AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್

ಸರ್ಕಾರದ ಕ್ರಮ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ. ಸಾಮಾನ್ಯ ಕನ್ನಡವನ್ನು ಕಲಿಸುವ ಉದ್ದೇಶದಿಂದ ಸರ್ಕಾರ ಆದೇಶ ನೀಡಿದೆ.

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Updated By: sandhya thejappa|

Updated on:Oct 26, 2021 | 5:33 PM

Share

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ವಿವಾದಕ್ಕೆ ಒಳಗಾಗಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್ ರವರ ಪೀಠ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಆದೇಶಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸೂಕ್ತವಲ್ಲ. ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸಲಹೆ ನೀಡಿದೆ.

ಇದೇ ವೇಳೆ ಸರ್ಕಾರದ ಕ್ರಮ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ. ಸಾಮಾನ್ಯ ಕನ್ನಡವನ್ನು ಕಲಿಸುವ ಉದ್ದೇಶದಿಂದ ಸರ್ಕಾರ ಆದೇಶ ನೀಡಿದೆ. ಸರ್ಕಾರದ ಕ್ರಮ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಆಕ್ಷೇಪಣೆ ಸಲ್ಲಿಸುವುದಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಆದರೆ ಸರ್ಕಾರದ ವಾದವನ್ನು ಹೈಕೋರ್ಟ್ ಒಪ್ಪಲಿಲ್ಲ. ಬದಲಿಗೆ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಸಲಹೆ ನೀಡಿದೆ.

2020ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡಿರುವ ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿದೆ. 2021-22 ರ ಸಾಲಿನ ಪದವಿ ತರಗತಿಗಳ ನಾಲ್ಕು ಸೆಮಿಸ್ಟರ್​ಗಳಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 7, ಸೆಪ್ಟೆಂಬರ್ 25 ರಂದು ಎರಡು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎರಡು ಭಾಷೆಗಳ ಪೈಕಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಬೇಕೆಂದು ಸೂಚಿಸಿದೆ. ಕನ್ನಡ ಮತ್ತು ಕನ್ನಡೇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪಠ್ಯಪುಸ್ತಕಗಳನ್ನೂ ಒದಗಿಸಲಾಗಿದೆ. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿದಾರರು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದರಿಂದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಅರ್ಜಿದಾರರ ವಾದ ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಕನ್ನಡ ಕಲಿತಿರುವುದಿಲ್ಲ. ಆದರೆ ಪದವಿ ಸೇರಿದ ಕೂಡಲೇ ಕನ್ನಡ ಕಲಿಯಬೇಕೆಂದು ಕಡ್ಡಾಯಗೊಳಿಸುವುದು ಸರಿಯಲ್ಲ. ನಮ್ಮ ರಾಜ್ಯವಲ್ಲದೇ, ಹೊರ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಸರ್ಕಾರದ ಕ್ರಮದಿಂದ ಈ ಎಲ್ಲಾ ವಿದ್ಯಾರ್ಥಿಗಳೂ ತೊಂದರೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಆಯ್ಕೆ ಆಧರಿತ ಶಿಕ್ಷಣ ಕ್ಕೆ ಅವಕಾಶ ಕಲ್ಪಿಸಲಾಗಿದೆಯೇ ಹೊರತು ಕನ್ನಡ ಕಲಿಕೆ ಕಡ್ಡಾಯಗೊಳಿಸಲು ಶಿಫಾರಸು ಮಾಡಲಾಗಿಲ್ಲ. ಹೀಗಿರುವಾಗ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ. ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಹಾಗೂ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಕನ್ನಡ ಕಲಿಕೆ ಕಡ್ಡಾಯ ಆದೇಶ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ

ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ಆಗ್ರಹಿಸಿ ಹಾಸನದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಪ್ರಕರಣ; ಉನ್ನತ ಶಿಕ್ಷಣ ಸಚಿವರು ಹೇಳಿದ್ದು ಹೀಗೆ

Published On - 4:54 pm, Tue, 26 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ