Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2022-2023ನೇ ಸಾಲಿನ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ದಿನಾಂಕ 23-01-2023 ರಿಂದ 04-02-2023 ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2022-2023ನೇ ಸಾಲಿನ ವೇಳಾಪಟ್ಟಿ ಪ್ರಕಟ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 22, 2022 | 8:02 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ(Karnataka School Examination and Evaluation Board) 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ವಯ ಪರೀಕ್ಷೆಗಳನ್ನು ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆಯನ್ನು ಹೊರಡಿಸಿದೆ.

2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ ದಿನಾಂಕ 10-02-2023 ರಿಂದ 25-02-2023 ರವರೆಗೆ ಪರೀಕ್ಷೆಯನ್ನು ನಡೆಸಲು ತಿಳಿಸಲಾಗಿದೆ. ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು, ಪ್ರಥಮ ಪಿಯುಸಿ ತಾತ್ವಿಕ ಪರೀಕ್ಷೆಗೂ ಮೊದಲು ಕಾಲೇಜು ಹಂತದಲ್ಲಿ ನಡೆಸಲು ಇಲಾಖೆ ಸೂಚಿಸಿದೆ. ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾನಿಧಿ ವೆಬ್​ಸೈಟ್​ಗೆ ಭೇಟಿ ನೀಡಿ .

2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಹಾಗೂ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಾಗಿಲ್ಲದಿರುವುದರಿಂದ ಶೇಕಡ.100 ರಷ್ಟು ಪಠ್ಯಕ್ರಮಕ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆಗಳನ್ನು ನಡೆಸಲಾಗುವುದು.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 06-02-2023 ರಿಂದ 28-02-2023 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ದಿನಾಂಕ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ದಿನಾಂಕ 23-01-2023 ರಿಂದ 04-02-2023 ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ

2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ಪರೀಕ್ಷೆಗಳನ್ನು ನಡೆಸಲು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

Published On - 8:01 am, Thu, 22 December 22