AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆ ಅನುಮತಿ ಪಡೆಯದೆ ಮಕ್ಕಳ ದಾಖಲಾತಿ: ಮಾಗಡಿ ರಸ್ತೆ ಆರ್ಕಿಡ್ ಶಾಲೆ ವಿರುದ್ಧ ಎಫ್​ಐಆರ್ ದಾಖಲು

‘ಶಿಕ್ಷಣ ಇಲಾಖೆಯ ಅನುಮತಿ ಪಡೆದಕೊಳ್ಳದೇ 2022-23ರ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲಿಸಿಕೊಂಡು ಪೋಷಕರನ್ನು ವಂಚಿಸಿದೆ’ ಎಂದು ಬಿಇಒ ರಮೇಶ್ ಅವರು ದೂರಿನಲ್ಲಿ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಅನುಮತಿ ಪಡೆಯದೆ ಮಕ್ಕಳ ದಾಖಲಾತಿ: ಮಾಗಡಿ ರಸ್ತೆ ಆರ್ಕಿಡ್ ಶಾಲೆ ವಿರುದ್ಧ ಎಫ್​ಐಆರ್ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 14, 2022 | 9:12 AM

Share

ಬೆಂಗಳೂರು: ನಗರದ ಪ್ರತಿಷ್ಠಿತ ಆರ್ಕಿಡ್ ಇಂಟರ್​ನ್ಯಾಷನಲ್ ಶಿಕ್ಷಣ ಸಂಸ್ಥೆಯು (Orchids – The International School) ಮಾಗಡಿ ರಸ್ತೆಯ ಗೊಲ್ಲರಹಟ್ಟಿಯಲ್ಲಿ ನಡೆಸುತ್ತಿರುವ ಶಾಲೆಗೆ ಶಿಕ್ಷಣ ಇಲಾಖೆಯಿಂದ ಅಗತ್ಯ ಅನುಮತಿ ಪಡೆದುಕೊಂಡಿಲ್ಲ ಎಂಬ ಸಂಗತಿ ಇದೀಗ ಬಹಿರಂಗಗೊಂಡಿದೆ. ಶಾಲೆಯಲ್ಲಿ ಕಲಿಯುತ್ತಿದ್ದ ಸುಮಾರು 104 ಮಕ್ಕಳು ಮತ್ತು ಪೋಷಕರಲ್ಲಿ ಆತಂಕ ವ್ಯಕ್ತವಾಗಿದ್ದು, ಏನು ಮಾಡಬೇಕು ಎಂದು ತೋಚದ ಸ್ಥಿತಿ ತಲುಪಿದ್ದಾರೆ.

ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೆ ಆರಂಭಿಸಿರುವ ಶಾಲೆಯಲ್ಲಿ ಪ್ರಿ ನರ್ಸರಿಯಿಂದ 7ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಇದಕ್ಕಾಗಿ ಪೋಷಕರಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆದುಕೊಳ್ಳಲಾಗಿತ್ತು ಎಂದು ದೂರಲಾಗಿದೆ. ಶಾಲೆ ಅನುಮತಿ ಪಡೆದಿಲ್ಲ ಎನ್ನುವುದು ದೃಢಪಟ್ಟ ನಂತರ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಆಡಳಿತ ಮಂಡಳಿ ವಿರುದ್ಧ ಬೆಂಗಳೂರು ಉತ್ತರ-1 ಶೈಕ್ಷಣಿಕ ವಿಭಾಗದ ಬಿಇಒ ರಮೇಶ್ ದೂರು ದಾಖಲಿಸಿದರು. ಶಾಲೆಯ ಪ್ರಾಂಶುಪಾಲರು ಮತ್ತು ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ಕಳಿಸಿದ್ದಾರೆ. ಎಫ್​ಐಆರ್ ದಾಖಲಾದ ನಂತರ ಮಕ್ಕಳಿಗೆ ಶಾಲೆಯು ಮಕ್ಕಳಿಗೆ ರಜೆ ನೀಡಿದೆ.

ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ತಿಂಗಳುಗಳೇ ಕಳೆದ ನಂತರ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. ಇಲಾಖೆಯ ನಿರ್ಲಕ್ಷ್ಯದಿಂದಾಗಿ ಶಾಲೆಗೆ ಈಗಾಗಲೇ 104ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಈ ಮಕ್ಕಳ ಮುಂದಿನ ಪರಿಸ್ಥಿತಿ ಏನು ಎನ್ನುವ ಬಗ್ಗೆ ಸ್ಪಷ್ಟ ಉತ್ತರ ಸಿಗುತ್ತಿಲ್ಲ.

ಎಫ್​ಐಆರ್​ನಲ್ಲಿ ಪೊಲೀಸರು ಶಾಲೆಯ ಕಾರ್ಯದರ್ಶಿ ಮತ್ತು ಪ್ರಾಚಾರ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ‘ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಅನುಮತಿ ಪಡೆದಕೊಳ್ಳದೇ 2022-23ರ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲಿಸಿಕೊಂಡು ಪೋಷಕರನ್ನು ವಂಚಿಸಿದೆ’ ಎಂದು ಬಿಇಒ ರಮೇಶ್ ಅವರು ದೂರಿನಲ್ಲಿ ಹೇಳಿದ್ದಾರೆ.

ದೂರಿನ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಆರ್ಕಿಡ್ಸ್ ಶಾಲೆಯು, ನಾವು ಅಗತ್ಯ ಅನುಮತಿ, ಲೈಸೆನ್ಸ್, ಅನುಮೋದನೆಗಾಗಿ ಕರ್ನಾಟಕದ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದ್ದೇವೆ. ಇಲ್ಲಿ ನಡೆಯುತ್ತಿರುವ ನಿರ್ಮಾಣ ಚಟುವಟಿಕೆ ಕಾಮಗಾರಿ, ಶಾಲೆಯ ಬ್ರಾಂಡ್ ನೇಮ್ ಕಾರಣಕ್ಕೆ ಹಲವು ಪೋಷಕರು ನಮ್ಮ ಶಾಲೆಗೆ ಮಕ್ಕಳನ್ನು ದಾಖಲಿಸಲು ಉತ್ಸಾಹ ತೋರಿದರು. ತೀರಾ ಇತ್ತೀಚೆಗಷ್ಟೇ ನಮ್ಮ ಅರ್ಜಿ ತಿರಸ್ಕೃತಗೊಂಡಿರುವ ಮಾಹಿತಿ ಲಭ್ಯವಾಯಿತು. ಕೆಲವು ಸ್ಪಷ್ಟನೆಗಳನ್ನು ಅಧಿಕಾರಿಗಳು ಕೋರಿದ್ದಾರೆ. ಅವನ್ನು ಒದಗಿಸಿದ ನಂತರ ನಮಗೆ ಶೀಘ್ರದಲ್ಲಿಯೇ ಅನುಮತಿ ಸಿಗುವ ಸಾಧ್ಯತೆಯಿದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳನ್ನು ಸಮೀಪದ ಆರ್ಕಿಡ್ಸ್ ಶಾಲೆಗಳಿಗೆ ಕಳಿಸಲು ವ್ಯವಸ್ಥೆ ಮಾಡಿದ್ದೇವೆ. ಮಕ್ಕಳ ಶಿಕ್ಷಣ ನಿಲ್ಲದಂತೆ ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದೆ.

Published On - 9:12 am, Thu, 14 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ