5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಹಿನ್ನೆಲೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್
ಪ್ರಾತಿನಿಧಿಕ ಚಿತ್ರImage Credit source: vijayavani.net
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 11, 2023 | 4:38 PM

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ (Board exams) ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.

ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ

ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್​​ ಎಸ್​. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಮಾ. 10 ರಂದು ತೀರ್ಪು ನೀಡಿತ್ತು.

ಈ ಕುರಿತಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ವಿವರವಾದ ಆದೇಶ ಕೈ ಸೇರಿದ ಮೇಲೆ ಮಾಹಿತಿ ನೀಡುತ್ತೇವೆ. ಆದರೆ ವಿವರವಾದ ಆದೇಶ ಬಂದ ಮೇಲೆ ಯಾವ ಕ್ರಮ ತಗೆದುಕೊಳ್ಳಬೇಕು ಅಂತಾ ಚರ್ಚೆ ಮಾಡಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Success Sutra: ಪರೀಕ್ಷಾ ಸಮಯದಲ್ಲಿ ಮಕ್ಕಳ ಜ್ಞಾನವೃದ್ಧಿಗಾಗಿ ವಾಸ್ತು ಟಿಪ್ಸ್​​ ಫಾಲೋ ಮಾಡಿ

ಈ ಹಿಂದೆ ಕೂಡ ವಿರೋಧ  

ಇನ್ನು ಸಿಬಿಎಸ್​ಸಿ ಕೇಂದ್ರದ ಪಠ್ಯಕ್ರಮದ ಶಾಲೆಗಳಲ್ಲಿಯೂ ಇಲ್ಲದ ವಾರ್ಷಿಕ ಪರೀಕ್ಷೆ ರಾಜ್ಯದಲ್ಲಿ ಜಾರಿಗೆ ಮುಂದಾಗಿರೋದಕ್ಕೆ ಈ ಹಿಂದೆ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಇಲಾಖೆಯು ವಾರ್ಷಿಕ ಪರೀಕ್ಷೆಗಳ ಹೆಸರಲ್ಲಿ ದುಡ್ಡು ಮಾಡುವ ಹುನ್ನಾರ ನಡೆಸುತ್ತಿದೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು. ಪರೀಕ್ಷೆಗಳ ಮೂಲಕ ಕೋಟ್ಯಾಂತರ ರೂಪಾಯಿ ಲೂಟಿಯ ಹಾದಿ ಅಂತಾ ಪೋಷಕರ ಸಂಘಟನೆಗಳಿಂದ ವಾರ್ಷಿಕ ಪರೀಕ್ಷೆಗೆ ವಿರೋಧಿಸಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:38 pm, Sat, 11 March 23