AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಬಿಸಿ: ಶಿಕ್ಷಣ ಇಲಾಖೆಗೆ ತಲೆನೋವಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಗೈರುಹಾಜರಿ

ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರುಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಹಿಜಾಬ್ ಬಿಸಿ: ಶಿಕ್ಷಣ ಇಲಾಖೆಗೆ ತಲೆನೋವಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಗೈರುಹಾಜರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 31, 2022 | 8:11 AM

Share

ಬೆಂಗಳೂರು: ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರುಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಿಜಾಬ್​ಗಿಂತಲೂ ಪರೀಕ್ಷೆ ಮುಖ್ಯ ಎಂದು ವಿದ್ಯಾರ್ಥಿಗಳು ಬರ್ತಿದ್ದಾರೆ. ಹಿಜಾಬ್ ಗಂಭೀರ ಸಮಸ್ಯೆಯೇ ಇಲ್ಲ ಎಂದು ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳು ವಾದಿಸುತ್ತಿದ್ದಾರೆ. ಆದರೆ ಪರೀಕ್ಷೆಯ ಮೊದಲ ಮತ್ತು ಎರಡನೇ ದಿನ ಪರೀಕ್ಷೆಗೆ ಸಾಲುಸಾಲಾಗಿ ಗೈರು ಹಾಜರಾಗಿದ್ದು ಏಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಪರೀಕ್ಷೆಗೆ ಹಲವು ವಿದ್ಯಾರ್ಥಿಗಳು ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಏನು ಕಾರಣ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ ಸಚಿವರ ಸೂಚನೆ ಮೇರೆಗೆ, ಗೈರು ಹಾಜರಿಗೆ ಸೂಕ್ತ ಕಾರಣ ತಿಳಿದು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಎರಡೂ ದಿನವೂ ಪರೀಕ್ಷೆಗೆ ಎಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂಬ ಬಗ್ಗೆ ಮಕ್ಕಳನ್ನು ಅಥವಾ ಅವರ ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಸಂಗ್ರಹಿಸಿ ತಿಳಿಸಬೇಕು ಎಂದು ಶಿಕ್ಷಣ ಇಲಾಖೆ ಮೌಖಿಕ ಸೂಚನೆ ನೀಡಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯ 2ನೇ ದಿನವಾದ ಬುಧವಾರ (ಮಾರ್ಚ್ 30) ಸಾವಿರಾರು ವಿದ್ಯಾರ್ಥಿಗಳು ಗೈರಾಗಿದ್ದರು. ದ್ವಿತೀಯ ಭಾಷೆ ಇಂಗ್ಲಿಷ್​ಗೆ ಬರೋಬ್ಬರಿ 22,063 ವಿದ್ಯಾರ್ಥಿಗಳು ಗೈರಾಗಿದ್ದರು. ಮೊದಲ ದಿನದ ಪರೀಕ್ಷೆಗಿಂತ ನಿನ್ನೆ ಹೆಚ್ಚು ವಿದ್ಯಾರ್ಥಿಗಳು ಗೈರಾಗಿರುವುದು ಶಿಕ್ಷಣ ಇಲಾಖೆಗೆ ತಲೆನೋವಾಗಿದೆ. ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ 195 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಮೊದಲ ದಿನದ ಪರೀಕ್ಷೆಯಲ್ಲಿ 20,994 ವಿದ್ಯಾರ್ಥಿಗಳು ಗೈರಾಗಿದ್ದರು. ಎರಡನೇ ದಿನದ ಪರೀಕ್ಷೆಯಲ್ಲಿ ಬರೋಬ್ಬರಿ 22,063 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ದ್ವಿತೀಯ ಭಾಷೆಯನ್ನು ಒಟ್ಟು 8,68,206 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 8,46,143 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ

ಹಿಜಾಬ್ ಧರಿಸಿಕೊಂಡು ಎಸ್ಎಸ್ಎಲ್​ಸಿ ಪರೀಕ್ಷೆ(Exam) ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ( Department of Public Education) ಆದೇಶ ನೀಡಿದೆ. 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ(Uniform) ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಾರ್ಚ್ ​15ರಂದು ಕರ್ನಾಟಕ ಹೈಕೋರ್ಟ್​ ತೀರ್ಪು ನೀಡಿದೆ. ಈ ಬೆನ್ನೆಲೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆ ಮಾಡಿದ್ದರು. ಇನ್ನೂ ಕೂಡ ಕೆಲವು ಕಡೆ ಕೋರ್ಟ್​ ತೀರ್ಪಿಗೆ ಅಸಮಾಧಾನವಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಗೈರಾಗಿದ್ದಾರೆ. ಹೀಗಿರುವಾಗಲೇ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಮುಂಬರುವ 2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಿಜಾಬ್​ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ಇದನ್ನೂ ಓದಿ: ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ