Karnataka Hijab Row: ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ; ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದ್ದು ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Karnataka Hijab Row: ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ; ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ
ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
Follow us
TV9 Web
| Updated By: ganapathi bhat

Updated on:Feb 11, 2022 | 9:34 PM

ಬೆಂಗಳೂರು: ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು ಮತ್ತೆ ವಿಸ್ತರಣೆ ಮಾಡಿ ಶುಕ್ರವಾರ (ಫೆಬ್ರವರಿ 11) ಆದೇಶ ನೀಡಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದ್ದು ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭುಗಿಲೆದ್ದಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಅವ್ಯವಸ್ಥೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮೊದಲಿಗೆ ಸೂಕ್ಷ್ಮ ಪರಿಸ್ಥಿತಿ ಇರುವ ಜಿಲ್ಲೆಗಳಾದ ಉಡುಪಿ, ಬಾಗಲಕೋಟೆ, ಮೈಸೂರು, ಮಂಡ್ಯ, ಬೀದರ್ ಜಿಲ್ಲೆಗಳಿಂದ ಮಾಹಿತಿ ಪಡೆದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ. ಸೋಮವಾರ ಹೈಸ್ಕೂಲ್ ಬಳಿ ಕಟ್ಟೆಚ್ಚರ ವಹಿಸಿ. ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಸಂಘಟನೆಗಳ ಮೇಲೆ‌ ನಿಗಾ ಇಡಿ. ಇಲಾಖೆಗಳ‌ ನಡುವೆ ಸಮನ್ವಯತೆ ಇರಲಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು ಹಾಕಿದ್ದಾರೆ. ಬೀದರ್, ಬಾಗಲಕೋಟೆ, ಉಡುಪಿ, ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಹಿಜಾಬ್, ಕೇಸರಿ ಶಾಲು ವಿಚಾರದಲ್ಲಿ ಗಲಾಟೆಯಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಿ ಎಂದು ಹೇಳಿದ್ದಾರೆ.

ಫೆ. 14 ರಿಂದ ರಾಜ್ಯಾದ್ಯಂತ 9, 10ನೇ ತರಗತಿ ಪುನಾರಂಭ; ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು

ರಾಜ್ಯದ ಎಲ್ಲಾ ಡಿಸಿ, ಎಸ್​ಪಿ, ಸಿಇಒ ಜತೆ ಸಿಎಂ ಚರ್ಚಿಸಿದ್ದಾರೆ. ಫೆಬ್ರವರಿ 14 ರಿಂದ ರಾಜ್ಯಾದ್ಯಂತ 9, 10ನೇ ತರಗತಿಗಳು ಪುನಾರಂಭ ಆಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಸೂಕ್ಷ್ಮ ಜಿಲ್ಲೆಗಳಲ್ಲಿ ಡಿಸಿ, ಎಸ್​ಪಿ ಶಾಲೆಗಳಿಗೆ ಭೇಟಿ ನೀಡಬೇಕು. ಶಾಲೆಗಳ ಪ್ರಾಂಶುಪಾಲರು, ಪೋಷಕರ ಜತೆ ಡಿಡಿಪಿಐ ಸಂಪರ್ಕ ಹೊಂದಿರಬೇಕು. ಶಾಂತಿ ಸಭೆ ನಡೆಸಿ ಹೈಕೋರ್ಟ್ ಆದೇಶ ಪಾಲನೆಗೆ ತಿಳಿಸಬೇಕು. ಯಾವುದೇ ಒತ್ತಡಕ್ಕೆ ಸ್ಥಳೀಯ ಆಡಳಿತ ಮಣಿಯಬಾರದು ಎಂದು ಹೇಳಿದ್ದಾರೆ.

ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ಕೊಡಲಾಗಿದೆ. ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಕ್ರಮಕೈಗೊಳ್ಳುವುದು. ಧಾರ್ಮಿಕ ಮುಖಂಡರ ಜತೆ ಶಾಂತಿ ಸಭೆ ನಡೆಸುವುದು. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು ನೀಡುತ್ತೇವೆ. ಪರಿಸ್ಥಿತಿ ಗಮನಿಸಿ ಒಂದೆರಡು ದಿನಗಳಲ್ಲಿ ನಿರ್ಧಾರ ತಿಳಿಸುತ್ತೇವೆ ಎಂದು ಸಿಎಂ ಜತೆ ಸಭೆ ನಂತರ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Karnataka Hijab Row: ಸೋಮವಾರದಿಂದ 9, 10ನೇ ತರಗತಿ ಆರಂಭ; ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ

ಇದನ್ನೂ ಓದಿ: ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ; ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರ ಪಥಸಂಚಲನ

Published On - 9:28 pm, Fri, 11 February 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್