ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ. 29 ಕೊನೆ ದಿನ
ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ನೀಡಲಾಗುತ್ತಿರುವ 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಾಗಿ ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಯೋಜನೆಯ ಮುಖ್ಯ ಉದ್ದೇಶವೆಂದರೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದು.
ಬೆಂಗಳೂರು, ಫೆಬ್ರವರಿ 17: 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ (raita vidya nidhi scholarship) ಕ್ಕೆ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರವರೆಗೆ ಅವಕಾಶ ನೀಡಲಾಗಿದೆ. ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಮೀರಿರಬಾರದು ಎಂಬ ಷರತ್ತು ವಿಧಿಸಿರುವ ಹಿನ್ನೆಲೆ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆ. 29 ರೊಳಗೆ ಸಲ್ಲಿಸುವಂತೆ ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಉದ್ದೇಶ
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಯೋಜನೆಯ ಮುಖ್ಯ ಉದ್ದೇಶವೆಂದರೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದು. ಆರ್ಥಿಕ ಅಡೆತಡೆಗಳ ನಡುವೆಯೂ ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಬಹುದಾಗಿದೆ. ಈ ಯೋಜನೆಯ ಮೂಲಕ 2500 ರೂ ಮತ್ತು ಗರಿಷ್ಠ 11000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಫೆಬ್ರವರಿ 12 ರಂದು ಯುಎಸ್ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಮೇಳ
ಈ ಯೋಜನೆಯು ರೈತರ ಮಕ್ಕಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುತ್ತದೆ. ಈ ಯೋಜನೆ ಜಾರಿಯಿಂದ ರೈತರ ಮಕ್ಕಳು ಶಿಕ್ಷಣ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ಈ ಯೋಜನೆಯು ರಾಜ್ಯದ ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸಲಿದೆ.
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಪ್ರಯೋಜನಗಳು
- ಆಗಸ್ಟ್ 7 ರಂದು ಕರ್ನಾಟಕ ಸರ್ಕಾರವು ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಲಾಗಿದೆ.
- ಈ ಯೋಜನೆಯ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
- ಉನ್ನತ ಶಿಕ್ಷಣ ಪಡೆಯುತ್ತಿರುವ ರೈತರ ಮಕ್ಕಳಿಗೆ 2500 ರಿಂದ 11000 ರೂ.ವರೆಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
- ವಿದ್ಯಾರ್ಥಿವೇತನದ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
- ಈ ಯೋಜನೆಯು ಕರ್ನಾಟಕದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣವನ್ನು ಪಡೆಯುವುದನ್ನು ಖಚಿತಪಡಿಸುತ್ತದೆ.
- ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
- ಈ ಸ್ಕಾಲರ್‌ಶಿಪ್‌ನಿಂದ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುತ್ತಿದೆ.
- ರೈತರ ಮಕ್ಕಳು ಈಗಾಗಲೇ ಬೇರೆ ಯಾವುದೇ ವಿದ್ಯಾರ್ಥಿವೇತನ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದರೂ ಸಹ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:36 pm, Sat, 17 February 24