ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ಬೆಂಗಳೂರಿನ ನಾಗರಬಾವಿ ಬಳಿಯ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಸಿಬಿಎಸ್​ಇ ಬೋರ್ಡ್ ಸಿಲಬಸ್​ ಎಂದು ಹೇಳಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲಾ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ರು. ಹೀಗಾಗಿ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ
ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ
Follow us
Prajwal D'Souza
| Updated By: Digi Tech Desk

Updated on:Apr 20, 2023 | 12:11 PM

ಬೆಂಗಳೂರು: ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ (orchid school)ಪದೇ ಪದೆ ವಿವಾದದಲ್ಲಿ ಸಿಲುಕುತ್ತಲೇ ಇದೆ. ಇದೀಗ ಬೆಂಗಳೂರಿನ(Bengaluru) ನಾಗರಬಾವಿಯಲ್ಲಿರುವ ಆರ್ಕಿಡ್ ಸ್ಕೂಲ್‌ನಾ ಮೋಸದಾಟಕ್ಕೆ ಪೋಷಕರು ಸಿಡಿದೆದ್ದಿದ್ದಾರೆ. ಯಾಕಂದ್ರೆ ಸಿಬಿಎಸ್‌ಇ ಶಿಕ್ಷಣಕ್ಕೆ ಮಾನ್ಯತೆಯೇ ಪಡೆದಿಲ್ಲ. ಆದ್ರೂ ಪೋಷಕರ ಬಳಿ ಸುಳ್ಳು ಹೇಳಿ, ಸಿಬಿಎಸ್​​ಸಿ ಪಾಠ ಮಾಡುತ್ತೇವೆ ಎಂದು ಲಕ್ಷ ಲಕ್ಷ ಫೀಸ್ ಕಿತ್ತುಕೊಂಡಿದೆ. ಆದರೆ ಈಗ ಸ್ಟೇಟ್ ಸಿಲೆಬಸ್‌ನಲ್ಲಿ ಎಕ್ಸಾಂ ಬರೆಯಿಸಲು ಮುಂದಾಗಿರುವುದು ಪೋಷಕರನ್ನ ಕೆರಳಿಸಿದೆ. ಇನ್ನು ಇದೀಗ ಆರ್ಕಿಡ್ ಶಾಲೆ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು(ಜನವರಿ 25) ಕ್ರಿಮಿನಲ್ ಕೇಸ್ ದಾಖಲಿಸಿದೆ.

ಇದನ್ನೂ ಓದಿ: ಸಿಬಿಎಸ್​ಇ ಸುಳ್ಳು ನೆಪ ಹೇಳಿ ಲಕ್ಷಾಂತರ ಶುಲ್ಕ: ಆರ್ಕಿಡ್ ಇಂಟರ್​ನ್ಯಾಷನಲ್ ಸ್ಕೂಲ್ ವಿರುದ್ಧ ಪೋಷಕರ ಪ್ರತಿಭಟನೆ

ಸೇಂಟ್ ತೆರೇಸಾ ಎಜುಕೇಷನಲ್, ಕಲ್ಚರಲ್ ಆ್ಯಂಡ್ ಸೋಶಿಯಲ್ ಡೆವಲಪ್‌ಮೆಂಟ್ ಸೊಸೈಟಿಯ ಅಧ್ಯಕ್ಷ ರಾಲ್ಫ್ ಆಂಡ್ರೇಡ್, ಟ್ರಸ್ಟ್​ನ ಕಾರ್ಯದರ್ಶಿ ಸಂಜಯ್ ಎಲ್, ಆರ್ಕಿಡ್‌ ಇಂಟರ್‌ನ್ಯಾಷನಲ್‌ ಶಾಲೆಯ ಪ್ರಿನ್ಸಿಪಾಲ್ ಮಂಜುಳಾ ಬಿ. ಹಾಗೂ K12 ಟೆಕ್ನೋ ಸರ್ವೀಸಸ್ ಪ್ರೈವೇಟ್‌ ಲಿಮಿಟೆಡ್ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 420, 34 ಅಡಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್ 9 ರೊಂದಿಗೆ ಮಾತನಾಡಿದ ಬೆಂಗಳೂರು ದಕ್ಷಿಣ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ರಾಜಶೇಖರ್ ಎಚ್‌ಜಿ, ಬೆಂಗಳೂರು ದಕ್ಷಿಣದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಬೈಲಾಂಜನಪ್ಪ ಅವರ ನಿರ್ದೇಶನದ ಮೇಲೆ ಶಾಲೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ನಾಗರಬಾವಿ ಬಳಿಯ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಸಿಬಿಎಸ್​ಇ ಬೋರ್ಡ್ ಸಿಲಬಸ್​ ಎಂದು ಹೇಳಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲಾ ಮಂಡಳಿ ವಿರುದ್ಧ ನಿನ್ನೆ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ರು. ಹೀಗಾಗಿ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಇಲಾಖೆ ದೂರು ದಾಖಲಿಸಿದೆ. ಅಲ್ಲದೇ ಆರ್ಕಿಡ್​ ಶಾಲಾ ಆಡಳಿತ ಮಂಡಳಿ ಸೇಂಟ್​​​​ ತೆರೇಸಾ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ನು ಆರ್ಕಿಡ್​ ಶಾಲಾ ಆಡಳಿತ ಮಂಡಳಿ ಹೊಸ ಶಾಲೆ ತೆರೆಯದಂತೆ ನಿರ್ಬಂಧ ಹೇರಲಾಗುತ್ತಿದೆ.

ವರದಿ: Prajwal D’Souza News9

Published On - 7:18 pm, Wed, 25 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ