ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕವನ್ನು ಶೇಕಡಾ 7 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಈ ನಿಯಮ ಅನ್ವಯವಾಗುತ್ತದೆ.

ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ
ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ (ಸಾಂದರ್ಭಿಕ ಚಿತ್ರ)
Image Credit source: iStock Photo
Edited By: Rakesh Nayak Manchi

Updated on: Aug 05, 2023 | 7:40 PM

ಬೆಂಗಳೂರು, ಆಗಸ್ಟ್ 5: ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾದ ಇಂಜಿನಿಯರಿಂಗ್ (Engineering)​ ಸೀಟುಗಳ ಶುಲ್ಕ ಶೇಕಡಾ 7 ರಷ್ಟು ಹೆಚ್ಚಳಗೊಳಿಸಲಾಗಿದೆ. ಸದ್ಯ ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ (Deemed University) ಸರ್ಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದೆ.

ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 33 ಸಾವಿರ ರೂಪಾಯಿ ಪ್ರವೇಶ ಶುಲ್ಕ ಇತ್ತು. ಈಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಶುಲ್ಕ 40,000 ರೂಪಾಯಿಗೆ ಏರಿಕೆಯಾಗಿದೆ. ಈ ಹಿಂದೆಯೂ ಶೇಕಡಾ 10 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಸದ್ಯ ಸರ್ಕಾರವು ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸಿದೆ.

ಇದನ್ನೂ ಓದಿ: ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​

ಸದ್ಯ, ಶೇ.7 ರಷ್ಟು ಶುಲ್ಕು ಹೆಚ್ಚಳದಿಂದಾಗಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ 40,000 ರೂ. ಆಗಿದ್ದು, ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಶುಲ್ಕ 68,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ., ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ. ಆಗಿದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us