AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್​​, ಪೋರ್ಟಲ್​ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ
ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಕೆಇಎ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: May 12, 2025 | 1:17 PM

Share

ಬೆಂಗಳೂರು, ಮೇ 12: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಹೊಸ ಮೊಬೈಲ್ ಆ್ಯಪ್ (APP) ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಸಿಇಟಿ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್​ ನೀಡಿದೆ. ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಸುಧಾಕರ್​​ರಿಂದ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ.

ಇನ್ಮುಂದೆ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈಬರ್ ಸೆಂಟರ್​​ನಲ್ಲಿ ತಪ್ಪಾಗಿ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳು ಪರದಾಡುತ್ತಿದ್ದರು. ಇದೇ ಕಾರಣದಿಂದ ಅರ್ಹರಿಗೆ ಸಿಇಟಿ ಸೀಟ್​ ಮಿಸ್ ಆಗುತ್ತಿತ್ತು. ಹಾಗಾಗಿ ಕೆಇಎ ಮೊಬೈಲ್ ಆ್ಯಪ್, ಚಾಟ್ ಬಾಟ್ ಮತ್ತು ಪೊರ್ಟಲ್​​ ಅನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ
Image
ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನ್​ ಹೇಳುತ್ತೆ
Image
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
Image
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
Image
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ

ಇದನ್ನೂ ಓದಿ: ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ಹೊಸ ಮೊಬೈಲ್​ ಆ್ಯಪ್​ನಿಂದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.​​ ಸಿಇಟಿ ಪರೀಕ್ಷೆಯ ಸಮಸ್ಯೆಗಳು, ಕಾಲೇಜುಗಳ ಸಮಗ್ರ ಮಾಹಿತಿ, ಆಯ್ಕೆ ಮಾಡುವ ಇಂಜಿನೀಯರಿಂಗ ಕಾಲೇಜು ಶುಲ್ಕ ಎಷ್ಟು? ಆ ಕಾಲೇಜಿನಲ್ಲಿ ಹಾಸ್ಟೇಲ್ ಶುಲ್ಕ ಏನಿದೆ? ಇತರೇ ಸೌಲಭ್ಯಗಳು ಏನಿದೆ ಎಂದು ಹಲವಾರು ಪ್ರಶ್ನೆಗಳಿಗೆ ಆ್ಯಪ್ ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಸಚಿವ ಸುಧಾಕರ್ ಟ್ವೀಟ್​

ಈ ಮೊಬೈಲ್ ಆ್ಯಪ್​​​​ ಮತ್ತು ಪೋರ್ಟಲ್​ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ. ಪಠ್ಯಕ್ರಮ, ಕಾಲೇಜು ಮತ್ತು ಸೌಲಭ್ಯಗಳ ಮಾಹಿತಿಯೂ ಸಿಗಲಿದೆ. ವಿದ್ಯಾರ್ಥಿಗಳು ಪೋರ್ಟಲ್​ನಲ್ಲಿ ಒಮ್ಮೆ ಅರ್ಜಿ ತುಂಬಿದರೆ ಸಾಕು, ಪದೇ ಪದೆ ಅರ್ಜಿ ತುಂಬುವ ಅವಶ್ಯಕತೆ ಬರುವುದಿಲ್ಲ. ಆ್ಯಪ್​​ ಡೌನ್​ಲೋಡ್​ ಮಾಡಿಕೊಂಡು ಯುಜಿ-ಸಿಇಟಿ, ಪಿಜಿ-ಸಿಇಟಿ, ಡಿಸಿಇಟಿ ಅರ್ಜಿ ಭರ್ತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ

ಸಿಇಟಿ ಫಲಿತಾಂಶಕ್ಕೆ ರೆಡಿಯಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಆದರೆ ಸಿಬಿಎಸ್ಇ ಫಲಿತಾಂಶ ಬರಬೇಕಿದೆ, ನೀಟ್ ಫಲಿತಾಂಶವೂ ಪ್ರಕಟವಾಗಬೇಕಿದೆ ಎಂದು ತಿಳಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​