AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಐದು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಿಸಿ ರಾಜ್ಯಪಾಲ ಆದೇಶ

ಕರ್ನಾಟಕ ಐದು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿವಿಗಳಿಗೆ ಹೊಸ ಕುಲಪತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ, ಯಾವೆಲ್ಲಾ ವಿಶ್ವವಿದ್ಯಾಲಯಕ್ಕೆ ಯಾರು ಕುಲಪತಿಯಾಗಿದ್ದಾರೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದ ಐದು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಿಸಿ ರಾಜ್ಯಪಾಲ ಆದೇಶ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
TV9 Web
| Edited By: |

Updated on: Mar 05, 2024 | 11:04 PM

Share

ಬೆಂಗಳೂರು, (ಮಾರ್ಚ್ 05): ಕರ್ನಾಟಕ ವಿವಿಧ ವಿಶ್ವವಿದ್ಯಾಲಯಗಳಿಗೆ (University) ನೂತನ ಕುಲಪತಿಗಳನ್ನು(Vice-Chancellors)  ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (governor thawar chand gehlot) ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು, ಬಾಗಲಕೋಟೆ ತೋಟಗಾರಿಕಾ ವಿವಿ, ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯ, ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ಕುವೆಂಪು ವಿಶ್ವವಿದ್ಯಾಯಲಗಳಿಗೆ ಹೊಸ ಕುಲಪತಿಗಳನ್ನು ನೇಮಿಸಲಾಗಿದೆ.

ಇದನ್ನೂ ಓದಿ: ಸದ್ದಿಲ್ಲದೇ ಶಾಲಾ ಪಠ್ಯ ಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ, ಏನೆಲ್ಲಾ ಬದಲಾವಣೆ? ಇಲ್ಲಿದೆ ವಿವರ

  • ಮಂಗಳೂರು ವಿಶ್ವವಿದ್ಯಾಯಲದ ಕುಲಪತಿಯಾಗಿ ಪ್ರೊ.ಪಿ.ಎಲ್.ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದರು.
  • ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ವಿಷ್ಣುವರ್ಧನ್ ಅವರನ್ನು ನೇಮಿಸಲಾಗಿದೆ. ಡಾ.ವಿಷ್ಣುವರ್ಧನ್ ಅವರು ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ಆಗಿದ್ದರು.
  • ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಮೇತ್ರಿ ನೇಮಕ ಮಾಡಲಾಗಿದೆ. ಡಾ.ಕೆ.ಎಂ.ಮೇತ್ರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದರು.
  • ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಸಿ.ಎಂ.ತ್ಯಾಗರಾಜ್ ನೇಮಿಸಲಾಗಿದೆ. ತ್ಯಾಗರಾಜ್ ಅವರು ರಾಣಿ ಚೆನ್ನಮ್ಮ ವಿವಿಯ ವಾಣಿಜ್ಯ ವಿಭಾಗದ ಡೀನ್ ಅಗಿದ್ದರು.
  • ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಶರತ್ ಅನಂತಮೂರ್ತಿ ಅವರು ಹೈದ್ರಾಬಾದ್ ಸ್ಕೂಲ್ ಆಫ್ ಫಿಸಿಕ್ಸ್ ಪ್ರಾಧ್ಯಾಪಕರಾಗಿದ್ದರು.

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು