Fact Check: ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ನಿಜವೇ?: ಇಲ್ಲಿದೆ ಸತ್ಯಾಂಶ

ಭಾರತದ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಸುದ್ದಿಯ ಸತ್ಯಸತ್ಯಾತೆಯನ್ನು ಟಿವಿ9 ಕನ್ನಡ ಪರಿಶೋಧಿಸಿದ್ದು, ಇದು ಸಂಪೂರ್ಣ ಸುಳ್ಳು ಎಂಬುದು ಕಂಡುಬಂದಿದೆ.

Fact Check: ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ನಿಜವೇ?: ಇಲ್ಲಿದೆ ಸತ್ಯಾಂಶ
ಉಚಿತ ಲ್ಯಾಪ್‌ಟಾಪ್ ಸುದ್ದಿ ನಿಜಾವೇ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 05, 2024 | 10:21 AM

ಭಾರತ ಸರ್ಕಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು ಹರಿದಾಡುತ್ತಿದೆ. ಭಾರತ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಮತ್ತು ಜನರು ಕೆಲವು ವಿವರಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಆಫರ್ ಅನ್ನು ಪಡೆಯಬಹುದು ಎಂದು ಸ್ಕ್ಯಾಮರ್‌ಗಳು ಶೇರ್ ಮಾಡಿದ್ದಾರೆ. ನೋಂದಾಯಿಸಲು ಇದರಲ್ಲೊಂದು ಲಿಂಕ್ ಇದೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಇಂತಹ ಯಾವುದೇ ಅಧಿಕೃತ ಘೋಷಣೆ ಸರ್ಕಾರ ಮಾಡಿಲ್ಲ.

ವೈರಲ್ ಆಗುತ್ತಿರುವುದೇನು?:

‘‘ಅರ್ಜೆಂಟ್, ಭಾರತ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುವ ಮೂಲಕ ಶಿಕ್ಷಣದ ಡಿಜಿಟಲೀಕರಣವನ್ನು ಉತ್ತೇಜಿಸುತ್ತಿದೆ. ಆದ್ದರಿಂದ ನೀವು ಭಾರತ ಸರ್ಕಾರದ ಉಚಿತ ಲ್ಯಾಪ್‌ಟಾಪ್ ಅಡಿಯಲ್ಲಿ ಉಚಿತ ಲ್ಯಾಪ್‌ಟಾಪ್ ಪಡೆಯಲು ಬಯಸಿದರೆ, ಈ ಅಧಿಕೃತ ಸೈಟ್‌ಗೆ ಭೇಟಿ ನೀಡಬಹುದು ಮತ್ತು ಅರ್ಹತೆಯನ್ನು ಪರಿಶೀಲಿಸಬಹುದು https://education.gov.in@tinyurl.com/lndiaFreeLaptop-197’’ ಈ ಸಂದೇಶದಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಒಂದು ವೆಬ್‌ಸೈಟ್‌ಗೆ ಹೋಗುತ್ತಿದೆ. ಇದು ಥೇಟ್ ಸರ್ಕಾರಿ ವೆಬ್​ಸೈಟ್ ಮಾದರಿಯಲ್ಲೇ ಇದೆ. ಆದರೆ, ಇದು ಯಾವುದೇ ಅಧಿಕೃತ ಸರ್ಕಾರಿ ಸೈಟ್ ಅಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಇದಲ್ಲದೆ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಇಲ್ಲ.

ಯಾವುದೇ ಸರ್ಕಾರಿ ಸಂಬಂಧಿತ ಮಾಹಿತಿಯನ್ನು gov.in ನೊಂದಿಗೆ ಕೊನೆಗೊಳ್ಳುವ ಅಧಿಕೃತ ಸೈಟ್‌ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಸದ್ಯ ಹರಿದಾಡುತ್ತಿರುವ ಮೆಸೇಜ್ ವಿದ್ಯಾರ್ಥಿಗಳನ್ನು ದಾರಿತಪ್ಪಿಸಲು ಸಂವಾದಾತ್ಮಕ ಚಿತ್ರವನ್ನು ಹೊಂದಿದೆ. ಇದನ್ನು ತೆರೆದರೆ ವಿದ್ಯಾರ್ಥಿಗಳು ತಮ್ಮ ಹೆಸರು ಮತ್ತು ಅರ್ಹತೆಯನ್ನು ಹಾಕಲು ಕೇಳುತ್ತದೆ. ಮತ್ತು ನೀವು ವಿವರಗಳನ್ನು ನಮೂದಿಸಿದಾಗ, ಸರ್ಕಾರಿ ಸೈಟ್‌ಗೆ ಹೋಗಲು ಈ ಲಿಂಕ್ ಅನ್ನು ವಾಟ್ಸಾಪ್‌ನಲ್ಲಿ ಇತರ ಐದು ಜನರಿಗೆ ಹಂಚಿಕೊಳ್ಳಲು ಕೇಳುತ್ತದೆ.

ಅಲ್ಲದೆ ಫೇಸ್‌ಬುಕ್ ಪೋಸ್ಟ್‌ನ ಶೈಲಿಯಲ್ಲಿ ಇದು ಕಾಣುತ್ತದೆ. ಇದು ಶಿಕ್ಷಣ ಸಚಿವಾಲಯದ ಹೆಸರಿನೊಂದಿಗೆ ಭಾರತ ಸರ್ಕಾರದ ಲೋಗೋವನ್ನು ಕೂಡ ಒಳಗೊಂಡಿದೆ. ಮುಂದೆ ಸ್ಕ್ರೋಲ್ ಮಾಡುವಾಗ ಲೈಕ್ಸ್ ಮತ್ತು ಶೇರ್‌ಗಳ ಸಂಖ್ಯೆಯನ್ನು ಗಮನಿಸಬಹುದು. ಹಾಗೆಯೆ URL ಅನ್ನು ರಿಫ್ರೆಶ್ ಮಾಡಿದಾಗಲೆಲ್ಲಾ ಈ ಸಂಖ್ಯೆಯು ಬದಲಾಗುತ್ತಲೇ ಇರುತ್ತದೆ.

ಇದನ್ನೂ ಓದಿ: ಕಾರು ಅಪಘಾತದ ಮೂಲಕ ಮುಸ್ಲಿಂ ವ್ಯಕ್ತಿ ಹಿಂದೂ ಹುಡುಗಿಯರನ್ನು ಕೊಲ್ಲಲು ಮುಂದಾಗಿದ್ದು ನಿಜವೇ?

ಈ ಪೋಸ್ಟ್ ನಿಜ ಎಂದು ನಂಬುವಂತೆ ಮಾಡಲು ಉಚಿತ ಲ್ಯಾಪ್‌ಟಾಪ್ ಅನ್ನು ಸ್ವೀಕರಿಸಿದ್ದೇವೆ ಎಂದು ಹೇಳಿಕೊಳ್ಳುವ ಜನರು ಮಾಡಿದ ಕಾಮೆಂಟ್‌ಗಳನ್ನು ಸಹ ಇಲ್ಲಿ ತೋರಿಸಲಾಗಿದೆ. ಆದಾಗ್ಯೂ, ಈ ಯಾವುದೇ ಪ್ರೊಫೈಲ್ ಹೆಸರುಗಳನ್ನು ಕ್ಲಿಕ್ ಮಾಡಿದಾಗ, ಈ ಪ್ರೊಫೈಲ್‌ಗಳು ನಿಜವಾಗಿ ಫೇಸ್‌ಬುಕ್ ಪ್ಲಾಟ್‌ಫಾರ್ಮ್‌ನಲ್ಲಿನ ನೈಜ ಪ್ರೊಫೈಲ್‌ಗಳು ಅಥವಾ ಪುಟಗಳಿಗೆ ಸಂಪರ್ಕಗೊಂಡಿಲ್ಲ.

ನಾವು ಸರ್ಕಾರದ ಮೂಲಗಳೊಂದಿಗೆ ಮತ್ತಷ್ಟು ಪರಿಶೀಲಿಸಿದ್ದೇವೆ ಮತ್ತು ಪಿಐಬಿ ಫ್ಯಾಕ್ಟ್ ಚೆಕ್ ಅಂತಹ ಯಾವುದೇ ಪ್ರಕಟಣೆ ಇಲ್ಲ ಮತ್ತು ಇದೇ ರೀತಿಯ ತಪ್ಪು ಮಾಹಿತಿಯೊಂದಿಗೆ ಈ ಹಿಂದೆಯೂ ಮೆಸೇಜ್ ವೈರಲ್ ಆದ ಬಗ್ಗೆ ಪಿಐಬಿ ಫ್ಯಾಕ್ಟ್ ಚೆಕ್ ಎಚ್ಚರಿಕೆ ನೀಡಿರುವುದು ನಮಗೆ ಸಿಕ್ಕಿದೆ.

ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂಬ ಸಂದೇಶವು ನಕಲಿ ಎಂದು ಟಿವಿ9 ಕನ್ನಡ ತನಿಖೆಯಿಂದ ತಿಳಿದುಬಂದಿದೆ. ಇದು ಬಳಕೆದಾರರ ಮೊಬೈಲ್ ಅಥವಾ ಕಂಪ್ಯೂಟರ್​ಗೆ ವೈರಸ್ ಅಟ್ಯಾಕ್ ಮಾಡುವ ಸಂಚಾಗಿದೆ. ಟಿವಿ9 ಕನ್ನಡ ತನ್ನ ಓದುಗರನ್ನು ಈ ರೀತಿಯ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡದಂತೆ ಕೇಳಿಕೊಳ್ಳುತ್ತದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Tue, 5 November 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್