ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವವರಿಗೆ ಸುವರ್ಣಾವಕಾಶ; ಬೆಂಗಳೂರಿನಲ್ಲಿಂದು ‘ಯುಎಸ್‌ನಲ್ಲಿ ಅಧ್ಯಯನ’ ಮೇಳ ಆಯೋಜನೆ

ಎಂ.ಜಿ.ರಸ್ತೆಯ ತಾಜ್ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ‘ಯುಎಸ್‌ನಲ್ಲಿ ಅಧ್ಯಯನ’ ಮೇಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ವೇಳದಲ್ಲಿ ಪ್ರವೇಶ, ವಿದ್ಯಾರ್ಥಿ ವೇತನಗಳು, ಕ್ಯಾಂಪಸ್ ಜೀವನ ಮತ್ತು ಯುಎಸ್ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವವರಿಗೆ ಸುವರ್ಣಾವಕಾಶ; ಬೆಂಗಳೂರಿನಲ್ಲಿಂದು ‘ಯುಎಸ್‌ನಲ್ಲಿ ಅಧ್ಯಯನ’ ಮೇಳ ಆಯೋಜನೆ
ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡುವ ಕನಸಿದೆಯೇ? ಇಲ್ಲಿದೆ ಸುವರ್ಣಾವಕಾಶ
Follow us
| Updated By: ಆಯೇಷಾ ಬಾನು

Updated on: Aug 18, 2024 | 7:12 AM

ಬೆಂಗಳೂರು, ಆಗಸ್ಟ್​​.18: ಬೆಂಗಳೂರಿನ ಎಂ.ಜಿ.ರಸ್ತೆಯ ತಾಜ್ ಹೋಟೆಲ್‌ನಲ್ಲಿ ಇಂದು ‘ಯುಎಸ್‌ನಲ್ಲಿ ಅಧ್ಯಯನ’ (Study in US) ಮೇಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೇಳ ನಡೆಯಲಿದೆ. ಈ ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ ಇರಲಿದೆ. ಮೇಳದಲ್ಲಿ ಭಾಗವಹಿಸುವವರು ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ.

ವಿದ್ಯಾರ್ಥಿಗಳು https://bit.ly/EdUSAFair24Emb ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅಮೆರಿಕಾದಲ್ಲಿ ಉನ್ನತ ಶಿಕ್ಷಣ ಮಾಡಬೇಕು ಎಂದು ಕನಸುಕಂಡಿರುವವರಿಗೆ ಇದೊಂದು ಸುವರ್ಣವಕಾಶ. ಯು.ಎಸ್.ಸರ್ಕಾರದ ಅಧಿಕೃತ ಮಾಹಿತಿ ಮೂಲ ಆಗಿರುವ Education USA, ದೇಶಾದ್ಯಂತ ಎಂಟು ಶಿಕ್ಷಣ ಮೇಳಗಳ ಸರಣಿಯನ್ನು ಆಯೋಜಿಸಿದೆ. ಆಗಸ್ಟ್ 16, 2024ರಂದು ಹೈದರಾಬಾದ್‌ನಲ್ಲಿ ಪ್ರಾರಂಭವಾಗಿ ಆಗಸ್ಟ್ 25, 2024ರಂದು ನವದೆಹಲಿಯಲ್ಲಿ ಮುಕ್ತಾಯಗೊಳ್ಳಲಿದೆ.

ಆ.16ರಿಂದ ಆ.25ರವರೆಗೆ ಬೇರೆ ಬೇರೆ ರಾಜ್ಯಗಳಲ್ಲಿ ಮೇಳ ಆಯೋಜನೆ ಮಾಡಲಾಗಿದೆ. ಯುನೈಟೆಡ್ ಸ್ಟೇಟ್ಸ್‌ನಾದ್ಯಂತ 80ಕ್ಕೂ ಹೆಚ್ಚು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳ ಭೇಟಿಗೆ ಅವಕಾಶ ಸಿಗಲಿದೆ. ಚೆನ್ನೈನಲ್ಲಿರುವ ಯುಎಸ್ ಕಾನ್ಸುಲೇಟ್ ಜನರಲ್‌ ಈ ವೇಳವನ್ನು ಆಯೋಜಿಸಿದ್ದಾರೆ.

ಇದನ್ನೂ ಓದಿ: ಯುರೋಪ್​ನಲ್ಲಿ ಚಿತ್ರೀಕರಣಗೊಂಡ ‘ಹನಿ ಹನಿ’ ಆಲ್ಬಂ ಸಾಂಗ್ ಬಿಡುಗಡೆ ಮಾಡಿದ ಅಶ್ವಿನಿ

ಇನ್ನು ಈ ಬಗ್ಗೆ ಮಾತನಾಡಿದ ಯು.ಎಸ್. ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು, “ಯುನೈಟೆಡ್ ಸ್ಟೇಟ್ಸ್ ನೀಡುವ ಅದ್ಭುತ ಶೈಕ್ಷಣಿಕ ಅವಕಾಶಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಲು Education USA ಮೇಳ ಉತ್ತಮ ಮಾರ್ಗವಾಗಿದೆ. ನಿಮಗೆ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್‌ನಲ್ಲಿ ಆಸಕ್ತಿ ಇರಲಿ, ಇಲ್ಲವೇ ಕಲೆ ಅಥವಾ ಬ್ಯುಸಿನೆಸ್ ವಿಷಯಗಳು ನಿಮ್ಮ ಆಸಕ್ತಿಯ ವಿಷಯವಾಗಿರಲಿ, ನಿಮ್ಮ ಕನಸುಗಳನ್ನು ನನಸು ಮಾಡಲು ನಿಮಗೆ ಸಹಾಯ ಮಾಡುವ ಕಾರ್ಯಕ್ರಮ ಇದಾಗಿದೆ,” ಎಂದರು.

ಈ ಮೇಳದಲ್ಲಿ ಯು.ಎಸ್. ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಬೃಹತ್ ಶ್ರೇಣಿಯ ಪ್ರತಿನಿಧಿಗಳನ್ನು ಭೇಟಿ ಮಾಡಲು ಮತ್ತು ಕಾಲೇಜು ಅರ್ಜಿ ಮತ್ತು ವೀಸಾ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆಯುವ ಅವಕಾಶ ಸಿಗಲಿದೆ. ಪ್ರವೇಶ, ವಿದ್ಯಾರ್ಥಿ ವೇತನಗಳು, ಕ್ಯಾಂಪಸ್ ಜೀವನ ಮತ್ತು ಯುಎಸ್ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?