ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಕೊರೊನಾ ಬಂದು ಹೋದ ಮೇಲೆ ಶೈಕ್ಷಣಿಕ ವಲಯದಲ್ಲಿ ಸೃಷ್ಟಿಸಿರುವ ಅವಾಂತರ ಒಂದಲ್ಲ ಎರಡಲ್ಲ. ಮಕ್ಕಳ ಕಲಿಕೆ ಹಳ್ಳ ಹಿಡದಿದ್ದು ಕೆಲವು ವಿಷಯಗಳಲ್ಲಿ ಮಕ್ಕಳು ಇತ್ತೀಚೆಗೆ ಹಿಂದೆ ಬೀಳುತ್ತಿದ್ದು, ಖಾಸಗಿ ಶಾಲೆಗಳ ಪೋಷಕರು ಹೆಚ್ಚುವರಿ ಶಿಕ್ಷಣಕ್ಕಾಗಿ ಟೂಷನ್ ಮೊರೆ ಹೋಗುತ್ತಿದ್ದಾರೆ. ಆದ್ರೆ ಬಡ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಲಿಕಾ ಹಿನ್ನಡೆಯಾಗುತ್ತಿದೆ. ಈಗ ಇತಂಹ ಪೋಷಕರ ಮಕ್ಕಳಿಗೂ ಶಾಲಾ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.

ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !
ಶಾಲಾ ವಿದ್ಯಾರ್ಥಿಗಳು
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on: Oct 17, 2024 | 10:17 PM

ಬೆಂಗಳೂರು, (ಅಕ್ಟೋಬರ್ 17): ಕಳೆದ ಎರಡು ಮೂರು ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಲ್ಲಿ ಗಣಿತ ವಿಜ್ಞಾನ ಇಂಗ್ಲೀಷ್ ವಿಷಯಗಳು ಕಬ್ಬಿಣದ ಕಡಲೆಯಾಗಿದೆ.. ಹೀಗಾಗಿಯೇ ಖಾಸಗಿ ಶಾಲಾ ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚುವರಿ ಶಿಕ್ಷಣ ನೀಡಲು ಪ್ರೈವೆಟ್ ಟ್ಯೂಷನ್ ಸೆಂಟರ್ ಗಳಿಗೆ ಹಾಕುತ್ತಿದ್ದಾರೆ. ಹೆಚ್ಚುವರಿ ಶಿಕ್ಷಣಕ್ಕೆ ಇದು ಅನಕೂಲವಾಗುತ್ತಿದೆ. ತಗರತಿಯ ಹೆಚ್ಚುವರಿ ಸಮಸ್ಯೆಗಳನ್ನ ಈ ಕ್ಲಾಸ್ ಗಳಲ್ಲಿ ಸರಿಪಡಿಸಿಕೊಂಡು ಕಲಿಯುತ್ತಾರೆ. ಆದ್ರೆ ಇತಂಹ ಸೌಲಭ್ಯ ಬಡ ಪೋಷಕರ ಮಕ್ಕಳಿಗೆ ಇಲ್ಲದಂತಾಗಿತ್ತು. ದುಬಾರಿ ಹಣ ನೀಡಿ ಟ್ಯೂಷನ್ ಗೆ ಕಳಿಸಲು ಕಷ್ಟಪಡುತ್ತಿದ್ದರು. ಈಗ ಸರ್ಕಾರಿ ಶಾಲಾ ಮಕ್ಕಳಿಗೆ ಇತಂಹ ಸೌಲಭ್ಯವನ್ನ ಉಚಿತವಾಗಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರಿ ಶಾಲೆಗಳಿಗೆ ಬಂತ್ತು ಫ್ರೀ ಟ್ಯೂಷನ್ ಭಾಗ್ಯ

ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.

ಇದನ್ನೂ ಓದಿ: ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್​ಗೆ ಕಳುಹಿಸುತ್ತಾರೆ.

ಒಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು ಸರ್ಕಾರಿ ಶಾಲಾ ಶಿಕ್ಷಕರನ್ನೇ ಬಳಕೆ ಮಾಡಿಕೊಂಡು ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ. ಆದ್ರೆ ಇದು ಹೇಳಿಕೆಗೆ ಮಾತ್ರ ಸೀಮಿತವಾಗುತ್ತಾ ಅಥವಾ ಜಾರಿಯಾಗುತ್ತಾ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ