ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯ ಮೆಸೇಜ್ ಸಾಮಾಜಿಕ ಮಾಧ್ಯಮ ವೇದಿಕೆಯಾದ ವಾಟ್ಸ್ಆ್ಯಪ್ನಲ್ಲಿ ಲಿಂಕ್‌ನೊಂದಿಗೆ ವೈರಲ್ ಆಗುತ್ತಿದೆ. ವೈರಲ್ ಸಂದೇಶದಲ್ಲಿ, ‘‘ವಿದ್ಯಾರ್ಥಿ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಂದಾಗಿ ಸ್ವಂತ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟಕ್ಕೆ ಅನುಗುಣವಾಗಿ ಲ್ಯಾಪ್‌ಟಾಪ್‌ನ ಅಗತ್ಯವನ್ನು ಪೂರೈಸಲು ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆಯಾಗಿದೆ’’ ಎಂದು ಮಾಹಿತಿ ಹರಿದಾಡುತ್ತಿದೆ.
ಅಲ್ಲದೆ 2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗಳನ್ನು ಸ್ವೀಕರಿಸಲು ಆರಂಭಿಸಿದ್ದಾರೆ. ಇಲ್ಲಿ ನೋಂದಾಯಿಸಿ ಮತ್ತು ಅರ್ಜಿ ಸಲ್ಲಿಸಿ ಎಂದು https://lc.ke/Students-Free-Laptop ಈ ಲಿಂಕ್ ಅನ್ನು ನೀಡಲಾಗಿದೆ.
ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದ ಟಿವಿ9 ಕನ್ನಡ ಸುಳ್ಳು ಹೇಳಿಕೆಯೊಂದಿಗೆ ಈ ಪೋಸ್ಟ್ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಸಂದೇಶವನ್ನು ತನಿಖೆ ಮಾಡಲು ನಾವು ಗೂಗಲ್ನಲ್ಲಿ ಸಂಬಂಧಿತ ಕೀವರ್ಡ್‌ಗಳನ್ನು ಹುಡುಕಿದ್ದೇವೆ. ಲ್ಯಾಪ್‌ಟಾಪ್ ವಿತರಣೆಗೆ ಸಂಬಂಧಿಸಿದಂತೆ ಅಂತಹ ಯೋಜನೆಯ ಬಗ್ಗೆ ನಮಗೆ ಯಾವುದೇ ಸುದ್ದಿ ಕಂಡುಬಂದಿಲ್ಲ. ಈ ಸುದ್ದಿ ನಿಜವಾಗಿದ್ದರೆ ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿರುತ್ತಿತ್ತು.
ಇದಲ್ಲದೆ, ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಇದಕ್ಕೆ ಸಂಬಂಧಿಸಿದ ಪೋಸ್ಟ್ ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಈ ವೈರಲ್ ಮೆಸೇಜ್ ಸುಳ್ಳು ಎಂದು ಇವರು ಹೇಳಿದ್ದಾರೆ. ಅಲ್ಲದೆ ಇಂತಹ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ಎಂದು ಕೇಳಿಕೊಂಡಿದೆ.
ಪಿಐಬಿಯ ಪೋಸ್ಟ್ ಹೀಗಿದೆ, ‘‘ನೀವು ಸಹ ವಾಟ್ಸಾಪ್‌ನಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ ಸಂದೇಶವನ್ನು ಸ್ವೀಕರಿಸಿದ್ದೀರಾ? ಜಾಗರೂಕರಾಗಿರಿ, ಇದು ನಿಮ್ಮನ್ನು ವಂಚಿಸಲು ಉದ್ದೇಶಿಸಿರುವ ಹಗರಣವಾಗಿದೆ, ಅಂತಹ ಅನುಮಾನಾಸ್ಪದ ಲಿಂಕ್‌ಗಳನ್ನು ಎಂದಿಗೂ ಕ್ಲಿಕ್ ಮಾಡಬೇಡಿ ಮತ್ತು ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವಾಗ ಜಾಗರೂಕರಾಗಿರಿ.’’ ಎಂದು ಬರೆದುಕೊಂಡಿದೆ.
Did you also receive a #WhatsApp message offering free laptops ⁉️
Beware⚠️ This is a scam to dupe you ‼️#PIBFactCheck
🔹Never click on such suspicious links
🔹Be cautious while sharing personal information. pic.twitter.com/ZXXmCWGw0Z
— PIB Fact Check (@PIBFactCheck) November 17, 2024
ಈ ಮೂಲಕ ವೈರಲ್ ಸಂದೇಶವು ನಕಲಿ ಎಂದು ಟಿವಿ9 ಕನ್ನಡ ತನ್ನ ಫ್ಯಾಕ್ಟ್ ಚೆಕ್ನಿಂದ ಸ್ಪಷ್ಟಪಡಿಸಿದೆ. ಉಚಿತ ಲ್ಯಾಪ್‌ಟಾಪ್ ವಿತರಣೆಯ ಅಂತಹ ಯಾವುದೇ ಯೋಜನೆಯನ್ನು ಜಾರಿಯಲ್ಲಿಲ್ಲ. ಇದು ಜನರ ವೈಯಕ್ತಿಕ ಡೇಟಾವನ್ನು ಕದಿಯುವ ಹಗರಣವಾಗಿರಬಹುದು. ಅಂತಹ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ ಮತ್ತು ಸೈಬರ್ ವಂಚನೆಯ ಬಗ್ಗೆ ಎಚ್ಚರದಿಂದಿರಿ.
ಕಳೆದ ವಾರ ಇದೇ ರೀತಿಯ ಮತ್ತೊಂದು ಪೋಸ್ಟ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಭಾರತ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಮತ್ತು ಜನರು ಕೆಲವು ವಿವರಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಆಫರ್ ಅನ್ನು ಪಡೆಯಬಹುದು ಎಂದು ಸ್ಕ್ಯಾಮರ್‌ಗಳು ಶೇರ್ ಮಾಡಿದ್ದರು. ನೋಂದಾಯಿಸಲು ಇದರಲ್ಲೊಂದು ಲಿಂಕ್ ಕೂಡ ಇತ್ತು. ಆದರೆ, ಇದುಕೂಡ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಇಂತಹ ಯಾವುದೇ ಅಧಿಕೃತ ಘೋಷಣೆ ಸರ್ಕಾರ ಮಾಡಿಲ್ಲ.
ಈ ಸಂದೇಶದಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಒಂದು ವೆಬ್‌ಸೈಟ್‌ಗೆ ಹೋಗುತ್ತಿದೆ. ಇದು ಥೇಟ್ ಸರ್ಕಾರಿ ವೆಬ್ಸೈಟ್ ಮಾದರಿಯಲ್ಲೇ ಇದೆ. ಆದರೆ, ಇದು ಯಾವುದೇ ಅಧಿಕೃತ ಸರ್ಕಾರಿ ಸೈಟ್ ಅಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಇದಲ್ಲದೆ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಇಲ್ಲ.
ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ