ಇನ್ಮುಂದೆ 5, 8ನೇ ಕ್ಲಾಸ್ ಮಕ್ಕಳನ್ನು ಫೇಲ್ ಮಾಡಬಹುದು; ಕೇಂದ್ರ ಸರ್ಕಾರದ ಹೊಸ ನಿರ್ಧಾರ

ವರ್ಷಾಂತ್ಯದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ 'ಅನುತ್ತೀರ್ಣರಹಿತ ನೀತಿ'ಯನ್ನು ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು. ಇದರ ಪ್ರಕಾರ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿರಲಿಲ್ಲ. ಆದರೆ, ಇದೀಗ ಆ ನೀತಿಯನ್ನು ಕೇಂದ್ರ ರದ್ದುಗೊಳಿಸುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇನ್ಮುಂದೆ 5, 8ನೇ ಕ್ಲಾಸ್ ಮಕ್ಕಳನ್ನು ಫೇಲ್ ಮಾಡಬಹುದು; ಕೇಂದ್ರ ಸರ್ಕಾರದ ಹೊಸ ನಿರ್ಧಾರ
School Students
Follow us
ಸುಷ್ಮಾ ಚಕ್ರೆ
|

Updated on: Dec 23, 2024 | 7:09 PM

ನವದೆಹಲಿ: 5 ಮತ್ತು 8ನೇ ತರಗತಿ ಮಕ್ಕಳಿಗೆ ಈ ಮೊದಲು ಜಾರಿಯಲ್ಲಿದ್ದ ಕೇಂದ್ರ ಸರ್ಕಾರದ ಅನುತ್ತೀರ್ಣ ರಹಿತ ನೀತಿಯನ್ನು ರದ್ದುಗೊಳಿಸಲಾಗಿದೆ. ಇನ್ನುಮುಂದೆ ಸರ್ಕಾರಿ ಶಾಲೆಗಳು 5, 8ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಬಹುದು. ಕೇಂದ್ರ ಸರ್ಕಾರವು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಶನ್ ನೀತಿ’ಯನ್ನು ರದ್ದುಗೊಳಿಸಿದೆ. ಪರೀಕ್ಷೆಯಲ್ಲಿ ಫೇಲ್ ಆದವರು ಎರಡನೇ ಬಾರಿಗೆ ಉತ್ತೀರ್ಣರಾಗಲು ಮತ್ತೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುತ್ತದೆ. ಮರು ಪರೀಕ್ಷೆಯಲ್ಲಿ ಕಾಣಿಸಿಕೊಳ್ಳುವ ಮಕ್ಕಳು ಮತ್ತೆ ಪಾಸ್ ಆಗಲು ಸಾಧ್ಯವಾಗದಿದ್ದರೆ ಹೊಸ ನೀತಿಯ ಪ್ರಕಾರ, ಅವರನ್ನು 5ನೇ ತರಗತಿ ಅಥವಾ 8ನೇ ತರಗತಿಯಲ್ಲಿಯೇ ಉಳಿಸಲಾಗುತ್ತದೆ.

ಕೇಂದ್ರ ಸರ್ಕಾರದ ಈ ಹೊಸ ನೀತಿಯ ಪ್ರಕಾರ, ವರ್ಷಾಂತ್ಯದ ಪರೀಕ್ಷೆಗಳಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ಶಾಲೆಗಳಿಗೆ ಅವಕಾಶ ನೀಡಲಾಗುತ್ತದೆ. 2019ರಲ್ಲಿ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ತಿದ್ದುಪಡಿಯ ನಂತರ, 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ 2 ತರಗತಿಗಳಲ್ಲಿ ‘ನೋ-ಡಿಟೆನ್ಷನ್ ನೀತಿ’ಯನ್ನು ತೆಗೆದುಹಾಕಿವೆ.

ಇದನ್ನೂ ಓದಿ: ಸರ್ಕಾರದ ಶ್ರಮಕ್ಕೆ ಸಿಕ್ಕಿತು ಫಲ: ದೇಶದ 2.14 ಲಕ್ಷ ಹಳ್ಳಿಗಳಿಗೆ ಇಂಟರ್ನೆಟ್ ತಲುಪಿದ್ದು ಹೀಗೆ ಗೊತ್ತೇ?

ಮಕ್ಕಳು ಫೇಲ್ ಆದಾಗ ತರಗತಿಯ ಶಿಕ್ಷಕರು ಮಗುವಿಗೆ ಮತ್ತು ಮಗುವಿನ ಪೋಷಕರಿಗೆ ಅಗತ್ಯವಿದ್ದಲ್ಲಿ ಮಾರ್ಗದರ್ಶನ ನೀಡುತ್ತಾರೆ. ಅವರಿಗೆ ಬೇಕಾದ ಕಲಿಕೆಯ ಸಹಕಾರ ನೀಡುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹಾಗಂತ ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಯಾವುದೇ ಮಗುವನ್ನು ಶಾಲೆಯಿಂದ ಹೊರಹಾಕುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಅಧಿಕಾರಿಗಳ ಪ್ರಕಾರ, ಈ ಅಧಿಸೂಚನೆಯು ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರ ನಡೆಸುತ್ತಿರುವ 3,000 ಶಾಲೆಗಳಿಗೆ ಅನ್ವಯಿಸುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಪೌರತ್ವ ರದ್ದಾಗುತ್ತಾ? ದ್ವಿಪೌರತ್ವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟ ಕೋರ್ಟ್​

ಶಾಲಾ ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ ರಾಜ್ಯಗಳು ಈ ವಿಷಯದಲ್ಲಿ ತಮ್ಮ ನಿರ್ಧಾರವನ್ನು ಮಾಡಬಹುದು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈಗಾಗಲೇ ದೆಹಲಿ ಸೇರಿದಂತೆ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈ ಎರಡು ವರ್ಗಗಳಿಗೆ ನೋ ಡಿಟೆನ್ಷನ್ ನೀತಿಯನ್ನು ತೆಗೆದುಹಾಕಿವೆ. ಹರಿಯಾಣ ಮತ್ತು ಪುದುಚೇರಿ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ