AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBPS SO Prelims Result 2021: ಐಬಿಪಿಎಸ್​ ಎಸ್​ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ; ಜ.30ಕ್ಕೆ ಮುಖ್ಯ ಪರೀಕ್ಷೆ

ಸ್ಪೆಷಲಿಸ್ಟ್ ಆಫೀಸರ್​​ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1828 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಅದರಡಿ ಪೂರ್ವಭಾವಿ ಪರೀಕ್ಷೆಯೊಂದು ಮುಕ್ತಾಯಗೊಂಡಿದೆ. 2021ರ  ನವೆಂಬರ್​ 3ರಿಂದ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು

IBPS SO Prelims Result 2021: ಐಬಿಪಿಎಸ್​ ಎಸ್​ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ; ಜ.30ಕ್ಕೆ ಮುಖ್ಯ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 19, 2022 | 3:20 PM

Share

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್​ ಆಫೀಸರ್​​​ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್​ ತನ್ನ ಅಧಿಕೃತ ವೆಬ್​ಸೈಟ್​​ನಲ್ಲಿ  2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್​ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್​ಸೈಟ್​ಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬಹುದು. ಅಂದಹಾಗೇ, ಫಲಿತಾಂಶ ಜನವರಿ 24ರವರೆಗೂ ವೆಬ್​ಸೈಟ್​ನಲ್ಲಿ ಇರಲಿದೆ.

ರಿಸಲ್ಟ್ ನೋಡುವುದು ಹೇಗೆ? 1. ಮೊದಲು ಐಬಿಪಿಎಸ್​ನ ವೆಬ್​ಸೈಟ್​ https://ibps.in ಗೆ ಭೇಟಿ ನೀಡಿ 2. ಹೋಂ ಪೇಜ್​​ನಲ್ಲಿ ಕಾಣಿಸಿಕೊಳ್ಳುವ IBPS SO Prelims Result 2021 ಎಂಬ ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ಅಲ್ಲಿ ನಿಮ್ಮ ನೋಂದಣಿ ನಂಬರ್​, ಹುಟ್ಟಿದ ದಿನಾಂಕ ನಮೂದಿಸಿ ಸಬ್​ಮಿಟ್​ ಬಟನ್​ ಮೇಲೆ ಕ್ಲಿಕ್​ ಮಾಡಿ 4. ಆಗ ಐಬಿಪಿಎಸ್​ ಎಸ್​ಒ ಪೂರ್ಭಭಾವಿ ಪರೀಕ್ಷೆ 2021ರ ನಿಮ್ಮ ಫಲಿತಾಂಶ ಅಲ್ಲಿ ಕಾಣಿಸಿಕೊಳ್ಳುತ್ತದೆ. 5. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ ಮತ್ತು ಅಗತ್ಯವಿರುವಷ್ಟು ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಐಬಿಪಿಎಸ್​ ಎಸ್​ಒ ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಈ ಪರೀಕ್ಷೆ ಜನವರಿ 30ರಂದು ನಡೆಯಲಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಪಾಸ್​ ಆದವರು ಮುಂದಿನ ಸುತ್ತು ಸಂದರ್ಶನವನ್ನು ಎದುರಿಸಬೇಕಾಗುತ್ತದೆ.  ಸ್ಪೆಷಲಿಸ್ಟ್ ಆಫೀಸರ್​​ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1828 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಅದರಡಿ ಪೂರ್ವಭಾವಿ ಪರೀಕ್ಷೆಯೊಂದು ಮುಕ್ತಾಯಗೊಂಡಿದೆ. 2021ರ  ನವೆಂಬರ್​ 3ರಿಂದ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಡಿಸೆಂಬರ್​ 26ರಂದು ಪೂರ್ಭಾವಿ ಪರೀಕ್ಷೆ ನಡೆದಿತ್ತು. ಡಿಸೆಂಬರ್​ 10ರಂದು ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಅಪ್ಪ, ಅಮ್ಮ, ಅಪ್ಪು ಅವರನ್ನು ಕಳೆದುಕೊಂಡ ನೋವು ಕಾಡುತ್ತಿದೆ’ ಎಂದು ಬರ್ತ್​ಡೇ ಆಚರಣೆಗೆ ದುನಿಯಾ ವಿಜಯ್​ ಬ್ರೇಕ್​

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ