AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 13, 2021 | 1:05 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams 2021) ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ (KSRTC) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು (Free Service) ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

(Free Service available in KSRTC bus for SSLC students on the day of exams July 19 and July 22)

ಇದನ್ನೂ ಓದಿ: SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಪ್ರವೇಶ: ಸಚಿವ ಸುರೇಶ್ ಕುಮಾರ್ 

SSLC Exam 2021: ಹೆಚ್ಚು ಮಳೆ ಬೀಳುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಆಗಮಿಸಲು ಅಗತ್ಯ ವ್ಯವಸ್ಥೆ, ಜುಲೈ 15, 17ರಂದು ಎಸ್​ಎಸ್​ಎಲ್​ಸಿ ಅಣಕು ಪರೀಕ್ಷೆ

Published On - 12:20 pm, Tue, 13 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ