ಬೆಂಗಳೂರು, ಫೆಬ್ರವರಿ 17: 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ (raita vidya nidhi scholarship) ಕ್ಕೆ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರವರೆಗೆ ಅವಕಾಶ ನೀಡಲಾಗಿದೆ. ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಮೀರಿರಬಾರದು ಎಂಬ ಷರತ್ತು ವಿಧಿಸಿರುವ ಹಿನ್ನೆಲೆ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆ. 29 ರೊಳಗೆ ಸಲ್ಲಿಸುವಂತೆ ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಯೋಜನೆಯ ಮುಖ್ಯ ಉದ್ದೇಶವೆಂದರೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದು. ಆರ್ಥಿಕ ಅಡೆತಡೆಗಳ ನಡುವೆಯೂ ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಬಹುದಾಗಿದೆ. ಈ ಯೋಜನೆಯ ಮೂಲಕ 2500 ರೂ ಮತ್ತು ಗರಿಷ್ಠ 11000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಫೆಬ್ರವರಿ 12 ರಂದು ಯುಎಸ್ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಮೇಳ
ಈ ಯೋಜನೆಯು ರೈತರ ಮಕ್ಕಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುತ್ತದೆ. ಈ ಯೋಜನೆ ಜಾರಿಯಿಂದ ರೈತರ ಮಕ್ಕಳು ಶಿಕ್ಷಣ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ಈ ಯೋಜನೆಯು ರಾಜ್ಯದ ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:36 pm, Sat, 17 February 24