ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ
ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕವನ್ನು ಶೇಕಡಾ 7 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಈ ನಿಯಮ ಅನ್ವಯವಾಗುತ್ತದೆ.
ಬೆಂಗಳೂರು, ಆಗಸ್ಟ್ 5: ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾದ ಇಂಜಿನಿಯರಿಂಗ್ (Engineering) ಸೀಟುಗಳ ಶುಲ್ಕ ಶೇಕಡಾ 7 ರಷ್ಟು ಹೆಚ್ಚಳಗೊಳಿಸಲಾಗಿದೆ. ಸದ್ಯ ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ (Deemed University) ಸರ್ಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದೆ.
ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 33 ಸಾವಿರ ರೂಪಾಯಿ ಪ್ರವೇಶ ಶುಲ್ಕ ಇತ್ತು. ಈಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಶುಲ್ಕ 40,000 ರೂಪಾಯಿಗೆ ಏರಿಕೆಯಾಗಿದೆ. ಈ ಹಿಂದೆಯೂ ಶೇಕಡಾ 10 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಸದ್ಯ ಸರ್ಕಾರವು ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸಿದೆ.
ಇದನ್ನೂ ಓದಿ: ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್
ಸದ್ಯ, ಶೇ.7 ರಷ್ಟು ಶುಲ್ಕು ಹೆಚ್ಚಳದಿಂದಾಗಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ 40,000 ರೂ. ಆಗಿದ್ದು, ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಶುಲ್ಕ 68,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ., ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ. ಆಗಿದೆ.
ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ