Free NEET Coaching: 25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಉಚಿತ ನೀಟ್ ಕೋಚಿಂಗ್
ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಅದ್ಯಾಕೋ ಕಬ್ಬಿಣ ಕಡಲೆಯಾಗಿದೆ. ರಾಜ್ಯದ ವಿದ್ಯಾರ್ಥಿಗಳಿಗಿಂತ ಉತ್ತರಭಾರತದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಸೀಟ್ ಪಡೆಯುತ್ತಿದ್ದಾರೆ. ಎಂಬಿಬಿಎಂಎಸ್ ಮಾಡಬೇಕು ಎನ್ನುವ ಬಡ ವಿದ್ಯಾರ್ಥಿಗಳು ನೀಟ್ ಕೋಚಿಂಗ್ ಪಡೆಯಲಾಗದೆ ಸಂಕಷ್ಟ ಪಡುತ್ತಿದ್ದಾರೆ. ಇಂಥ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರು, ನವೆಂಬರ್ 21: ಮೆಡಿಕಲ್ ಶಿಕ್ಷಣ ಪಡೆಯವ ಕನಸು ಕಂಡಿರುವ ಬಡ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ಟ್ಯೂಷನ್ ಸೆಂಟರ್ಗೆ ಹೋಗಿ ನೀಟ್ ಕೋಚಿಂಗ್ ಪಡೆಯಲು ಲಕ್ಷ ಲಕ್ಷ ರೂಪಾಯಿ ಹಣ ಖರ್ಚು ಮಾಡಿ ಪರದಾಡುತ್ತಿದ್ದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಗೂಡ್ ನ್ಯೂಸ್ ನೀಡಿದೆ. ಈ ವರ್ಷದಿಂದ ಪಿಯುಸಿ ಒದುತ್ತಿರುವ 25 ಸಾವಿರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ವಿದ್ಯಾರ್ಥಿಗಳಿಗೆ ಉಚಿತ CET, NEET, JEE, ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೀಟ್ ಕೋಚಿಂಗ್ ಪಡೆಯಲು ಟ್ಯೂಷನ್ ಸೆಂಟರ್ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಬೇಕಿಲ್ಲ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಪೂರ್ತಿ ಮಾಡಲು ಸರ್ಕಾರ ಮುಂದಾಗಿದೆ. ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಹೆಚ್ಚು ಹಂಚಿಕೆಯಾಗುತ್ತಿರುವ ವೈದ್ಯಕೀಯ ಸೀಟ್ಗೆ ಸೆಡ್ಡು ಹೊಡೆಯಲು ಶಾಲಾ ಶಿಕ್ಷಣ ಇಲಾಖೆ ಈ ತಂತ್ರ ರೂಪಿಸಿದೆ. ಈ ವರ್ಷದಿಂದ ಶಾಲಾ ಶಿಕ್ಷಣ ಇಲಾಖೆ, ಪಿಯುಸಿ ಓದುತ್ತಿರುವ ವೈದ್ಯಕೀಯ ಶಿಕ್ಷಣ ಪಡೆಯುವ ಕನಸು ಕಂಡಿರುವ ಪ್ರಥಮ ವರ್ಷದ 12500 ಪಿಯು ವಿದ್ಯಾರ್ಥಿಗಳು ಹಾಗೂ 12500 ದ್ವಿತೀಯ ಪಿಯು ವಿದ್ಯಾರ್ಥಿಗಳಂತೆ, ಒಟ್ಟು 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ನೀಟ್ ಕೋಚಿಂಗ್ ನೀಡಲು ಮುಂದಾಗಿದೆ.
ಬಡ ವಿದ್ಯಾರ್ಥಿಗಳ ಮೆಡಿಕಲ್ ಕನಸು ನನಸಾಗಿಸಲು ಕ್ರಮ
ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನೀಟ್ ಎಕ್ಸ್ಪರ್ಟ್ ತಜ್ಞರ ಮೂಲಕ ರಾಜ್ಯದ 25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವೈದ್ಯಕೀಯ ಸೀಟ್ ಗೆ ಸಿದ್ಧಪಡಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಮೂಲಕ ಬಡ ವಿದ್ಯಾರ್ಥಿಗಳಿಗೆ ಖಾಸಗಿ ಕೋಚಿಂಗ್ ಕ್ಲಾಸ್ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡುವ ತೊಂದರೆ ತಪ್ಪಿಸಲು ಸರ್ಕಾರ ಮುಂದಾಗಿದೆ. ಜೊತೆಗೆ ರಾಜ್ಯದಲ್ಲಿ ಹಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವತ್ತ ವಿದ್ಯಾರ್ಥಿಗಳನ್ನ ಸಿದ್ಧಪಡಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
25 ಸಾವಿರ ವಿದ್ಯಾರ್ಥಿಗಳ ಆಯ್ಕೆ ಹೇಗೆ?
25 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಿ ಆಯ್ಕೆ ಮಾಡಲು ಮುಂದಾಗಿದ್ದು, ತಜ್ಞರ ಮೂಲಕ ಕೋಚಿಂಗ್ ನೀಡಲು ಮುಂದಾಗಿದೆ. ಸರ್ಕಾರದ ನಡೆಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಜನಾಕ್ರೋಶದಿಂದ ಎಚ್ಚೆತ್ತ ಸರ್ಕಾರ, ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಆದೇಶ
ಒಟ್ಟಿನಲ್ಲಿ ನೀಟ್ ತರಬೇತಿ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಖಾಸಗಿ ಕೋಚಿಂಗ್ ಕ್ಲಾಸ್ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡುವ ತೊಂದರೆ ತಪ್ಪಿಸಲು ಸರ್ಕಾರ ಮುಂದಾಗಿದೆ. ಉಚಿತವಾಗಿ ನೀಟ್ ತರಬೇತಿ ನೀಡುವ ಮುಂದಾಗಿದೆ. ಈ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣ ಪಡೆಯಲು ಆಸರಯಾಗಲಿದೆ. ಇದು ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ