ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

|

Updated on: Jul 15, 2024 | 9:47 PM

ಕರ್ನಾಟಕದ ಹಲವೆಡೆ ಮುಂಗಾರು ಮಳೆ ಅಬ್ಬರ ಮುಂದುವರಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಜನರನ್ನು ಹೊರಗೆ ಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇದರಿಂದ ಕೆಲವೆಡೆ ನದಿ, ಹಳ್ಳ-ಕೊಳ್ಳುಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ(ಜುಲೈ 16) ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಜುಲೈ 15): ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕೆಲವೆಡೆ  ನಾಳೆ ರೆಡ್, ಆರೆಂಜ್, ಹೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ನಾಳೆ (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ  ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಹವಾಮಾನ ಇಲಾಖೆಯು ಉಡುಪಿಯಲ್ಲಿ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಐಟಿಐ ಡಿಪ್ಲೋಮೋ ಕಾಲೇಜು ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಜಿಟಿ-ಜಿಟಿ ಮಳೆ: ವಾತಾವರಣ ಫುಲ್ ಕೂಲ್ ಕೂಲ್, ಇನ್ನಷ್ಟು ಮಳೆ ಸಾಧ್ಯತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಇನ್ನು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯುವ ಶಿವಮೊಗ್ಗದಲ್ಲೂ ವರುಣನ ಆರ್ಭಟ ಜೋರಾಗಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿರುವುದರಿಂದ ಮುಂಜಾಗೃತಾ ಕ್ರಮವಾಗಿ ನಾಳೆ(ಜು.16) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಕೊಡಗಿನಲ್ಲೂ ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲೂ ಸಹ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ರಸ್ತೆ ಮೇಲೆ ನೀರು ಹರಿತ್ತಿದೆ. ಮುಂಜಾಗ್ರತಾವಾಗಿ ನಾಳೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ನಿಡಲಾಗಿದೆ. ಅಂಗನವಾಡಿ, ಶಾಲಾ-‌ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿದೆ. ಕಳೆದ 2 ದಿನಗಳಿಂದ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ನಾಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಹವಾಮಾನ ಇಲಾಖೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ(ಜುಲೈ16) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ‌ ಮಳೆ‌ಯಾಗೋ ಸಾಧ್ಯತೆ ಇದೆ. ಹೀಗಾಗಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಹಾಸನದ ಐದು ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹಾಸನ ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಜುಲೈ17 ರ ವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 16) ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ, ಆಲೂರು,ಬೇಲೂರು, ಅರಕಲಗೂಡು ತಾಲ್ಲೂಕಿನ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ 6 ತಾಲೂಕಿನ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, NR ಪುರ ತಾಲೂಕಿನ ಅಂಗನವಾಡಿಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Mon, 15 July 24