AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg News: 10 ಲಕ್ಷದ ವರೆಗೆ ಸುಲಭ ಶಿಕ್ಷಣ ಸಾಲ, ಶೀಘ್ರದಲ್ಲಿಯೇ ಅಧಿಸೂಚನೆ ಸಾಧ್ಯತೆ

Education Loan: ಬ್ಯಾಂಕುಗಳು ಈ ಮೊತ್ತದ ಸಾಲ ಮಂಜೂರು ಮಾಡಲು ಯಾವುದೇ ಅಡಮಾನಕ್ಕೆ ಒತ್ತಾಯಿಸುವಂತಿಲ್ಲ

Bigg News: 10 ಲಕ್ಷದ ವರೆಗೆ ಸುಲಭ ಶಿಕ್ಷಣ ಸಾಲ, ಶೀಘ್ರದಲ್ಲಿಯೇ ಅಧಿಸೂಚನೆ ಸಾಧ್ಯತೆ
ಶಿಕ್ಷಣ ಸಾಲದ ಮಿತಿ ಹೆಚ್ಚಳಕ್ಕೆ ಚಿಂತನೆ ನಡೆದಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 13, 2022 | 8:45 AM

ಶಿಕ್ಷಣ ಸಾಲಕ್ಕೆ ಖಾತ್ರಿಯ ಮಿತಿಯನ್ನು (Education Loan) ₹ 7.5 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಿಸಬೇಕು ಎನ್ನುವ ಬ್ಯಾಂಕ್ ಆಡಳಿತ ಮಂಡಳಿಗಳ (Bank Association) ಪ್ರಸ್ತಾವಕ್ಕೆ ಕೇಂದ್ರ ಹಣಕಾಸು ಇಲಾಖೆಯು (Ministry of Finance) ಹಸಿರು ನಿಶಾನೆ ತೋರಿಸಿದ್ದು, ಈ ಸಂಬಂಧ ಶೀಘ್ರ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ. ಇದರೊಂದಿಗೆ ಶಿಕ್ಷಣ ಸಾಲ ವಿತರಣೆಗೆ ಇರುವ ಷರತ್ತುಗಳನ್ನೂ ಸಡಿಲಿಸುವ ಸಾಧ್ಯತೆಯಿದ್ದು ಈ ಬೆಳವಣಿಗೆಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಶಿಕ್ಷಣದ ವೆಚ್ಚ (Education Expence) ಏರುತ್ತಿರುವ ಈ ಸಂದರ್ಭದಲ್ಲಿ ಇಂಥ ಕ್ರಮ ಅತ್ಯಗತ್ಯವಾಗಿತ್ತು ಎಂದು ಶೈಕ್ಷಣಿಕ ಸಮಾಲೋಚಕರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮವು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ (Public Sector Banks – PSB) ಸಾಲ ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬ ಮತ್ತು ಸಾಲದ ಅರ್ಜಿಗಳ ನಿರಾಕರಣೆಗೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರವು ಸಾಲದ ಖಾತ್ರಿಯನ್ನು ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಪ್ರಸ್ತುತ, ₹ 7.5 ಲಕ್ಷದವರೆಗಿನ ಶಿಕ್ಷಣ ಸಾಲ ಪಡೆಯಲು ಯಾವುದೇ ಭದ್ರತೆ ಬೇಕಿಲ್ಲ. ಅಂದರೆ ಬ್ಯಾಂಕುಗಳು ಈ ಮೊತ್ತದ ಸಾಲ ಮಂಜೂರು ಮಾಡಲು ಯಾವುದೇ ಅಡಮಾನಕ್ಕೆ ಒತ್ತಾಯಿಸುವಂತಿಲ್ಲ. ಇದಕ್ಕೂ ಹೆಚ್ಚಿನ ಮೊತ್ತದ ಸಾಲ ಪಡೆಯಲು ನಿಯಮಗಳು ಬಿಗಿಯಾಗಿವೆ.

ಇದೀಗ ಸಾಲದ ಖಾತ್ರಿ ಮಿತಿಯನ್ನು ಶೇ 33ರಷ್ಟು ಹೆಚ್ಚಿಸುವ ಬಗ್ಗೆಯೂ ಹಣಕಾಸು ಸಚಿವಾಲಯವು ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ ಆರಂಭಿಸಿದೆ ಎಂದು ‘ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಪ್ರಸ್ತುತ ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಜ್ಯ ಸರ್ಕಾರಗಳು ಶಿಕ್ಷಣ ಸಾಲದ ಮಿತಿಯನ್ನು ₹ 10 ಲಕ್ಷಕ್ಕೆ ಹೆಚ್ಚಿಸಲು ಹೆಚ್ಚುವರಿ ಖಾತ್ರಿ ಕೊಡುತ್ತಿವೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೇ ಖಾತ್ರಿಯ ಮಿತಿಯನ್ನು ಹೆಚ್ಚಿಸುವ ಮೂಲಕ ದೇಶದ ಎಲ್ಲರಿಗೂ ಸಮಾನವಾಗಿ ಶಿಕ್ಷಣ ಸಾಲದ ಅನುಕೂಲ ಸಿಗುತ್ತದೆ.

ಶಿಕ್ಷಣ ಸಾಲ ಪಡೆದ ವಿದ್ಯಾರ್ಥಿಗಳು ನಂತರದ ದಿನಗಳಲ್ಲಿ ಮರುಪಾವತಿ ಬಗ್ಗೆ ಗಮನ ಹರಿಸುತ್ತಿಲ್ಲ. ಇದರಿಂದ ಸುಸ್ತಿ ಸಾಲಗಳ ಪ್ರಮಾಣ ಹೆಚ್ಚಾಗುತ್ತಿದೆ ಎಂದು ವಾದಿಸುತ್ತಿರುವ ಸರ್ಕಾರಿ ಬ್ಯಾಂಕುಗಳು ಶಿಕ್ಷಣ ಸಾಲ ಮಂಜೂರು ಮಾಡಲು ಹಿಂಜರಿಯುತ್ತಿವೆ. ಈ ಬಗ್ಗೆಯೂ ಹಣಕಾಸು ಇಲಾಖೆ ಗಮನ ಹರಿಸಿದ್ದು, ನಗಣ್ಯ ಎನಿಸುವಂಥ, ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡಿ ಸಾಲ ನಿರಾಕರಿಸಬೇಡಿ ಎಂದು ತಾಕೀತು ಮಾಡಿದೆ. ಇದಕ್ಕೆ ಪ್ರತಿಯಾಗಿ ಬ್ಯಾಂಕ್​ಗಳು ಖಾತರಿ ಮಿತಿ ಹೆಚ್ಚಿಸಬೇಕು ಎಂದು ಕೋರಿವೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರಿ ಬ್ಯಾಂಕ್​ಗಳಿಗೆ ₹ 20,000 ಕೋಟಿ ಶಿಕ್ಷಣ ಸಾಲ ವಿತರಿಸಬೇಕೆನ್ನುವ ಗುರಿ ನೀಡಲಾಗಿದೆ. ಮೊದಲ ತ್ರೈಮಾಸಿಕದ ಅಂತ್ಯದ ಹೊತ್ತಿಗೆ ಬ್ಯಾಂಕುಗಳು ಈ ಗುರಿಯ ಪೈಕಿ ಶೇ 19ರಷ್ಟನ್ನು ಮುಟ್ಟಿದ್ದವು. ಈ ಗುರಿಯನ್ನು ಸಾಧಿಸಲು ಬ್ಯಾಂಕುಗಳು ಹೆಚ್ಚು ಸಾಲ ನೀಡಲು ಪ್ರಾರಂಭಿಸಬೇಕೆಂದು ಸರ್ಕಾರವು ಸೂಚಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸಭೆಯಲ್ಲಿ ಹಣಕಾಸು ಇಲಾಖೆಯು ಶಿಕ್ಷಣ ಸಾಲ ವಿತರಣೆಯಲ್ಲಿ ಏಕರೂಪತೆ ಸಾಧಿಸುವ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿತ್ತು. ಆದರೆ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ‘ದಿ ಇಂಡಿಯನ್ ಎಕ್ಸ್​ಪ್ರೆಸ್’ ವರದಿಗಾರರು ಮಾಹಿತಿ ಹಕ್ಕು ಅರ್ಜಿಯ ಮೂಲಕ ಸಭೆಯ ವಿವರಗಳನ್ನು ಪಡೆದು ಬಹಿರಂಗಪಡಿಸಿದ್ದಾರೆ.

‘ಭಾರತೀಯ ಬ್ಯಾಂಕ್​ಗಳ ಒಕ್ಕೂಟವು ಬ್ಯಾಂಕ್​ಗಳ ಆಡಳಿತ ಮಂಡಳಿಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯಗಳನ್ನು ಅಧರಿಸಿ ಶಿಕ್ಷಣ ಸಾಲದ ವಿಮೆಗೆ ಏಕರೂಪ ಶುಲ್ಕ ನಿಗದಿಪಡಿಸುವ ಬಗ್ಗೆ ವರದಿ ನೀಡಲಿ’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ದೆಹಲಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಹೆಚ್ಚಿನ ಸಾಲದ ಅನುಕೂಲವನ್ನು ದೇಶವ್ಯಾಪಿ ವಿಸ್ತರಿಸುವ ಬಗ್ಗೆಯೂ ಅಧಿಕಾರಿಗಳು ಒಲವು ವ್ಯಕ್ತಪಡಿಸಿದ್ದರು.

ಖಾಸಗಿ ಬ್ಯಾಂಕ್​ಗಳು ಶಿಕ್ಷಣ ಸಾಲ ನೀಡಲು ಹೆಚ್ಚು ಒಲವು ತೋರುತ್ತಿಲ್ಲ. ಶೇ 90ರಷ್ಟು ಶಿಕ್ಷಣ ಸಾಲವನ್ನು ಸರ್ಕಾರಿ ಬ್ಯಾಂಕ್​ಗಳೇ ವಿತರಿಸುತ್ತಿವೆ. ಸರ್ಕಾರಿ ಬ್ಯಾಂಕ್​ಗಳು ವಿತರಿಸಿರುವ ಶಿಕ್ಷಣ ಸಾಲದ ಪೈಕಿ ಶೇ 8 ರಷ್ಟು ಅನುತ್ಪಾದಕ ಆಸ್ತಿಯಾಗಿ ಬದಲಾಗಿದೆ. ಬ್ಯಾಂಕಿಂಗ್ ವಲಯದ ಒಟ್ಟು ಅನುತ್ಪಾದಕ ಆಸ್ತಿಯು ಮಾರ್ಚ್ 2022ರ ವೇಳೆಗೆ ಶೇ 6ಕ್ಕಿಂತ ಕಡಿಮೆಯಾಗಿದೆ. ಒಟ್ಟು ಎನ್​ಪಿಎ ಸರಾಸರಿಗಿಂತಲೂ ಶಿಕ್ಷಣ ಸಾಲದ ಎನ್​ಪಿಎ ಸರಾಸರಿ ಹೆಚ್ಚಾಗಿರುವುದರಿಂದ ಬ್ಯಾಂಕ್​ಗಳು ಸಾಲ ವಿತರಣೆಗೆ ಹಿಂದೇಟು ಹಾಕುತ್ತಿವೆ.

ಮಾರ್ಚ್ ಮತ್ತು ಅಕ್ಟೋಬರ್ 2020 ರ ನಡುವೆ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹೊಸದಾಗಿ ಶಿಕ್ಷಣ ಸಾಲ ವಿತರಿಸಲಾಗಿದೆ. 2022ರ ಮಾರ್ಚ್​ನಲ್ಲಿ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಸೆಪ್ಟೆಂಬರ್ ಅಂತ್ಯದವರೆಗೆ ಶಿಕ್ಷಣ ಕಂಪನಿಗಳು ₹ 11,000 ಕೋಟಿ ಶಿಕ್ಷಣ ಸಾಲ ನೀಡಿವೆ.

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ