Fact Check: 960,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅನ್ನು ಉಚಿತವಾಗಿ ನೀಡುತ್ತಿರುವುದು ನಿಜವೇ?

ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದ ಟಿವಿ9 ಕನ್ನಡ ಸುಳ್ಳು ಹೇಳಿಕೆಯೊಂದಿಗೆ ಈ ಪೋಸ್ಟ್ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಸಂದೇಶವನ್ನು ತನಿಖೆ ಮಾಡಲು ನಾವು ಗೂಗಲ್​ನಲ್ಲಿ ಸಂಬಂಧಿತ ಕೀವರ್ಡ್‌ಗಳನ್ನು ಹುಡುಕಿದ್ದೇವೆ. ಲ್ಯಾಪ್‌ಟಾಪ್ ವಿತರಣೆಗೆ ಸಂಬಂಧಿಸಿದಂತೆ ಅಂತಹ ಯೋಜನೆಯ ಬಗ್ಗೆ ನಮಗೆ ಯಾವುದೇ ಸುದ್ದಿ ಕಂಡುಬಂದಿಲ್ಲ.

Fact Check: 960,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅನ್ನು ಉಚಿತವಾಗಿ ನೀಡುತ್ತಿರುವುದು ನಿಜವೇ?
ಫ್ಯಾಕ್ಟ್​ಚೆಕ್
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 19, 2024 | 12:29 PM

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯ ಮೆಸೇಜ್ ಸಾಮಾಜಿಕ ಮಾಧ್ಯಮ ವೇದಿಕೆಯಾದ ವಾಟ್ಸ್​ಆ್ಯಪ್​ನಲ್ಲಿ ಲಿಂಕ್‌ನೊಂದಿಗೆ ವೈರಲ್ ಆಗುತ್ತಿದೆ. ವೈರಲ್ ಸಂದೇಶದಲ್ಲಿ, ‘‘ವಿದ್ಯಾರ್ಥಿ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಂದಾಗಿ ಸ್ವಂತ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟಕ್ಕೆ ಅನುಗುಣವಾಗಿ ಲ್ಯಾಪ್‌ಟಾಪ್‌ನ ಅಗತ್ಯವನ್ನು ಪೂರೈಸಲು ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆಯಾಗಿದೆ’’ ಎಂದು ಮಾಹಿತಿ ಹರಿದಾಡುತ್ತಿದೆ.

ಅಲ್ಲದೆ 2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗಳನ್ನು ಸ್ವೀಕರಿಸಲು ಆರಂಭಿಸಿದ್ದಾರೆ. ಇಲ್ಲಿ ನೋಂದಾಯಿಸಿ ಮತ್ತು ಅರ್ಜಿ ಸಲ್ಲಿಸಿ ಎಂದು https://lc.ke/Students-Free-Laptop ಈ ಲಿಂಕ್ ಅನ್ನು ನೀಡಲಾಗಿದೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದ ಟಿವಿ9 ಕನ್ನಡ ಸುಳ್ಳು ಹೇಳಿಕೆಯೊಂದಿಗೆ ಈ ಪೋಸ್ಟ್ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಸಂದೇಶವನ್ನು ತನಿಖೆ ಮಾಡಲು ನಾವು ಗೂಗಲ್​ನಲ್ಲಿ ಸಂಬಂಧಿತ ಕೀವರ್ಡ್‌ಗಳನ್ನು ಹುಡುಕಿದ್ದೇವೆ. ಲ್ಯಾಪ್‌ಟಾಪ್ ವಿತರಣೆಗೆ ಸಂಬಂಧಿಸಿದಂತೆ ಅಂತಹ ಯೋಜನೆಯ ಬಗ್ಗೆ ನಮಗೆ ಯಾವುದೇ ಸುದ್ದಿ ಕಂಡುಬಂದಿಲ್ಲ. ಈ ಸುದ್ದಿ ನಿಜವಾಗಿದ್ದರೆ ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿರುತ್ತಿತ್ತು.

ಇದಲ್ಲದೆ, ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಇದಕ್ಕೆ ಸಂಬಂಧಿಸಿದ ಪೋಸ್ಟ್ ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಈ ವೈರಲ್ ಮೆಸೇಜ್ ಸುಳ್ಳು ಎಂದು ಇವರು ಹೇಳಿದ್ದಾರೆ. ಅಲ್ಲದೆ ಇಂತಹ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ಎಂದು ಕೇಳಿಕೊಂಡಿದೆ. ಪಿಐಬಿಯ ಪೋಸ್ಟ್ ಹೀಗಿದೆ, ‘‘ನೀವು ಸಹ ವಾಟ್ಸಾಪ್‌ನಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ ಸಂದೇಶವನ್ನು ಸ್ವೀಕರಿಸಿದ್ದೀರಾ? ಜಾಗರೂಕರಾಗಿರಿ, ಇದು ನಿಮ್ಮನ್ನು ವಂಚಿಸಲು ಉದ್ದೇಶಿಸಿರುವ ಹಗರಣವಾಗಿದೆ, ಅಂತಹ ಅನುಮಾನಾಸ್ಪದ ಲಿಂಕ್‌ಗಳನ್ನು ಎಂದಿಗೂ ಕ್ಲಿಕ್ ಮಾಡಬೇಡಿ ಮತ್ತು ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವಾಗ ಜಾಗರೂಕರಾಗಿರಿ.’’ ಎಂದು ಬರೆದುಕೊಂಡಿದೆ.

ಈ ಮೂಲಕ ವೈರಲ್ ಸಂದೇಶವು ನಕಲಿ ಎಂದು ಟಿವಿ9 ಕನ್ನಡ ತನ್ನ ಫ್ಯಾಕ್ಟ್ ಚೆಕ್​ನಿಂದ ಸ್ಪಷ್ಟಪಡಿಸಿದೆ. ಉಚಿತ ಲ್ಯಾಪ್‌ಟಾಪ್ ವಿತರಣೆಯ ಅಂತಹ ಯಾವುದೇ ಯೋಜನೆಯನ್ನು ಜಾರಿಯಲ್ಲಿಲ್ಲ. ಇದು ಜನರ ವೈಯಕ್ತಿಕ ಡೇಟಾವನ್ನು ಕದಿಯುವ ಹಗರಣವಾಗಿರಬಹುದು. ಅಂತಹ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ ಮತ್ತು ಸೈಬರ್ ವಂಚನೆಯ ಬಗ್ಗೆ ಎಚ್ಚರದಿಂದಿರಿ.

ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್:

ಕಳೆದ ವಾರ ಇದೇ ರೀತಿಯ ಮತ್ತೊಂದು ಪೋಸ್ಟ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಭಾರತ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಮತ್ತು ಜನರು ಕೆಲವು ವಿವರಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಆಫರ್ ಅನ್ನು ಪಡೆಯಬಹುದು ಎಂದು ಸ್ಕ್ಯಾಮರ್‌ಗಳು ಶೇರ್ ಮಾಡಿದ್ದರು. ನೋಂದಾಯಿಸಲು ಇದರಲ್ಲೊಂದು ಲಿಂಕ್ ಕೂಡ ಇತ್ತು. ಆದರೆ, ಇದುಕೂಡ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಇಂತಹ ಯಾವುದೇ ಅಧಿಕೃತ ಘೋಷಣೆ ಸರ್ಕಾರ ಮಾಡಿಲ್ಲ.

ಈ ಸಂದೇಶದಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಒಂದು ವೆಬ್‌ಸೈಟ್‌ಗೆ ಹೋಗುತ್ತಿದೆ. ಇದು ಥೇಟ್ ಸರ್ಕಾರಿ ವೆಬ್​ಸೈಟ್ ಮಾದರಿಯಲ್ಲೇ ಇದೆ. ಆದರೆ, ಇದು ಯಾವುದೇ ಅಧಿಕೃತ ಸರ್ಕಾರಿ ಸೈಟ್ ಅಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಇದಲ್ಲದೆ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಇಲ್ಲ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ