ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ: ಸರ್ಕಾರ ಆದೇಶ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2023 | 10:36 PM

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ NEPಗೆ ಸಡ್ಡು ಹೊಡೆದು ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ ಮಾಡಲಾಗಿದೆ.

ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಅಕ್ಟೋಬರ್​​ 11: ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ NEPಗೆ ಸಡ್ಡು ಹೊಡೆದು ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ ಮಾಡಲಾಗಿದೆ. 2024ರ ಫೆ.28ರೊಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಒಟ್ಟು 15 ಸದಸ್ಯರ ನೇಮಕ ಮಾಡಲಾಗಿದೆ.

8 ವಿಷಯ ತಜ್ಞರು, ಪ್ರೊ.ನಿರಂಜನಾರಾಧ್ಯ, ರಹಮತ್ ತರೀಕೆರೆ ಸೇರಿದಂತೆ ಪ್ರಮುಖ ಸಾಹಿತಿಗಳಿಗೂ ಸಮಿತಿಯ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಸಿಎಸ್​ಆರ್​ ನಿಧಿ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಮಾದರಿ ಸರಕಾರಿ ಶಾಲೆ ನಿರ್ಮಾಣ; ಡಿಕೆ ಶಿವಕುಮಾರ್​

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ನೇಮಕ

ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರನ್ನು ನೇಮಿಸಿ ಸರ್ಕಾರದಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಮೊಹಮ್ಮದ್ ಸನಾವುಲ್ಲಾ ಹಾಗೂ ಆರ್.ಎಸ್.ಪೋಂಡೆರನ್ನು ಹಣಕಾಸು ಆಯೋಗದ ಸದಸ್ಯರಾಗಿ ನೇಮಕ ಮಾಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಹೆಚ್‌.ಮುನಿಯಪ್ಪರಿಂದ ಅಭಿನಂದನೆ ಸಲ್ಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:24 pm, Wed, 11 October 23