಕ್ಷೆ ಬರೆಯಲು ಅವಕಾಶ
2nd PU Exams: ರಾಜ್ಯದಲ್ಲಿ ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅವರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬೆಂಗಳೂರು: ಈಮುನ್ನ ಘೋಷಿಸಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd PU Exam Results) ತಿರಸ್ಕರಿಸಿ ಪರೀಕ್ಷೆ ಬರೆಯುವುದಾಗಿ ಮನವಿ ಮಾಡಿದ್ದ ವಿದ್ಯಾರ್ಥಿಗಳಿಗೆ 19 ಆಗಸ್ಟ್ ಯಿಂದ ಸೆಪ್ಟೆಂಬರ್ 3 ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅವರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 352 ರಿಪೀಟರ್ಸ್ , 5,093 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು ಖಚಿತಪಟ್ಟಲ್ಲಿ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೊವಿಡ್ ಸೋಂಕಿದ್ದರೂ ಸಹ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು. ಕೇರಳದ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಬಹುದು. ಪರೀಕ್ಷೆ ಕೇಂದ್ರದ ಆಚೆ ಎಲ್ಲರಿಗೂ ಆರೋಗ್ಯ ತಪಾಸಣೆ ಇರಲಿದೆ ಎಂದು ಪಿಯು ಬೋರ್ಡ್ ತಿಳಿಸಿದೆ.
ಈ ಹಿಂದೆ ಪ್ರಕಟವಾಗಿದ್ದ ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿತ್ತು. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣದ 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ 4ನೇ ಸ್ಥಾನ ಲಭ್ಯವಾಗಿದೆ. ಉಡುಪಿ ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಸೆಕೆಂಡ್ ಪಿಯು ಫಲಿತಾಂಶದಲ್ಲಿ ಹಾಸನ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಹಾಸನ ಜಿಲ್ಲೆಯ 104 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರೆತಿದೆ.
ಇದನ್ನೂ ಓದಿ:
2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ
(Examination for Students who Reject 2nd PUC Result from August 19th to September 3rd)
Published On - 3:41 pm, Tue, 17 August 21